ಕೆಎನ್‌ಎನ್‌ಡಿಜಿಟಲ್‌ ಡೆಸ್ಕ್‌ : ಕಾಮನ್ವೆಲ್ತ್‌ ಕ್ರೀಡಾಕೂಟದಲ್ಲಿ 55 ಕೆಜಿ ವಿಭಾಗ ವೇಟ್ ಲಿಫ್ಟಿಂಗ್‌ನಲ್ಲಿ ಸ್ಪರ್ಧೆಯಲ್ಲಿ ಭಾರತದ ಭಾರತದ ಸಂಕೇತ್ ಸರ್ಗರ್ ಬೆಳ್ಳಿ ಪದಕ ಗೆದ್ದಿದ್ದಾರೆ.

ಮಹಾರಾಷ್ಟ್ರ ಮೂಲದ ಸಂಕೇತ್ ಸರ್ಗರ್ ಜುಲೈ 30ರ ಶನಿವಾರದಂದು 2022ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ಇತಿಹಾಸವನ್ನ ಬರೆದಿದ್ದಾರೆ. ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಪುರುಷರ 55 ಕೆಜಿ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ 21 ವರ್ಷದ ಅವ್ರು ಬೆಳ್ಳಿ ಪದಕ ಗೆದ್ದರು.

ಪುರುಷರ 55 ಕೆಜಿ ವಿಭಾಗದಲ್ಲಿ ಸಂಕೇತ್ ಸರ್ಗರ್ ಒಟ್ಟು 248 ಕೆಜಿ (ಸ್ನ್ಯಾಚ್ನಲ್ಲಿ 113 ಕೆಜಿ, ಕ್ಲೀನ್ ಮತ್ತು ಜರ್ಕ್ನಲ್ಲಿ 135 ಕೆಜಿ) ನೊಂದಿಗೆ ಬೆಳ್ಳಿ ಪದಕ ಗೆದ್ದಿದ್ದು, ಮಲೇಷ್ಯಾದ ಅನಿಕ್ ಮೊಹಮ್ಮದ್  ಸಂಕೇತ್‌ರನ್ನ ಹಿಂದಿಕ್ಕಿ, ಒಟ್ಟು 249 ಕೆಜಿ (ಸ್ನ್ಯಾಚ್ನಲ್ಲಿ 107 ಕೆಜಿ, ಕ್ಲೀನ್ ಮತ್ತು ಜರ್ಕ್ನಲ್ಲಿ 142 ಕೆಜಿ) ಚಿನ್ನದ ಪದಕವನ್ನ ಪಡೆದರು.

ಅಂದ್ಹಾಗೆ, ಖೇಲೋ ಇಂಡಿಯಾ ಯೂತ್ ಗೇಮ್ಸ್ ಮತ್ತು 2020ರಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಆಗಿದ್ದ ರಾಷ್ಟ್ರೀಯ ಚಾಂಪಿಯನ್ ಸಂಕೇತ್ ಸರ್ಗರ್, ವೇಟ್ಲಿಫ್ಟಿಂಗ್ನಲ್ಲಿ ಭಾರತಕ್ಕೆ ಪದಕ ಗೆಲ್ಲುವ ನೆಚ್ಚಿನ ಆಟಗಾರರಲ್ಲಿ ಒಬ್ಬರಾಗಿದ್ದರು.

Share.
Exit mobile version