ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸೋಮವಾರ ಒಂದೇ ದಿನ 840 ಹೊಸ ಕೇಸ್ಗಳು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ಜನರು ಜಾಗರೂಕರಾಗಿರಬೇಕು ಮತ್ತು ಮನೆಯ ಸುತ್ತಮುತ್ತ ನೀರು ಸಂಗ್ರಹವಾಗದಂತೆ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಮಲಗುವ ವೇಳೆ ಸೊಳ್ಳೆ ಪರದೆಗಳನ್ನು ಬಳಸಬೇಕು ಎಂದು ಆರೋಗ್ಯ ಅಧಿಕಾರಿಗಳು ಮತ್ತು ವೈದ್ಯರು ಸೂಚಿಸಿದ್ದಾರೆ.
ಪ್ರಸ್ತುತ, 541 ರೋಗಿಗಳು ಡೆಂಗ್ಯೂವಿನಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉತ್ತರ 24 ಪರಗಣಗಳು, ಹೌರಾ, ಕೋಲ್ಕತ್ತಾ, ಹೂಗ್ಲಿ, ಮುರ್ಷಿದಾಬಾದ್, ದಕ್ಷಿಣ 24 ಪರಗಣಗಳು, ಜಲ್ಪೈಗುರಿ ಮತ್ತು ಡಾರ್ಜಿಲಿಂಗ್ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ.