Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದ 183 ಗ್ರಾಮಗಳಲ್ಲಿ ನೀರಿನ ಸಮಸ್ಯೆ, ಟ್ಯಾಂಕರ್ ಮೂಲಕ ನೀರು ಸರಬರಾಜು ವ್ಯವಸ್ಥೆ

10/03/2026 5:22 PM

BREAKING : ಟಿ20 ‘ವಿಶ್ವಕಪ್ ಫೈನಲ್’ನಲ್ಲಿ ಐಸಿಸಿ ನೀತಿ ಸಂಹಿತೆ ಉಲ್ಲಂಘನೆ ; ‘ಅರ್ಷ್ದೀಪ್ ಸಿಂಗ್’ಗೆ ಪಂದ್ಯ ಶುಲ್ಕದ 15% ದಂಡ!

10/03/2026 5:19 PM

ಟೀಂ ಇಂಡಿಯಾ ವೇಗಿ ಅರ್ಷದೀಪ್​ ಸಿಂಗ್​ಗೆ ICC ಬಿಗ್ ಶಾಕ್: ಪಂದ್ಯ ಶುಲ್ಕದ ಶೇ.15ರಷ್ಟು ದಂಡ

10/03/2026 5:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮಾಡಿದ್ದೇನು ಹೇಳಿ: ಸಿ.ಎಂ ಸಿದ್ದರಾಮಯ್ಯ ಪ್ರಶ್ನೆ !
KARNATAKA

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮಾಡಿದ್ದೇನು ಹೇಳಿ: ಸಿ.ಎಂ ಸಿದ್ದರಾಮಯ್ಯ ಪ್ರಶ್ನೆ !

By kannadanewsnow0720/04/2024 4:59 PM

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರ ಗೆಲುವು ಶತಸಿದ್ಧ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳನ್ನಾಡಿದರು.

ಮಂಡ್ಯ ಲೋಕಸಭಾ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರವಾಗಿ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಒಮ್ಮನಸ್ಸಿನಿಂದ, ಒಟ್ಟಿಗೇ ಕಾಂಗ್ರೆಸ್ ಗೆಲ್ಲಿಸಲು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬೀಳುವುದು ಖಚಿತ ಎಂದರು.

ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರು ಮಾಡಿದ್ದೇನು?

ಕೆಂಪೇಗೌಡ ಜಯಂತಿ ಆರಂಭಿಸಿದ್ದು ನಾವು, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ನಾವು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಟ್ಟಿದ್ದು ನಾವು: ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮಾಡಿದ್ದೇನು ಹೇಳಿ ಎಂದು ಸಿ.ಎಂ ಪ್ರಶ್ನಿಸಿದರು.

ಪ್ರತಾಪ್ ಸಿಂಹ, ಸದಾನಂದಗೌಡರಿಗೆ ಟಿಕೆಟ್ ತಪ್ಪಿಸಿ ಒಕ್ಕಲಿಗರಿಗೆ ಅನ್ಯಾಯ ಮಾಡಿದ್ದು ಯಾರು ದೇವೇಗೌಡರೇ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಒಕ್ಕಲಿಗ ಸಮುದಾಯದ ನಾಯಕರಿಗೆ ಅತಿ ಹೆಚ್ಚು ಅನ್ಯಾಯ ಆಗಿರುವುದು ಬಿಜೆಪಿ, ಜೆಡಿಎಸ್ ನಿಂದಲೇ ಎಂದು ವಿವರಿಸಿದರು.

ಕೆ.ಆರ್.ಪೇಟೆ ಕೃಷ್ಣರನ್ನು ಸ್ಮರಿಸಿ ಶ್ಲಾಘಿಸಿದ ಸಿಎಂ

ಕೆ.ಆರ್.ಪೇಟೆ ಕೃಷ್ಣ ಅವರು ಅತ್ಯಂತ ಸಜ್ಜನರೂ, ಜನಪರ ಕಾಳಜಿ ಇದ್ದವರೂ ಆಗಿದ್ದರು. ಇವರನ್ನು ಮಂತ್ರಿ ಮಾಡಬೇಕು ಎನ್ನುವ ಇಚ್ಚೆ ನಮಗೆಲ್ಕರಿಗೂ ಇತ್ತು.‌ ಆದರೆ, ಮಂತ್ರಿ ಮಾಡಲು ದೇವೇಗೌಡರು ಒಪ್ಪಿರಲಿಲ್ಲ. ಆಗ ಸ್ಪೀಕರ್ ಆಗಲು ಸಲಹೆ ನೀಡಿದೆ ಎಂದು ತಮ್ಮ ಮತ್ತು ಕೆ.ಆರ್.ಪೇಟೆ ಕೃಷ್ಣ ಅವರ ನಡುವಿನ ಒಡನಾಟವನ್ನು ಸ್ಮರಿಸಿದರು.

ಮೋದಿ ಅವರು ಹೇಳಿದ್ದರಲ್ಲಿ ಒಂದೇ ಒಂದು ಭರವಸೆ ಈಡೇರಿಸಿದ್ದರೆ ತೋರಿಸಲಿ ನೋಡೋಣ: ಸಿ.ಎಂ.ಸವಾಲು

ಮೋದಿ ಅವರು ಹೇಳಿದ್ದರಲ್ಲಿ ಒಂದೇ ಒಂದು ಭರವಸೆಯನ್ನು ಈಡೇರಿಸಿದ್ದರೆ ತೋರಿಸಲಿ ನೋಡೋಣ ಎಂದು ಸಿ.ಎಂ ಸವಾಲು ಹಾಕಿದರು.

ಕೇವಲ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ವಂಚಿಸುವುದರಲ್ಲಿ ಬಿಜೆಪಿಯವರು ನಿಸ್ಸೀಮರು.

ಮೋದಿಯವರಿಗೆ ಕರ್ನಾಟಕ ನೆನಪಾಗುವುದೇ ಚುನಾವಣೆ ಬಂದಾಗ. ಬರಗಾಲ ಬಂದಾಗಲೂ ರಾಜ್ಯದ ಕಡೆ ತಲೆ ಹಾಕಲಿಲ್ಲ. ಪ್ರವಾಹ ಬಂದಾಗ ರಾಜ್ಯದ ಕಡೆ ತಿರುಗಿಯೂ ನೋಡಲಿಲ್ಲ. ಚುನಾವಣೆ ಬಂತು ನೋಡಿ ಮೋದಿ ಓಡೋಡಿ ಬಂದಿದ್ದಾರೆ ಎಂದು ವ್ಯಂಗ್ಯವಾಡಿದರು.

ಮೋದಿಯವರನ್ನು ವಾಚಾಮಗೋಚರವಾಗಿ ಟೀಕಿಸುತ್ತಿದ್ದ ದೇವೇಗೌಡರು ಈಗ ಮೋದಿಗೂ ತಮಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ಇವರಿಬ್ಬರ ನಡುವಿನ ಸಂಬಂಧ ಅಷ್ಟು ಚೆನ್ನಾಗಿದ್ದರೆ ಮೋದಿಯವರಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ದೇವೇಗೌಡರು ಸರಿಪಡಿಸಲಿ ನೋಡೋಣ. ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ ನೋಡೋಣ ಎಂದು ಸವಾಲು ಹಾಕಿದರು.

ರಾಜ್ಯದ ರೈತರಿಗೆ ಕೇಂದ್ರದಿಂದ ಇದುವರೆಗೂ ಒಂದೇ ಒಂದು ರೂಪಾಯಿ ಬರಗಾಲದ ಹಣ ಬಂದಿಲ್ಲ. ಅದು ನಮ್ಮ ರಾಜ್ಯದ ಪಾಲು. ನಮ್ಮ ಪಾಲನ್ನು ಕೊಡದೆ ಸತಾಯಿಸುತ್ತಿರುವ ಮೋದಿಯವರಿಗೆ ಹೇಳಿ ಈ ಹಣ ಕೊಡಿಸಲಿ ಎಂದು ಮತ್ತೊಂದು ಸವಾಲು ಹಾಕಿದರು.

ಇದ್ಯಾವುದನ್ನೂ ನಿಮ್ಮಿಂದ ಮಾಡಿಸಲು ಸಾಧ್ಯವಿಲ್ಲ ಎಂದಾದರೆ ಅದು ರಾಜ್ಯದ ಜನತೆಗೆ ಮಾಡಿದ ದ್ರೋಹವಲ್ಲವೇ ಎಂದು ಪ್ರಶ್ನಿಸಿದರು.

What did Kumaraswamy do when he became CM: Siddaramaiah ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮಾಡಿದ್ದೇನು ಹೇಳಿ: ಸಿ.ಎಂ ಸಿದ್ದರಾಮಯ್ಯ ಪ್ರಶ್ನೆ !
Share. Facebook Twitter LinkedIn WhatsApp Email

Related Posts

BREAKING: ರಾಜ್ಯದ 183 ಗ್ರಾಮಗಳಲ್ಲಿ ನೀರಿನ ಸಮಸ್ಯೆ, ಟ್ಯಾಂಕರ್ ಮೂಲಕ ನೀರು ಸರಬರಾಜು ವ್ಯವಸ್ಥೆ

10/03/2026 5:22 PM2 Mins Read

BIG NEWS: ‘LPG ಗ್ಯಾಸ್ ಸಿಲಿಂಡರ್’ ಕೊರತೆ ಹಿನ್ನಲೆ: ರಾಜ್ಯಾಧ್ಯಂತ ‘ಹೋಟೆಲ್’ಗಳು ಬಂದ್?!

10/03/2026 4:49 PM2 Mins Read

‘LPG ಗ್ಯಾಸ್ ಸಿಲಿಂಡರ್‌’ಗೆ ಹೆಚ್ಚು ಹಣ ಕೇಳ್ತಿದ್ದಾರಾ? ಸುಲಿಗೆಕೋರ ವಿರುದ್ಧ ಹೀಗೆ ದೂರು ನೀಡಿ!

10/03/2026 4:28 PM2 Mins Read
Recent News

BREAKING: ರಾಜ್ಯದ 183 ಗ್ರಾಮಗಳಲ್ಲಿ ನೀರಿನ ಸಮಸ್ಯೆ, ಟ್ಯಾಂಕರ್ ಮೂಲಕ ನೀರು ಸರಬರಾಜು ವ್ಯವಸ್ಥೆ

10/03/2026 5:22 PM

BREAKING : ಟಿ20 ‘ವಿಶ್ವಕಪ್ ಫೈನಲ್’ನಲ್ಲಿ ಐಸಿಸಿ ನೀತಿ ಸಂಹಿತೆ ಉಲ್ಲಂಘನೆ ; ‘ಅರ್ಷ್ದೀಪ್ ಸಿಂಗ್’ಗೆ ಪಂದ್ಯ ಶುಲ್ಕದ 15% ದಂಡ!

10/03/2026 5:19 PM

ಟೀಂ ಇಂಡಿಯಾ ವೇಗಿ ಅರ್ಷದೀಪ್​ ಸಿಂಗ್​ಗೆ ICC ಬಿಗ್ ಶಾಕ್: ಪಂದ್ಯ ಶುಲ್ಕದ ಶೇ.15ರಷ್ಟು ದಂಡ

10/03/2026 5:15 PM

BIG NEWS: ‘LPG ಗ್ಯಾಸ್ ಸಿಲಿಂಡರ್’ ಕೊರತೆ ಹಿನ್ನಲೆ: ರಾಜ್ಯಾಧ್ಯಂತ ‘ಹೋಟೆಲ್’ಗಳು ಬಂದ್?!

10/03/2026 4:49 PM
State News
KARNATAKA

BREAKING: ರಾಜ್ಯದ 183 ಗ್ರಾಮಗಳಲ್ಲಿ ನೀರಿನ ಸಮಸ್ಯೆ, ಟ್ಯಾಂಕರ್ ಮೂಲಕ ನೀರು ಸರಬರಾಜು ವ್ಯವಸ್ಥೆ

By kannadanewsnow0910/03/2026 5:22 PM KARNATAKA 2 Mins Read

ಬೆಂಗಳೂರು: ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಮುಖಾಂತರ…

BIG NEWS: ‘LPG ಗ್ಯಾಸ್ ಸಿಲಿಂಡರ್’ ಕೊರತೆ ಹಿನ್ನಲೆ: ರಾಜ್ಯಾಧ್ಯಂತ ‘ಹೋಟೆಲ್’ಗಳು ಬಂದ್?!

10/03/2026 4:49 PM

‘LPG ಗ್ಯಾಸ್ ಸಿಲಿಂಡರ್‌’ಗೆ ಹೆಚ್ಚು ಹಣ ಕೇಳ್ತಿದ್ದಾರಾ? ಸುಲಿಗೆಕೋರ ವಿರುದ್ಧ ಹೀಗೆ ದೂರು ನೀಡಿ!

10/03/2026 4:28 PM

ಬೆಂಗಳೂರಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ಹಿನ್ನೆಲೆ : ಸಮಸ್ಯೆ ಬಗೆಹರಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

10/03/2026 4:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.