Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : 7 ಗಂಟೆಗಿಂತ ಕಡಿಮೆ `ನಿದ್ರೆ’ ಮಾಡುವವರೇ ಓದಲೇಬೇಕು : ನಿಮ್ಮ ಜೀವಿತಾವಧಿ ಕಡಿಮೆಯಾಗುತ್ತಿದೆ.!

14/01/2026 8:26 AM

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಬಗ್ಗೆ ಸ್ಪೋಟಕ ರಹಸ್ಯ ಬಹಿರಂಗ : ನಿಧಿ 300 ವರ್ಷಗಳಿಗಿಂತ ಹಳೆಯದು.!

14/01/2026 8:22 AM

Heart Attack: ಶೇ. 99ರಷ್ಟು ಹೃದಯಾಘಾತಕ್ಕೆ ಈ 4 ಅಂಶಗಳೇ ಕಾರಣ: ಹೊಸ ಸಂಶೋಧನೆಯಿಂದ ಬಯಲಾದ ಶಾಕಿಂಗ್ ಮಾಹಿತಿ!

14/01/2026 8:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 31-12-2025 ಬುಧವಾರ- ವೈಕುಂಠ ಏಕಾದಶಿಯ ಮಹತ್ವ
KARNATAKA

31-12-2025 ಬುಧವಾರ- ವೈಕುಂಠ ಏಕಾದಶಿಯ ಮಹತ್ವ

By kannadanewsnow5723/12/2025 12:45 PM

“ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರಿದೆ ಎಂದು ತಿಳಿದುಬರುತ್ತದೆ, ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಇನ್ನು “ಏಕಾದಶಿ” ಎಂದರೆ

ಚಾಂದ್ರಮಾನದ ಹನ್ನೊಂದನೆಯ ತಿಥಿ ಎಂದೂ ಸ್ಥೂಲವಾಗಿ ಹೇಳಬಹುದು. “ಏಕಾದಶಿ” ಒಂದು ವ್ರತ.

ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು.

ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು.

ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು.ಅಂದರೆ ಶುಚಿಯಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.

ಇದರಿಂದ ಏಕಕಾಲಕ್ಕೆ ದೇಹಕ್ಕೆ ವಿಶ್ರಾಂತಿ, ಮನಸ್ಸಿಗೆ ಭಗವನ್ನಾಮ ಸ್ಮರಣೆಯಿಂದ ಶಾಂತಿ ದೊರೆಯುತ್ತದೆ.

ಹೀಗೆ ಎಡಬಿಡದೆ ಏಕಾದಶಿವ್ರತ ಮಾಡುವುದರಿಂದ ದೇಹದ ಮತ್ತು ಮನಸ್ಸಿನ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು. ಮಹಾಕವಿ ಕಾಳಿದಾಸ ಹೇಳಿರುವಂತೆ : “ಶರೀರಮಾಧ್ಯಂ ಖಲು ಧರ್ಮಸಾಧನಂ”, ಧರ್ಮ ಸಂಪಾದನೆಗೆ, ಸ್ವಸ್ಥ್ಯ ಶರೀರ ಅತ್ಯಗತ್ಯ.

ವೈಕುಂಠ ಏಕಾದಶಿಯ ಬಗ್ಗೆ ಕಥೆ ಇಂತಿದೆ :

ಭಾಗವತೋತ್ತಮನಾದ ಕೃಷ್ಣಪರಮಾತ್ಮನ ತಂದೆಯಾದ ನಂದಗೋಪನು ಶ್ರೀಕೃಷ್ಣನ ಸಾನಿಧ್ಯದಲ್ಲಿ, ಏಕಾದಶಿಯ ಉಪವಾಸ ಹಾಗೂ ದ್ವಾದಶಿಯ ಪಾರಣೆಗಳನ್ನು ತಪ್ಪದೆ ಆಚರಿಸುತ್ತಿದ್ದನು.

ಒಮ್ಮೆ ಏಕಾದಶಿವ್ರತ ಆಚರಿಸಿ, ಮರುದಿನ ದ್ವಾದಶಿ ಬಹು ಸ್ವಲ್ಪಕಾಲ ಮಾತ್ರ ಇದ್ದುದ್ದರಿಂದ ಬೆಳಗಿನ ಝಾವಕ್ಕೆ ಮೊದಲು ಯಮುನಾನದಿಯಲ್ಲಿ ಸ್ನಾನಕ್ಕಿಳಿದ.

ಅದು ರಾಕ್ಷಸರ ಸಂಚಾರದ ಕಾಲವಾದ್ದರಿಂದ ವರುಣದೇವನ ಸೇವಕನಾದ ರಾಕ್ಷಸ, ನಂದಗೋಪನನ್ನು ವರುಣನ ಬಳಿಗೆ ಎಳೆದೊಯ್ದನು.

ಇತ್ತ ನಂದನು ಎಷ್ಟು ಹೊತ್ತಾದರೂ ಸ್ನಾನಕ್ಕೆ ಹೋದವನು ಬಾರದಿರಲು, ಗೋಪಾಲಕುಲದವರೆಲ್ಲಾ ಬಲರಾಮಕೃಷ್ಣರಿಗೆ ಈ ಸುದ್ಧಿ ಮುಟ್ಟಿಸಿದರು.

ಸರ್ವಜ್ಞನಾದ ಶ್ರೀಕೃಷ್ಣ ಅವರಿಗೆಲ್ಲಾ ಅಭಯವಿತ್ತು ತಂದೆಯವರನ್ನು ಕರೆತರುವುದಾಗಿ ಹೇಳಿ, ವರುಣಲೋಕಕ್ಕೆ ಬಂದನು.

ದೇವದೇವನಾದ ಶ್ರೀಕೃಷ್ಣನಿಗೆ ನಮಿಸಿದ ವರುಣ ತನ್ನ ಸೇವಕನಿಂದಾದ ಅಪರಾಧ ಮನ್ನಿಸಬೇಕೆಂದು ಪ್ರಾರ್ಥಿಸಿದ.

ಶ್ರೀಕೃಷ್ಣ ವರುಣನನ್ನು ಆಶೀರ್ವದಿಸಿ ತಂದೆಯೊಡನೆ ಗೋಕುಲಕ್ಕೆ ಹಿಂದಿರುಗಿದನು.

ನಂದಗೋಪನಿಗೆ ಪರಮಾನಂದವಾಯಿತು.

ವರುಣನ ಲೋಕದ ವೈಭವ ಹಾಗೂ ತನ್ನ ಮಗನಾದ ಶ್ರೀಕೃಷ್ಣನಿಗೆ ಸಿಕ್ಕ ಭವ್ಯಸ್ವಾಗತ ಮುಂತಾದವುಗಳನ್ನು ಎಳೆಎಳೆಯಾಗಿ ಬಣ್ಣಿಸಲಾಗಿ ಗೋಪಾಲರಿಗೆಲ್ಲಾ ಹೆಮ್ಮೆ ಎನಿಸಿತು ಆದರೆ ಶ್ರೀಕೃಷ್ಣ ಸಾಕ್ಷತ್ ಪರಮೇಶ್ವರನೇ ನಿಜ ಆದರೆ ಅವನ ನಿಜ ರೂಪ ಅರಿಯಲಾರೆವು ಎಂದು ಪರಿತಪಿಸಿದರು.

ಇದನ್ನರಿತ ಕೃಷ್ಣ, ಎಲ್ಲರಿಗೂ ಯಮುನಾ ನದಿಯಲ್ಲಿದ್ದ ಬ್ರಹ್ಮಕುಂಡವೆಂಬ ಮಡುವಿನಲ್ಲಿ ಮುಳುಗಿಬರುವಂತೆ ತಿಳಿಸಿದ, ಅದರಂತೆ ಅವರೆಲ್ಲಾ ಮಾಡಲಾಗಿ ಅವರ ಕಣ್ಣಿಗೆ ವೈಕುಂಠ ಕಾಣಿಸಿತು,

ಅವರ ಮನಸ್ಸು ತೃಪ್ತಿಯನ್ನು ಹೊಂದಿತು, ಶ್ರೀಕೃಷ್ಣನು ಪರದೈವವೆಂಬ ಅವರ ನಂಬಿಕೆ ಸ್ಥಿರವಾಯಿತು ಎಲ್ಲರೂ ಧನ್ಯರಾದರು ಬಹುಶಃ ಈ ಕಾರಣಕ್ಕೆ ಏಕಾದಶಿಯನ್ನು “ವೈಕುಂಠಏಕಾದಶಿ” ಎಂದು ಕರೆದಿರಬಹುದೆಂದು ಊಹಿಸಬಹುದು.

ಪುರಾಣಗಳಿಗೆ ಮಹತ್ವವಾದ ಸ್ಥಾನವಿದೆ, ಅವು ಜನಜೀವನಕ್ಕೆ ಹೊಂದಿಕೊಂಡು ಹೋಗುವ ವಿಷಯಗಳನ್ನು ಪ್ರತಿಪಾದಿಸುತ್ತವೆ. ಸಾಮಾನ್ಯಜನರಿಗೆ ಅವುಗಳಿಂದ ಉಪಕಾರವಾಗುತ್ತದೆ.

ಲೋಕೋಪಕಾರಕ್ಕಾಗಿ ವ್ಯಾಸರು ಹದಿನೆಂಟು ಪುರಾಣಗಳನ್ನು ರಚಿಸಿದರು. ಇಂತಹ ಪುರಾಣಗಳಲ್ಲಿ ನಾರದೀಯ ಪುರಾಣ ಸಹ ಒಂದು ನಾರದರ ಪ್ರೇರಣೆಯಿಂದ ಅನೇಕ ಪವಿತ್ರ ಗ್ರಂಥಗಳ, ಪೂಜೆ ಪುನಸ್ಕಾರಗಳು, ವ್ರತಕಥೆಗಳೂ, ಈ ಜಗತ್ತಿಗೆ ಬಂದಿದೆ ಎಂದರೆ ಅತಿಶಯೋಕ್ತಿ ಆಗಲಾರದು, ಇಂತಹ ಪವಿತ್ರ ವ್ರತಗಳಲ್ಲಿ ಅತ್ಯಂತ ಶ್ರೇಷ್ಠವಾದ, ಶ್ರೇಯಸ್ಕರವಾದ, ಸಕಲರೂ ಸುಲಭದಲ್ಲಿ ಆಚರಿಸಲು ಯೋಗ್ಯವಾದ ವ್ರತ ಏಕಾದಶಿ ವ್ರತ.

ಕೃಷ್ಣಾಮೃತಮಹಾರ್ಣವದ ಪ್ರಕಾರ, ಸಕಲ ತೀರ್ಥಕ್ಷೇತ್ರಗಳಿಂದ, ಸಕಲ ಪುಣ್ಯಕ್ಷೇತ್ರಗಳಿಂದ ಲಭಿಸಿದ ಪುಣ್ಯ, ಏಕಾದಶಿಗೆ ಸಮನಾಗಲಾರದು.

ವಸಿಷ್ಠರ ಪ್ರಕಾರ, ಹನ್ನೊಂದು ಇಂದ್ರಿಯಗಳಿಂದ ಸಂಪಾದಿಸಿದ ಸಕಲಪಾಪಗಳನ್ನು ಹನ್ನೊಂದನೆಯ ತಿಥಿಯಾದ ಏಕಾದಶಿಯು ಪರಿಹರಿಸುತ್ತದೆ, ಆದ್ದರಿಂದ ಏಕಾದಶಿಗೆ ಸಮವಾದ ಪಾವನವಾದದ್ದು ಯಾವುದೂ ಇಲ್ಲ.

ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು.

ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ. ಅಲ್ಲದೇ ವೈಕುಂಠ ಏಕಾದಶಿಯ ಪವಿತ್ರ ದಿನ ಅಭ್ಯಂಜನ ಮಾಡಿ, ಶ್ರೀನಿವಾಸ ಉತ್ಸವ ಮೂರ್ತಿಯ ಜೋಕಾಲಿಗೆ ತಲೆ ತಾಕಿಸಿ, ವೈಕುಂಠದ್ವಾರದಿಂದ ಹೊರಬಂದರೆ ಮುಕ್ತಿ ಕಟ್ಟಿಟ್ಟ ಬುತ್ತಿ ಅನ್ನುವ ನಂಬಿಕೆಯೂ ಇದೆ..

ವೈಕುಂಠ ಏಕಾದಶಿ…!!!

ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ.

ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂದು ವೈಷ್ಣವ ಆಲಯಗಳಲ್ಲಿ ಉತ್ತರ ದ್ವಾರದ ಬಳಿ ಮುಂಜಾನೆ ಭಗವಂತನ ದರ್ಶನಕ್ಕಾಗಿ ಕಾದಿರುತ್ತಾರೆ.

ಈ ದಿನ ಮಹಾವಿಷ್ಣು ಗರುಡ ವಾಹನದ ಮೇಲೆ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದುಬಂದು ಭಕ್ತರಿಗೆ ದರ್ಶನ ನೀಡುತ್ತಾನೆ.

ಆದಕಾರಣ ಇದಕ್ಕೆ ಮುಕ್ಕೋಟಿ ಏಕಾದಶಿ ಎಂಬ ಹೆಸರು ಬಂದಿದೆ.

ಈ ಒಂದು ಏಕಾದಶಿ ಮೂರು ಕೋಟಿ ಏಕಾದಶಿಗಳಿಗೆ ಸಮವಾದ ಪವಿತ್ರತೆಯನ್ನು ಹೊಂದಿರುವ ಕಾರಣ ಇದನ್ನು ಮುಕ್ಕೋಟಿ ಏಕಾದಶಿ ಎನ್ನುತ್ತಾರೆ.

ಮುಕ್ಕೋಟಿ ಏಕಾದಶಿ ದಿನ ಹಾಲಾಹಲ, ಅಮೃತ ಎರಡೂ ಹುಟ್ಟಿದವು. ಈ ದಿನವೇ ಶಿವನು ಹಾಲಾಹಲ ನುಂಗಿದ. ಮಹಾಭಾರತ ಯುದ್ಧದಲ್ಲಿ ಭಗವದ್ಗೀತೆಯನ್ನು ಕೃಷ್ಣನು ಅರ್ಜುನನಿಗೆ ಇದೇ ದಿನ

ಉಪದೇಶಿಸಿದ ಎಂಬ ನಂಬಿಕೆ ಇದೆ.

ಈ ದಿನ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆಗಳು , ಹೋಮ, ಹವನ ಜಪ ,ತಪಗಳು ನಡೆಯುತ್ತವೆ .ಈ ದಿನ ಉಪವಾಸ ಹಾಗು ಜಾಗರಣೆ ಮಾಡಿದರೆ ಒಳ್ಳೆಯದಂತೆ .

ವಿಷ್ಣು ಪುರಾಣದ ಪ್ರಕಾರ ಇಬ್ಬರು ರಾಕ್ಷಸರು ತನಗೆ ವಿರೋದ ವಾಗಿದ್ದರೂ ವೈಕುಂಠ ಏಕಾದಶಿ ದಿನ ತನ್ನ ಬಾಗಿಲನ್ನು ತೆರೆದಿರುತ್ತಾನಂತೆ ಈ ಕತೆಯನ್ನು ಕೇಳಿದವರಿಗೆ ಮೋಕ್ಷ ಪ್ರಾಪ್ತಿಯಾಗುವಂತೆ ವೈಕುಂಠದ ಬಾಗಿಲನ್ನು ತೆರೆದಿಡುವಂತೆ ಬೇಡಿಕೊಳ್ಳುತ್ತಾರೆ.

ಆದುದರಿಂದ ಎಲ್ಲಾ ವಿಷ್ಣು ದೇವಾಲಯದ ಬಾಗಿಲುಗಳನ್ನು ಆ ದಿನ ತೆಗೆದಿರುತ್ತಾರೆ . ಮಾಮೂಲಿ ದಿನಗಳಲ್ಲಿ ಉತ್ತರ ದ್ವಾರಗಳನ್ನು ಮುಚ್ಚಿರುತ್ತಾರೆ .

ಆದರೆ, ವೈಕುಂಠ ಏಕಾದಶಿದಿನ ಬಾಗಿಲನ್ನು ತೆರೆದಿರುತ್ತಾರೆ .

ವೈಕುಂಠ ಏಕಾದಶಿ ದಿನ ತಿರುಮಲೆಯ ದೇವಾಲಯದಲ್ಲಿರುವ ಉತ್ತರ ದ್ವಾರವನ್ನು ತೆರೆದಿರುತ್ತಾರೆ. ಪದ್ಮ ಪುರಾಣದ ಪ್ರಕಾರ ವಿಷ್ಣುವಿನಿಂದ ಬಂದ ಶಕ್ತಿಯಿಂದ ಮೊರಾ ಎಂಬ ರಾಕ್ಷಸನನ್ನು ಸಂಹರಿಸಿದ ದಿನವಂತೆ .

ಮುಕ್ಕೋಟಿ ಏಕಾದಶಿ ದಿನದಂದು ಅಂದರೆ ಧನುರ್ಮಾಸ ಶುಕ್ಲ ಏಕಾದಶಿ ದಿನದಂದು ಉಪಾಸವಿರ ಬೇಕಂತೆ ಇದಕ್ಕೆ ಕಾರಣವೇನೆಂದರೆ..

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಮೊರಾ ಎಂಬ ರಾಕ್ಷಸನು ಅಂದು ಅಕ್ಕಿಯಲ್ಲಿ ಅಡಗಿ ಕುಳಿತಿರುತ್ತಾನಂತೆ ಆದುದರಿಂದ ಅಂದು ಅಕ್ಕಿಯಿಂದ ಮಾಡಿದ ಯಾವುದೇ ಪದಾರ್ಥವನ್ನು ತಿನ್ನ ಬಾರದು .

ಮುಕ್ಕೋಟಿ ಏಕಾದಶಿ ಒಂದು ದಿನ ಉಪವಾಸ ವಿದ್ದರೆ ಮಿಕ್ಕ 23 ಏಕಾದಶಿಗಳಲ್ಲಿ ಉಪವಾಸ ವಿದ್ದಂತೆಯೇ ಎಂದು ವಿಷ್ಣು ಪುರಾಣದಲ್ಲಿ ಹೇಳಲಾಗಿದೆ.

31-12-2025 - Significance of Vaikuntha Ekadashi Wednesday
Share. Facebook Twitter LinkedIn WhatsApp Email

Related Posts

ALERT : 7 ಗಂಟೆಗಿಂತ ಕಡಿಮೆ `ನಿದ್ರೆ’ ಮಾಡುವವರೇ ಓದಲೇಬೇಕು : ನಿಮ್ಮ ಜೀವಿತಾವಧಿ ಕಡಿಮೆಯಾಗುತ್ತಿದೆ.!

14/01/2026 8:26 AM1 Min Read

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಬಗ್ಗೆ ಸ್ಪೋಟಕ ರಹಸ್ಯ ಬಹಿರಂಗ : ನಿಧಿ 300 ವರ್ಷಗಳಿಗಿಂತ ಹಳೆಯದು.!

14/01/2026 8:22 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು.!

14/01/2026 7:59 AM1 Min Read
Recent News

ALERT : 7 ಗಂಟೆಗಿಂತ ಕಡಿಮೆ `ನಿದ್ರೆ’ ಮಾಡುವವರೇ ಓದಲೇಬೇಕು : ನಿಮ್ಮ ಜೀವಿತಾವಧಿ ಕಡಿಮೆಯಾಗುತ್ತಿದೆ.!

14/01/2026 8:26 AM

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಬಗ್ಗೆ ಸ್ಪೋಟಕ ರಹಸ್ಯ ಬಹಿರಂಗ : ನಿಧಿ 300 ವರ್ಷಗಳಿಗಿಂತ ಹಳೆಯದು.!

14/01/2026 8:22 AM

Heart Attack: ಶೇ. 99ರಷ್ಟು ಹೃದಯಾಘಾತಕ್ಕೆ ಈ 4 ಅಂಶಗಳೇ ಕಾರಣ: ಹೊಸ ಸಂಶೋಧನೆಯಿಂದ ಬಯಲಾದ ಶಾಕಿಂಗ್ ಮಾಹಿತಿ!

14/01/2026 8:16 AM

ಇನ್ಮುಂದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಕೇವಲ ದಂಡವಲ್ಲ, ವಿಮೆ ಕೂಡ ದುಬಾರಿ!

14/01/2026 8:00 AM
State News
KARNATAKA

ALERT : 7 ಗಂಟೆಗಿಂತ ಕಡಿಮೆ `ನಿದ್ರೆ’ ಮಾಡುವವರೇ ಓದಲೇಬೇಕು : ನಿಮ್ಮ ಜೀವಿತಾವಧಿ ಕಡಿಮೆಯಾಗುತ್ತಿದೆ.!

By kannadanewsnow5714/01/2026 8:26 AM KARNATAKA 1 Min Read

ಆರೋಗ್ಯಕರ ಜೀವನಕ್ಕೆ ಸರಿಯಾದ ನಿದ್ರೆ ಎಷ್ಟು ಮುಖ್ಯ ಎಂಬುದನ್ನು ವಿವರಿಸುವ ಅಮೆರಿಕದ ಒರೆಗಾನ್ ವಿಶ್ವವಿದ್ಯಾಲಯದ ಸಂಶೋಧಕರ ಇತ್ತೀಚಿನ ಸಂಶೋಧನೆಗಳು ಇಲ್ಲಿವೆ.…

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಬಗ್ಗೆ ಸ್ಪೋಟಕ ರಹಸ್ಯ ಬಹಿರಂಗ : ನಿಧಿ 300 ವರ್ಷಗಳಿಗಿಂತ ಹಳೆಯದು.!

14/01/2026 8:22 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು.!

14/01/2026 7:59 AM

ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಭರ್ಜರಿ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

14/01/2026 7:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.