ರಾಯಚೂರು : ರಾಜ್ಯದ ಹಲವು ಜಿಲ್ಲೆಯಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ರೀತಿ ಮೂಲಭೂತ ಸೌಕರ್ಯಗಳು ಇಲ್ಲ. ಸರಿಯಾದ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಜೊತೆಗೆ ನೀರು ಹಾಗೂ ವಿದ್ಯುತ್ ನಂತಹ ಮೂಲಭೂತ ಸೌಕರ್ಯಗಳೇ ಇಲ್ಲ.
ಇದಕ್ಕೆ ಪೂರಕವೆಂಬಂತೆ ಜನರೇಟರ್ ಕೆಟ್ಟಿದ್ದರಿಂದ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿರುವ ಘಟನೆ ರಾಯಚೂರಿನಲ್ಲಿ ಬೆಳಕಿಗೆ ಬಂದಿದೆ. ಹೌದು ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಘಟನೆ ನಡೆದಿದೆ.
ಆಸ್ಪತ್ರೆಯ ಸೌರ ಘಟಕಗಳು, ಜನರೇಟರ್ ಕೆಟ್ಟು ಹೋಗಿದ್ದರಿಂದ ರಾತ್ರಿ ವೇಳೆ ರೋಗಿಗಳಿಗೆ ಮೊಂಬತ್ತಿ ಹಾಗೂ ಮೊಬೈಲ್ ಟಾರ್ಚ್ ಮೂಲಕವೇ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ ಟ್ಟಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ, ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸಿದ್ದಾರೆ.