ಚಿತ್ರದುರ್ಗ: ನಗರದ ಹಿಂದೂ ಮಹಾಗಣಪತಿ ಶೋಭಾಯಾತ್ರೆ ವೇಳೆಯಲ್ಲಿ 9 ಡಿಜೆ ಬಳಕೆ ಮಾಡಲಾಗುತ್ತಿದೆ. ಆ ಮೂಲಕ ಅದ್ಧೂರಿಯಾಗಿ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯಲಿದೆ ಎನ್ನುವಂತ ಪೋಸ್ಟ್ ವೈರಲ್ ಆಗಿತ್ತು. ಆ ಬಗ್ಗೆ ಚಿತ್ರದುರ್ಗ ಪೊಲೀಸ್ ಇಲಾಖೆ ಸ್ಪಷ್ಟನೆ ಏನು ಅಂತ ಮುಂದೆ ಓದಿ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಚಿತ್ರದುರ್ಗಾ ಜಿಲ್ಲಾ ಪೊಲೀಸ್ ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕ:13.09.2025 ರಂದು ಚಿತ್ರದುರ್ಗ ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ವಿವಿಧ ಕಡೆಯಿಂದ 9 DJ ತರಿಸಲಾಗುತ್ತಿದೆ ಎಂಬುದಾಗಿ ಪೊಸ್ಟ್ ಹರಿದಾಡುತ್ತಿರುತ್ತದೆ ಎಂದು ತಿಳಿಸಿದೆ.
ಸದರಿ ಮಾಹಿತಿ ಸತ್ಯಕ್ಕೆ ದೂರವಾಗಿರುತ್ತದೆ ಹಾಗೂ ಈ ವಿಷಯಕ್ಕೆ ಸಂಬಂಧಿಸದಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ಯಾವುದೇ ಡಿಜೆ ಬಳಕೆಗೆ ಅನುಮತಿ ನೀಡಿರುವುದಿಲ್ಲ. ಆದ್ದರಿಂದ ಈ ರೀತಿಯ ಸುಳ್ಳು ಸುದ್ದಿಗಳನ್ನು ಸಾರ್ವಜನಿಕರು ನಂಬಬಾರದೆಂದು ಜಿಲ್ಲಾ ಪೊಲೀಸ್ ವತಿಯಿಂದ ಸೂಚಿಸಲಾಗಿರುತ್ತದೆ ಎಂದು ಸ್ಪಷ್ಟ ಪಡಿಸಿದೆ.
ಈ ರೀತಿ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದುದರಿಂದ ಈ ರೀತಿಯ ಸಂದೇಶಗಳ ಬಗ್ಗೆ ಸಾರ್ವಜನಿಕರು ಸತ್ಯಾಸತ್ಯತೆಯನ್ನು ಪರಿಶೀಸುವುದು ಎಂಬುದಾಗಿ ತಿಳಿಸಿದೆ.
ಮದ್ದೂರು ಕಲ್ಲು ತೂರಾಟ ಪ್ರಕರಣದಲ್ಲಿ 21 ಆರೋಪಿಗಳು ಅರೆಸ್ಟ್: ಸಿಎಂ ಸಿದ್ದರಾಮಯ್ಯ
BREAKING : ನೇಪಾಳದಲ್ಲಿ ಸಾಮಾಜಿಕ ಮಾಧ್ಯಮ ನಿಷೇಧ ವಿರೋಧಿಸಿ ಬೃಹತ್ ಪ್ರತಿಭಟನೆ ; ಒರ್ವ ಸಾವು, 80 ಜನರಿಗೆ ಗಾಯ








