ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಚನ್ನಪಟ್ಟಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಈ ಒಂದು ಉಪಚುನಾವಣೆಗೆ ಈಗಾಗಲೇ ಕಮಿಟಿ ಒಂದನ್ನು ರಚನೆ ಮಾಡಿದ್ದೇವೆ ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದ ಉಪಚುನಾವಣೆಗಾಗಿ ಈಗಾಗಲೇ ಕಮಿಟಿಯನ್ನು ರಚಿಸಿದ್ದೇವೆ. ಕಮಿಟಿಯಲ್ಲಿ ಸಾಕಷ್ಟು ಸಚಿವರು ಶಾಸಕರು ಇದ್ದಾರೆ. ಅಭ್ಯರ್ಥಿ ಆಯ್ಕೆ ಬಗ್ಗೆ ಎಲ್ಲರೂ ಸೇರಿ ತೀರ್ಮಾನಿಸುತ್ತಾರೆ ಎಂದು ತಿಳಿಸಿದರು.

ಈ ಒಂದು ಕಮಿಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ಸೇರಿದಂತೆ ಹಲವರು ಚರ್ಚಿಸಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳುತ್ತೇವೆ. ನನ್ನ ಸ್ಪರ್ಧೆ ಬಗ್ಗೆಯೂ ಕಮಿಟಿ ತೀರ್ಮಾನ ಮಾಡುತ್ತೆ.ಸೂಕ್ತ ಅಭ್ಯರ್ಥಿ ಬಗ್ಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಚನ್ನಪಟ್ಟಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.

Share.
Exit mobile version