ಚಾಮರಾಜನಗರ : ಕೇರಳ ರಾಜ್ಯದಲ್ಲಿ ವೆಸ್ಟ್ ನೈಲ್ ಜ್ವರದ ಪ್ರಕಣ ಹೆಚ್ಚುತ್ತಿರುವುದರಿಂದ ರಾಜ್ಯದ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ರಾಜ್ಯದ ಗಡಿ ಪ್ರದೇಶವಾದ ಮೂಲೆಹೊಳೆ ಚೆಕ್ ಪೋಸ್ಟ್ ನಲಿ ತಾಲೂಕು ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಬಳಿಯ ಕಾಡಂಚಿನ ಗ್ರಾಮಗಳ ಜನರಿಗೆ ವೆಸ್ಟ್ ನೈಲ್ ಬಗ್ಗೆ ಆರೋಗ್ಯ ಸಿಬ್ಬಂದಿ ಅರಿವು ಮೂಡಿಸಿದ್ದಾರೆ.
ವೆಸ್ಟ್ ನೈಲ್ ಸೋಮಕು ಜ್ವರ, ವೈರಾಣವಿನಿಂದ ಬರುವ ರೋಗವಾಗಿದ್ದು, ಸೊಳ್ಳೆಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಅಧಿಕ ಜ್ವರ, ತಲೆನೋವು, ಮೈ-ಕೈ ನೋವು, ಕೀಲು ನೋವು ನಡುಕ, ಸೆಳೆತ ಮತ್ತು ಸ್ನಾಯು ದೌರ್ಬಲ್ಯ ಉಂಟಾದವರು ಕೂಡಲೇ ತಪಾಸಣೆ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.