ಬೆಂಗಳೂರು : ವಿಧಾನ ಸೌಧದ ಪಶ್ವಿಮ ದ್ವಾರದಲ್ಲಿ ಅನಧಿಕೃತ 10.5 ಲಕ್ಷ ನಗದು ಹಣ ಪತ್ತೆಯಾಗಿದ್ದು ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಜಗದೀಶ್ ಬಳಿ ಇದ್ದ ಹಣ ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ನಡೆಸುತ್ತಿರುವಾಗ ನಾನು ಮಾತನಾಡಿದರೆ ಅದು ತಪ್ಪಾಗುತ್ತದೆ. ಆರೋಪಿಯನ್ನು ವಿಚಾರಣೆ ನಡೆಸಿದ ಬಳಿಕವಷ್ಟೇ ಈ ಕುರಿತು ಗೊತ್ತಾಗಲಿದೆ. 40 % ಏನೂ ಇಲ್ಲ, ಇವೆಲ್ಲಾ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಆಗಿದೆ ಎಂದಿದ್ದಾರೆ. ಇದು ಚುನಾವಣೆ ಗಿಮಿಕ್ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ನಿನ್ನೆ ಸಂಜೆ 7 ಗಂಟೆಗೆ ನಡೆದ ಘಟನೆ ಎಂದು ತಿಳಿದುಬಂದಿದೆ. ಮಂಡ್ಯ ಮೂಲದ ವ್ಯಕ್ತಿಯ ಬ್ಯಾಗ್ನಲ್ಲಿ ಹಣ ಪತ್ತೆಯಾಗಿದೆ. ಹಣ ಮೂಲ ಪ್ರಶ್ನೆ ಮಾಡಿದಾಗ ಯಾವುದೇ ಸ್ಪಷ್ಟ ಉತ್ತರ ನೀಡಿಲ್ಲ. ಬಳಿಕ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಘಟನೆ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಲಾಗಿದೆ. ಇದೀಗ ಹಣ ಮೂಲಕ ಹುಡುಕುವಲ್ಲಿ ಪೊಲೀಸರು ಮುಂದಾಗಿದ್ದಾರೆ. ಯಾವ ಇಲಾಖೆ ಸಂಬಂಧಿಸಿದೆಂದು ಮಾಹಿತಿ ಲಭ್ಯವಾಗಿಲ್ಲ.
BREAKING NEWS : ಜೆ.ಪಿ ನಡ್ಡಾ ಕರ್ನಾಟಕ ಪ್ರವಾಸ : ಇಂದು ಮಧ್ಯಾಹ್ನ 12:55 ಕ್ಕೆ ಬೆಂಗಳೂರಿಗೆ ಆಗಮನ |J.P Nadda