ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಯುದ್ದ ಭೀತಿಯ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಭದ್ರತಾ ಕ್ಯಾಬಿನೆಟ್ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ವ್ಯಾಪಾರ ಮತ್ತು ಪೂರೈಕೆಯ ಮೇಲೆ ಅದರ ಪರಿಣಾಮದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಏಷ್ಯಾದಲ್ಲಿ ಭದ್ರತಾ ಪರಿಸ್ಥಿತಿಯ ಉಲ್ಬಣದ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ ಮತ್ತು ಸಂಘರ್ಷವು ವ್ಯಾಪಕ ಪ್ರಾದೇಶಿಕ ಆಯಾಮವನ್ನು ತೆಗೆದುಕೊಳ್ಳಬಾರದು ಎಂದು ಹೇಳಿದೆ.
ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಅದು ಕರೆ ನೀಡಿದೆ