ಬೆಂಗಳೂರು : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯುತ್ತಮ ಅಭ್ಯರ್ಥಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಲೋಕಸಭೆಗೆ ನಂಬರ್ ಒನ್ ಅಭ್ಯರ್ಥಿ. ಇಬ್ಬರ ಬಗ್ಗೆಯೂ ಸಮೀಕ್ಷೆ ಮಾಡಿಸಿ, ಉತ್ತಮ ಕ್ಷೇತ್ರ ಕೊಡಲಿ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿಕೆ ನೀಡಿದ್ದಾರೆ.
ಇನ್ನು ಸಚಿವ ಮಹದೇವಪ್ಪ ಹೇಳಿಕೆಗೆ ಇದೀಗ ಡಿಕೆ ಬ್ರದರ್ಸ್ ಪ್ರತಿಕ್ರಿಯೆ ನೀಡಿದ್ದು,ಡಿಕೆ ಸುರೇಶ್ HC ಮಹದೇವಪ್ಪ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಸಚಿವ ಎಚ್ ಸಿ ಮಾದೇವಪ್ಪ ಅವರು ಒಳ್ಳೆಯ ಸಲಹೆಯನ್ನು ಕೊಟ್ಟಿದ್ದಾರೆ.ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಮಾಡಲಿದೆ ಎಂದರು. ಇನ್ನು ಇದೇ ವಿಷಯವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಹೌದು ಹೌದು ಅವರು ಹೇಳಿದ್ದು ನಿಜ ಎಂದು ಸ್ಪಷ್ಟಪಡಿಸಿದರು.
ಇನ್ನು 2-3 ವರ್ಷದಲ್ಲಿ ಪ್ರಧಾನಿ ಮೋದಿಯನ್ನು ಕೊಲ್ತೇವೆ: ಸಿಖ್ ರೈತನ ಧಮ್ಕಿ | Watch Video
ಈ ಕುರಿತಾಗಿ HC ಮಹದೇವಪ್ಪ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯುತ್ತಮ ಅಭ್ಯರ್ಥಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಲೋಕಸಭೆಗೆ ನಂಬರ್ ಒನ್ ಅಭ್ಯರ್ಥಿ ಎಂದು ಹೇಳಿಕೆ ನೀಡಿದ್ದಾರೆ.
ಅಗತ್ಯ ಬಿದ್ದರೆ ಸಚಿವರು ತ್ಯಾಗಕ್ಕೆ ಸಿದ್ಧರಾಗಬೇಕಾಗುತ್ತದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಕುರಿತ ಪ್ರಶ್ನೆಗೆ ತಾಳ್ಮೆ ಕಳೆದುಕೊಂಡ ಮಹದೇವಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರೇ ಈ ಹೇಳಿಕೆ ನೀಡಿದರು. ಜತೆಗೆ, ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸಿದ್ದರಾಮಯ್ಯ ಎದುರೇ ಸ್ಪಷ್ಟಪಡಿಸಿದರು. ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರು.
ಇದು ಜಿಂದಾಬಾದ್ ಕೂಗುವ ಕಾರ್ಯಕ್ರಮವಲ್ಲ : ಕೈ ಕಾರ್ಯಕರ್ತರ ಘೋಷಣೆಗೆ ಕಿಡಿ ಕಾರಿದ ಶಾಸಕ ಮುನಿರತ್ನ
ನನಗಾಗಲಿ ಅಥವಾ ನನ್ನ ಪುತ್ರ ಸುನಿಲ್ ಬೋಸ್ಗಾಗಲಿ ಟಿಕೆಟ್ ಕೊಡಿ ಎಂದು ಜನರೇ ಹೇಳುತ್ತಿದ್ದಾರೆ. ಆದರೆ, ನಾನು ಸ್ಪರ್ಧಿಸುವುದಿಲ್ಲ. ಪುತ್ರನಿಗೆ ಟಿಕೆಟ್ ನೀಡಿ ಎಂದೂ ಕೇಳಲ್ಲ. ಅದು ಹೈಕಮಾಂಡ್ಗೆ ಬಿಟ್ಟ ವಿಚಾರ’ ಎಂದು ಹೇಳಿದರು. ನನ್ನ ಮಗನ ಹೆಸರು ಪ್ಯಾನೆಲ್ನಲ್ಲಿ ಇದೆ. ಮೂರು ಚುನಾವಣೆಯಲ್ಲಿ ಆತ ಆಕಾಂಕ್ಷಿಯಾಗಿದ್ದ. ಪಕ್ಷ ಅವಕಾಶ ನೀಡದಿದ್ದರೂ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಅವಕಾಶ ನೀಡುವುದು ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಮಹದೇವಪ್ಪ ಅವರು ಸ್ಪಷ್ಟಪಡಿಸಿದರು.
ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗುತ್ತಾರೆ,ಇದರಲ್ಲಿ ಯಾವುದೇ ಅನುಮಾನವಿಲ್ಲ: ‘ಅಮಿತ್ ಶಾ’