ಕೆಎನ್ಎನ್ಡಿಜಿಟಲ್ ಡೆಸ್ಕ್ : ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ್ದು, ಸಧ್ಯ ಅರ್ಪಿತಾ ಮುಖರ್ಜಿ ಬಂಧಿಸಿದೆ.
ದಾಳಿಗಳು ಪ್ರಾರಂಭವಾದ ಒಂದು ದಿನದ ನಂತರ ಶನಿವಾರ ಬೆಳಿಗ್ಗೆ ಅರ್ಪಿತಾ ಮುಖರ್ಜಿಯನ್ನ ಬಂಧಿಸಲಾಗಿದೆ. ಇಡಿ ಶುಕ್ರವಾರ ದಾಳಿ ಆರಂಭಿಸಿದ್ದು, ಅರ್ಪಿತಾ ಮುಖರ್ಜಿ ಮನೆಯಿಂದ ಸುಮಾರು 21 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಅಂದ್ಹಾಗೆ, ಇದಕ್ಕೂ ಮುನ್ನ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರದ ಪಶ್ಚಿಮ ಬಂಗಾಳದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿಯವ್ರನ್ನ ಜುಲೈ 23ರ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.