Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರಾಜ್ಯ ಬಜೆಟ್’ನಲ್ಲಿ ‘ನಗರಾಭಿವೃದ್ಧಿ’ ಇಲಾಖೆಗೆ ಸಿಕ್ಕಿದ್ದೇನು.? ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

‘ರಾಜ್ಯ ಬಜೆಟ್’ನಲ್ಲಿ ‘ನಗರಾಭಿವೃದ್ಧಿ’ ಇಲಾಖೆಗೆ ಸಿಕ್ಕಿದ್ದೇನು.? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow0716/02/2024 12:16 PM

ಬೆಂಗಳೂರು: ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ನಾವು ಬ್ರಾಂಡ್‌ ಬೆಂಗಳೂರು ಪರಿಕಲ್ಪನೆಯನ್ನು ರೂಪಿಸಿ ಜಾರಿಗೊಳಿಸುತ್ತಿದ್ದೇವೆ. ಜನರ ಬದುಕಿನ ಗುಣಮಟ್ಟ ಸುಧಾರಣೆಗಾಗಿ ಹಾಗೂ ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ ವಲಯಗಳಲ್ಲಿ ಗಣನೀಯ ಸುಧಾರಣೆಗಳನ್ನು ತರಲು ಹಲವಾರು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪ್ರಸಕ್ತ ಸಾಲಿನಲ್ಲಿ ಸಂಪನ್ಮೂಲಗಳ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ಸಾರ್ವಜನಿಕ ಸಾರಿಗೆ ಮತ್ತು ಸ್ವಚ್ಛ-ಸುಂದರ ಬೆಂಗಳೂರು ನಿರ್ಮಾಣದ ಕುರಿತು ಹೆಚ್ಚಿನ ಗಮನ ಹರಿಸುತ್ತೇವೆ.

251. ಬಿ.ಬಿ.ಎಂ.ಪಿ ಯಲ್ಲಿ ತೆರಿಗೆ ಮತ್ತು ತೆರಿಗೆಯೇತರ ಸಂಪನ್ಮೂಲಗಳನ್ನು ಕ್ರೊಢೀಕರಿಸಲು ಸರ್ಕಾರವು ಹಲವು ಉಪಕ್ರಮಗಳನ್ನು ಕೈಗೊಳ್ಳಲಿದೆ;
• 2023-24ನೇ ಸಾಲಿನಲ್ಲಿ 4,300 ಕೋಟಿ ರೂ. ತೆರಿಗೆ ಸಂಗ್ರಹ ಮಾಡುವ ಮುಖಾಂತರ ದಾಖಲೆಯ ತೆರಿಗೆ ಸಂಗ್ರಹ ಮಾಡುವತ್ತ ಮುನ್ನಡೆದಿದೆ. ಇದು 2022-23ನೇ ಸಾಲಿಗಿಂತ 1,000 ಕೋಟಿ ರೂ. ಗಳಷ್ಟು ಹೆಚ್ಚಾಗಿದೆ. 2024-25ರಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸೋರಿಕೆ ತಡೆಗಟ್ಟುವ ಮೂಲಕ 6,000 ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹದ ನಿರೀಕ್ಷೆ ಇದೆ.
• ಪ್ರಸಕ್ತ ಸಾಲಿನಿಂದ ಪರಿಷ್ಕೃತ ಜಾಹೀರಾತು ನೀತಿ ಮತ್ತು Premium FAR ನೀತಿಯನ್ನು ಜಾರಿಗೆ ತರುವ ಮೂಲಕ ಹೆಚ್ಚುವರಿಯಾಗಿ 2,000 ಕೋಟಿ ರೂ.ಗಳಷ್ಟು ತೆರಿಗೆಯೇತರ ಸಂಪನ್ಮೂಲ ಸಂಗ್ರಹಿಸುವ ಗುರಿ ಹೊಂದಲಾಗಿದೆ.
• ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 20 ಲಕ್ಷ ಆಸ್ತಿಗಳ ಆಸ್ತಿ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ 2024-25ನೇ ಸಾಲಿನಿಂದ ಮಾಲೀಕರಿಗೆ ಡಿಜಿಟಲ್‌ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳನ್ನು ದೊರಕಿಸಲಾಗುವುದು.
252. ಮೇಲೆ ವಿವರಿಸಿರುವಂತೆ ಸಂಗ್ರಹವಾಗುವ ಹೆಚ್ಚುವರಿ ಸಂಪನ್ಮೂಲಗಳಿಂದ ಆದ್ಯತೆಯ ಮೇಲೆ ಬೆಂಗಳೂರಿನ ಸಂಚಾರ ದಟ್ಟಣೆಯ ಸಮಸ್ಯೆಯನ್ನು ನಿವಾರಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದೆ;
• ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಗರದ ಪ್ರಮುಖ ರಸ್ತೆಗಳಲ್ಲಿ 147 ಕಿ.ಮೀ ಉದ್ದದ ವೈಟ್‌ ಟಾಪಿಂಗ್‌ ಕಾಮಗಾರಿಗಳನ್ನು 1,700 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಮಂಜೂರಾತಿ ನೀಡಲಾಗಿದೆ. ಈ ಕಾಮಗಾರಿಗಳನ್ನು ಡಿಸೆಂಬರ್‌ 2025 ರೊಳಗೆ ಪೂರ್ಣಗೊಳಿಸಲಾಗುವುದು.
• ಭೂಮಿಯ ಅಲಭ್ಯತೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕುಗಳ ಕಾರಣ ಅಸ್ತಿತ್ವದಲ್ಲಿರುವ ರಸ್ತೆಗಳ ವಿಸ್ತರಣೆಯು ಅತ್ಯಂತ ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸುರಂಗ ಮಾರ್ಗ (Tunnel) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧರಿಸಿದೆ. ಈ ವರ್ಷ ಸಂಚಾರ ದಟ್ಟಣೆ ಅತ್ಯಂತ ತೀವ್ರವಾಗಿರುವ ಹೆಬ್ಬಾಳ ಜಂಕ್ಷನ್‌ ನಲ್ಲಿ ಪ್ರಾಯೋಗಿಕವಾಗಿ ಟನೆಲ್‌ ಅನ್ನು ನಿರ್ಮಿಸಲಾಗುವುದು.
• ನಾಲಾ ಬಫರ್‌ ವಲಯದೊಳಗೆ ನಾಲಾ ಬಫರ್‌ ಅನ್ನು ಬಳಸಿಕೊಂಡು ಸರ್ವಋತು ರಸ್ತೆಗಳನ್ನು ನಿರ್ಮಿಸುವ
ಹೊಸ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಈ ಯೋಜನೆಯಡಿ ಈಗಾಗಲೇ 200 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿಯಾಗಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು.
• ಸುಗಮ ಸಂಚಾರ-ಬ್ರಾಂಡ್‌ ಬೆಂಗಳೂರು ಯೋಜನೆಯಡಿ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆಯನ್ನು ನೇಮಿಸಿಕೊಳ್ಳಲಾಗಿದೆ. ಈ ಸಂಸ್ಥೆಯು ನೀಡುವ ವರದಿಯನ್ನು ಆಧರಿಸಿ, ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು.
253. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದರ ಜೊತೆಗೆ ಬೆಂಗಳೂರಿನ ಆರ್ಥಿಕ ಚಟುವಟಿಕೆಗಳು ದೊಡ್ಡ ಪ್ರಮಾಣದಲ್ಲಿ ವೃದ್ಧಿಸಲು ಸಹಕಾರಿಯಾಗುವಂತೆ ಪೆರಿಫೆರಲ್‌ ರಿಂಗ್‌ ರೋಡ್‌ ಅನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಪರಿಚಯಿಸಲು ಉದ್ದೇಶಿಸಲಾಗಿದೆ.
ಈ ಯೋಜನೆಯಡಿ 73 ಕಿ.ಮೀ. ಉದ್ದದ ರಸ್ತೆಯನ್ನು 27,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಲು RFP ಕರೆಯಲಾಗಿದೆ. ಈ ಯೋಜನೆಯನ್ನು ಇದೇ ಸಾಲಿನಲ್ಲಿ ಪ್ರಾರಂಭ ಮಾಡಲು ಉದ್ದೇಶಿಸಿದೆ.
254. ಬೆಂಗಳೂರು ನಗರದಲ್ಲಿ 250 ಮೀಟರ್‌ ಎತ್ತರದ ಸ್ಕೈ-ಡೆಕ್‌
(Sky-Deck) ನಿರ್ಮಾಣಕ್ಕಾಗಿ ನೂತನ ಪರಿಕಲ್ಪನೆ ಒದಗಿಸುವಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ವಾಸ್ತುವಿನ್ಯಾಸಗಾರರನ್ನು ಆಹ್ವಾನಿಸಿದೆ. ಇದರಿಂದ ನಗರದ ಒಳಗೆ ಆಕರ್ಷಕವಾದ ಪ್ರವಾಸಿ ತಾಣವನ್ನು ಸೃಜಿಸಿದಂತಾಗುತ್ತದೆ.
255. ನಗರಾಭಿವೃದ್ಧಿ ಇಲಾಖೆಯ ಅಂಗಸಂಸ್ಥೆಗಳಾದ BBMP, BMRCL, BWSSB, BDA ಗಳ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ವಿದ್ಯುತ್‌ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್‌ ಪಾರ್ಕ್‌ ಅನ್ನು Captive/Group Captive ಮೂಲಕ ಸ್ಥಾಪಿಸಲಾಗುವುದು.
256. ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಸೇವೆಯೊಂದಿಗೆ ಮೆಟ್ರೋ ರೈಲು ಹಾಗೂ ಸಬ್‌-ಅರ್ಬನ್‌ ರೈಲು ಯೋಜನೆಗಳು ಜನರ ಸುಗಮ ಸಂಚಾರದ ದೃಷ್ಟಿಯಿಂದ ಕ್ರಾಂತಿಕಾರಿ ಬದಲಾವಣೆ ತರಲಿವೆ.
ಈ ಬಹುವಿಧ ಸಾರಿಗೆ ವ್ಯವಸ್ಥೆಗಳನ್ನು ಒಗ್ಗೂಡಿಸಿ, ಪರಸ್ಪರ ಸಮನ್ವಯದಿಂದ ಕಾರ್ಯಾಚರಣೆ ಮಾಡುವ ಮೂಲಕ ಜನರು ಹೆಚ್ಚು ಹೆಚ್ಚಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಅವಲಂಬಿಸಲು ಪ್ರೇರೇಪಿಸುವುದು ನಮ್ಮ ಆದ್ಯತೆಯಾಗಿದೆ. ಇದರಿಂದ ಸಂಚಾರ ದಟ್ಟಣೆ ಹಾಗೂ ಪರಿಸರ ಮಾಲಿನ್ಯಗಳ ನಿಯಂತ್ರಣ ಸಾಧ್ಯವಾಗುವುದಲ್ಲದೆ, ಬದುಕು ಇನ್ನಷ್ಟು ಸುಗಮವಾಗಲಿದೆ.
257. ದೇಶದ ಅತ್ಯುತ್ತಮ ಮೆಟ್ರೋ ಸೇವೆಗಳಲ್ಲಿ ಮುಂಚೂಣಿಯಲ್ಲಿರುವ ನಮ್ಮ ಮೆಟ್ರೋ ರೈಲು ಯೋಜನೆಯು ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯ ಜೀವನಾಡಿಯಾಗಿದೆ. 8 ಲಕ್ಷಕ್ಕೂ ಹೆಚ್ಚಿನ ಜನರು
ಪ್ರತಿನಿತ್ಯ ಮೆಟ್ರೋ ಸೇವೆಯನ್ನು ಬಳಸುತ್ತಿದ್ದಾರೆ. ಪ್ರಸ್ತುತ ಕಾರ್ಯಾಚರಣೆಯಲ್ಲಿರುವ 74 ಕಿ.ಮೀ. ಮಾರ್ಗದೊಂದಿಗೆ 2025ರ ಮಾರ್ಚ್‌ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ. ಮಾರ್ಗ ಸೇರ್ಪಡೆಯಾಗಲಿದೆ.
258. ಮೆಟ್ರೋ ಯೋಜನೆ ಹಂತ-2 ಮತ್ತು 2ಎ ಯೋಜನೆಯಡಿ ಹೊರವರ್ತುಲ ರಸ್ತೆ- ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್‌ ವೇಳೆಗೆ ಪೂರ್ಣಗೊಳ್ಳಲಿದೆ. ಪ್ರಸಕ್ತ ಸಾಲಿನಲ್ಲಿ ಮೆಟ್ರೋ ಸೇವೆಯ ಇತಿಹಾಸದಲ್ಲಿಯೇ ಪ್ರಥಮ ಬಾರಿ ಕಾರ್ಯಾಚರಣೆಯು ಲಾಭದಾಯಕವಾಗಿ (Operational Profit) ಪರಿಣಮಿಸಿರುವುದು ಹೆಮ್ಮೆಯ ಸಂಕೇತವಾಗಿದೆ.
259. ನಮ್ಮ ಮೆಟ್ರೋ ಹಂತ-3 ರಡಿ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ಸರ್ಕಾರದ ಅನುಮೋದನೆಯ ನಿರೀಕ್ಷೆಯಲ್ಲಿದೆ.
260. ನಮ್ಮ ಮೆಟ್ರೋ ಹಂತ-3ಎ ರಡಿಯಲ್ಲಿ ಸರ್ಜಾಪುರದಿಂದ ಅಗರ, ಕೋರಮಂಗಲ ಡೈರಿ ವೃತ್ತ, ಮೇಖ್ರಿ ವೃತ್ತ ಮೂಲಕ ಹೆಬ್ಬಾಳವನ್ನು ಸಂಪರ್ಕಿಸುವ ಮಾರ್ಗ ನಿರ್ಮಾಣ ಕುರಿತು ಡಿ.ಪಿ.ಆರ್. ಕರಡು ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗುವುದು.
261. ಮಂದಗತಿಯಲ್ಲಿ ಸಾಗುತ್ತಿದ್ದ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಚುರುಕುಗೊಳಿಸಿ, ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ವರೆಗಿನ ಕಾರಿಡಾರ್‌-2ರ ಸಿವಿಲ್‌ ಕಾಮಗಾರಿಗಳನ್ನು ವೇಗವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಕಾರಿಡಾರ್‌-4 ರ ಹೀಲಲಿಗೆಯಿಂದ ರಾಜಾನುಕುಂಟೆ ವರೆಗಿನ 46.2 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. Rolling Stock ಮತ್ತು ಅದರ ಕಾರ್ಯಾಚರಣೆ ಮತ್ತು ನಿರ್ವಹಣೆಗೆ RFP ಆಹ್ವಾನ ಮಾಡಲಾಗಿದೆ. European Investment Bank ಮತ್ತು ಜರ್ಮನಿಯ KFW ಬ್ಯಾಂಕುಗಳ ಜೊತೆಗೆ ಆರ್ಥಿಕ ನೆರವಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆಯ ಅಗತ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯಿಸಲಾಗುವುದು ಮತ್ತು ಕೇಂದ್ರ ಸರ್ಕಾರ ನೀಡುವ ಅನುದಾನಕ್ಕೆ ಎದುರಾಗಿ ರಾಜ್ಯ ಸರ್ಕಾರದ ಪಾಲಿನ ಅನುದಾನವನ್ನು ಒದಗಿಸಲಾಗುವುದು.
262. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರತಿದಿನ ಸರಾಸರಿ
42 ಲಕ್ಷ ಜನರಿಗೆ ಸೇವೆಯನ್ನು ಒದಗಿಸುತ್ತಿದ್ದು, ದೇಶದಲ್ಲಿಯೇ ಅತ್ಯುತ್ತಮ ನಗರ ಸಾರಿಗೆ ವ್ಯವಸ್ಥೆಗಳಲ್ಲಿ ಒಂದಾಗಿದೆ. ಮುಂದಿನ ದಿನಗಳಲ್ಲಿ 1,334 ಹೊಸ ಎಲೆಕ್ಟ್ರಿಕ್‌ ಬಸ್‌ಗಳು ಮತ್ತು 820 ಬಿಎಸ್-6 ಡೀಸೆಲ್‌ ಬಸ್ಸುಗಳನ್ನು ಬಿ.ಎಂ.ಟಿ.ಸಿ.ಗೆ ಸೇರ್ಪಡೆಗೊಳಿಸಲಾಗುವುದು.
263. ಪ್ರಯಾಣಿಕರ ಹಿತದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಮಹಿಳಾ ಸುರಕ್ಷತೆಯನ್ನು ಒಳಗೊಂಡ
Vehicle Tracking ಹೊಂದಿರುವ ಮೊಬೈಲ್‌ ಆಪ್‌ ಅನ್ನು ಅನುಷ್ಠಾನಗೊಳಿಸಲಾಗುತ್ತಿದೆ.
264. ಜಪಾನ್‌ ಸರ್ಕಾರದ ಸಹಯೋಗದೊಂದಿಗೆ ಬೆಂಗಳೂರು ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು Area Traffic Signal Control System ಅನ್ನು ನಗರದ ಪ್ರಮುಖ
28 ಜಂಕ್ಷನ್‌ಗಳಲ್ಲಿ ಅಳವಡಿಸುವ ಮೂಲಕ ಟ್ರಾಫಿಕ್‌ ಸಿಗ್ನಲ್‌ ನಲ್ಲಿ ವಾಹನಗಳ ಸಂದಣಿಯನ್ನು ಶೇ.30ರಷ್ಟು ಹಾಗೂ ಸರಾಸರಿ ವಿಳಂಬವನ್ನು ಶೇ.13ರಷ್ಟು ಕಡಿಮೆಗೊಳಿಸಲಾಗುವುದು.
265. ನಗರದ ಅಭಿವೃದ್ಧಿಯ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳ ಜೊತೆಯಲ್ಲಿ ನಾಗರಿಕರ ಬದುಕಿನ ಗುಣಮಟ್ಟ ಸುಧಾರಣೆಗೂ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದ್ದು, ಉತ್ತಮ ಪರಿಸರ, 24×7 ಕುಡಿಯುವ ನೀರಿನ ಪೂರೈಕೆ ಮತ್ತು ಸ್ವಚ್ಛತೆಯ ನಿರ್ವಹಣೆಗೆ ಒತ್ತು ನೀಡಲಾಗುವುದು.
ಈ ನಿಟ್ಟಿನಲ್ಲಿ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು;
• ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 5,550 ಕೋಟಿ ರೂ. ಅಂದಾಜು ವೆಚ್ಚದಲ್ಲಿ 775 ಎಂ.ಎಲ್.ಡಿ ಸಾಮರ್ಥ್ಯದ ಕಾವೇರಿ ಹಂತ-5 ಯೋಜನೆಯನ್ನು ಮೇ 2024 ರಲ್ಲಿ ಕಾರ್ಯಾರಂಭಗೊಳಿಸುವ ಮೂಲಕ 12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್‌ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು.
• ಕಾವೇರಿ ಹಂತ-5 ರಡಿಯಲ್ಲಿ ಒಳಚರಂಡಿ ಕಾಮಗಾರಿಗಳನ್ನು ಡಿಸೆಂಬರ್‌ 2024 ರಲ್ಲಿ ಪೂರ್ಣಗೊಳಿಸಲಾಗುವುದು. ಇದರಿಂದ
228 ಕಿ.ಮೀ ವ್ಯಾಪ್ತಿಯಲ್ಲಿ ಒಳಚರಂಡಿ ಕೊಳವೆಯನ್ನು ಅಳವಡಿಸಲಾಗುವುದು ಮತ್ತು 13 ಎಸ್.ಟಿ.ಪಿ ಘಟಕಗಳಿಂದ
100 ಎಂ.ಎಲ್.ಡಿ ರಷ್ಟು ಒಳಚರಂಡಿ ನೀರನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಸೃಜಿಸಲಾಗುವುದು.
• 07 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು (ಎಸ್.ಟಿ.ಪಿ)
441 ಕೋಟಿ ರೂ.ಗಳ ಮೊತ್ತದಲ್ಲಿ ಉನ್ನತೀಕರಿಸಲಾಗುವುದು. ಇದರಿಂದ 268 ಎಂ.ಎಲ್.ಡಿ ತ್ಯಾಜ್ಯ ನೀರನ್ನು ಪ್ರತಿನಿತ್ಯ ಸಂಸ್ಕರಿಸಿ ಮರುಬಳಕೆ ಮಾಡಲು ಅನುಕೂಲವಾಗಲಿದೆ.
• ಬಿ.ಬಿ.ಎಂ.ಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ಯೋಜನೆಯ ಎರಡನೇ ಹಂತವನ್ನು 200 ಕೋಟಿ ರೂ.ಗಳ ಮೊತ್ತದಲ್ಲಿ ಪ್ರಾರಂಭಿಸಲಾಗುವುದು.
266. ಮನೆಗಳಿಂದ ತ್ಯಾಜ್ಯ ಸಂಸ್ಕರಣಾ ಘಟಕಗಳವರೆಗೂ ತ್ಯಾಜ್ಯಗಳ ವಿಲೇವಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಬೆಂಗಳೂರು ನಗರ ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡಿಸಿ, ಪ್ರತಿಯೊಂದು ವಲಯಕ್ಕೂ ನುರಿತ ಸಂಸ್ಥೆಯನ್ನು ಪಾರದರ್ಶಕವಾಗಿ ನೇಮಿಸಲಾಗುವುದು. ನಗರದ ಹೊರವಲಯದ ನಾಲ್ಕು ಕಡೆಗಳಲ್ಲಿ
50 ರಿಂದ 100 ಎಕರೆ ಜಮೀನನ್ನು ಗುರುತಿಸಿ ಮುಂದಿನ
30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟು ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಅವಕಾಶ ಕಲ್ಪಿಸಲಾಗುವುದು.
267. ಬಿಬಿಎಂಪಿಯ ಅರಣ್ಯ, ಕೆರೆ ಮತ್ತು ತೋಟಗಾರಿಕಾ ವಿಭಾಗವನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ವಹಣಾ ವಿಭಾಗ ಎಂದು ಮರುನಾಮಕರಣ ಮಾಡಿ, ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗಿದೆ. ನಗರದಲ್ಲಿ ವಾತಾವರಣದ ಸ್ವಚ್ಛತೆಗಾಗಿ ಮರಗಳ ಗಣತಿ, ಕೆರೆ ಮತ್ತು ಉದ್ಯಾನವನಗಳ ತಂತ್ರಾಂಶ ಆಧಾರಿತ ಮೇಲ್ವಿಚಾರಣೆ ಹಾಗೂ ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕ ಸಹಭಾಗಿತ್ವವನ್ನು ಹೆಚ್ಚಿಸಲು ಪ್ರತ್ಯೇಕ ನೀತಿ ಜಾರಿಗೊಳಿಸಲಾಗುವುದು.
268. ಬಿಬಿಎಂಪಿ ಸಹಯೋಗದೊಂದಿಗೆ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ವಜ್ಞ ಉದ್ಯಾನವನವನ್ನು ಅಭಿವೃದ್ಧಿಪಡಿಸಲಾಗುವುದು.
269. ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆಗಳಲ್ಲಿ ವಾಣಿಜ್ಯ ಮತ್ತು ವ್ಯಾಪಾರದ ದೃಷ್ಠಿಯಿಂದ ರಾತ್ರಿಯ ವೇಳೆ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಬೆಳಗಿನ ಜಾವ ಒಂದು ಗಂಟೆಯವರೆಗೆ
(1:೦೦ am) ವಿಸ್ತರಿಸಲಾಗುವುದು.
ಪೌರಾಡಳಿತ
270. ಬೆಂಗಳೂರಿಗೆ ಪರ್ಯಾಯವಾಗಿ ರಾಜ್ಯದಲ್ಲಿ ಸುಸ್ಥಿರವಾದ ಮೂಲಸೌಕರ್ಯಗಳನ್ನು ಒಳಗೊಂಡ ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸುವಂತೆ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸುವ ಮೂಲಕ ಬೆಂಗಳೂರಿನ ಮೇಲಿನ ಒತ್ತಡವನ್ನು ತಗ್ಗಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ರೂಪಿಸಲಿದೆ;
• ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ ರಾಜ್ಯದ
10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 2,000 ಕೋಟಿ ರೂ. ಗಳನ್ನು ಒದಗಿಸಲಾಗುವುದು.
• ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆ.ಜಿ.ಎಫ್‌, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು.
• ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳನ್ನಾಗಿ (Satellite Townships) ಅಭಿವೃದ್ಧಿಪಡಿಸಲಾಗುವುದು.
• ಬೆಂಗಳೂರಿನ BIEC ನಿಂದ ತುಮಕೂರುವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೆ ಸಾರ್ವಜನಿಕ ಖಾಸಗಿ • ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
271. ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನದಟ್ಟಣೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ರಿಂಗ್‌ ರಸ್ತೆಯ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರಕ್ಕೆ ಪೆರಿಫೆರಲ್‌ ರಿಂಗ್‌ ರಸ್ತೆಯನ್ನು ಪಿಪಿಪಿ ಅಥವಾ ಟೌನ್‌ ಪ್ಲಾನಿಂಗ್‌ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
272. ನಗರ ಪ್ರದೇಶದ ಎಲ್ಲಾ ಮನೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಅಮೃತ್ 2.0 ಕೇಂದ್ರ ಪುರಸ್ಕೃತ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿದ್ದು, ಇದರಲ್ಲಿ ರಾಜ್ಯದ ಪಾಲು
4,615 ಕೋಟಿ ರೂ. ಗಳಾಗಿದೆ. ಕಳೆದ ವರ್ಷ ಈ ಉದ್ದೇಶಕ್ಕಾಗಿ ನಾವು 320 ಕೋಟಿ ರೂ. ಅನುದಾನ ಒದಗಿಸಿದ್ದು, ಈ ವರ್ಷ
200 ಕೋಟಿ ರೂ. ಒದಗಿಸಿ, 7.5 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರನ್ನು ಒದಗಿಸುವ ಗುರಿ ಹೊಂದಿದ್ದೇವೆ.
273. ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್ 2.0 ಅಡಿಯಲ್ಲಿ ದ್ರವ ಹಾಗೂ ಘನ ತ್ಯಾಜ್ಯ ಸಂಸ್ಕರಣೆಗೆ ಕೇಂದ್ರ ಸರ್ಕಾರದ ಪಾಲು
2,185 ಕೋಟಿ ರೂ.ಗಳನ್ನು ಒಳಗೊಂಡಂತೆ 5,072 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ನಮ್ಮ ಜಲ ಮೂಲಗಳನ್ನು ಮಲಿನಗೊಳಿಸುವ ದ್ರವ ತ್ಯಾಜ್ಯಗಳ ಸಂಸ್ಕರಣೆ, ಲೆಗೆಸಿ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಆದ್ಯತೆ ನೀಡುವ ಮೂಲಕ ನಗರಗಳಲ್ಲಿ ಸ್ವಚ್ಛ ವಾತಾವರಣ ನಿರ್ಮಾಣ ಮಾಡಲು ಒತ್ತು ನೀಡಲಾಗುವುದು.
274. ಸ್ಥಳೀಯ ಸಂಸ್ಥೆ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜಂಟಿ ಸಹಭಾಗಿತ್ವದ ಯೋಜನೆಯಾದ ಅಮೃತ್‌ 2.0 ಅಡಿಯಲ್ಲಿ,
539 ಕೋಟಿ ರೂ. ಮೊತ್ತದಲ್ಲಿ ಕೆರೆ ಹಾಗೂ ಜಲಮೂಲಗಳ ಪುನಶ್ಚೇತನ ಮತ್ತು ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿಗಳನ್ನು ಆಯ್ದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಳ್ಳಲಾಗುವುದು.
275. ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು, ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು.
276. ಆಸ್ತಿ ತೆರಿಗೆ ಮತ್ತು ಇನ್ನಿತರೆ ಶುಲ್ಕಗಳನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟಲು
3ಡಿ ಡ್ರೋನ್‌ ತಂತ್ರಜ್ಞಾನವನ್ನು ಬಳಸಿಕೊಂಡು ಸ್ವತ್ತುಗಳ ಮ್ಯಾಪಿಂಗ್‌ ಮತ್ತು ಮರು ಮೌಲ್ಯಮಾಪನವನ್ನು ಕೈಗೊಳ್ಳಲಾಗುವುದು.
277. ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ಸಮರ್ಪಕವಾಗಿ ವಸೂಲು ಮಾಡಲು, ಸ್ಥಳೀಯ ಮಹಿಳಾ
ಸ್ವ-ಸಹಾಯ ಗುಂಪುಗಳ ಸೇವೆಯನ್ನು ಪಡೆಯಲಾಗುವುದು.
278. ನೇರಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ 24,005 ಪೌರಕಾರ್ಮಿಕರನ್ನು ಈಗಾಗಲೇ ಖಾಯಂಗೊಳಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ. ನೇರಪಾವತಿಯಡಿಯಲ್ಲಿ ಬಾಕಿ ಉಳಿದಿರುವ ಪೌರಕಾರ್ಮಿಕರಿಗೂ ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮವಹಿಸಲಾಗುವುದು.
279. ಸಮರ್ಪಕ ಹಾಗೂ ಯೋಜಿತ ನಗರೀಕರಣಕ್ಕಾಗಿ ಒಂದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಎಲ್ಲಾ ಸ್ಥಳೀಯ ಯೋಜನಾ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳನ್ನಾಗಿ ಉನ್ನತೀಕರಿಸಲು ಕ್ರಮಕೈಗೊಳ್ಳಲಾಗುವುದು.
280. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಸಭೆಗಳ ಕಾರ್ಯಕಲಾಪಗಳನ್ನು ನೇರ ಪ್ರಸಾರ ಮಾಡಲಾಗುವುದು.
281. ಮೈಸೂರಿನ ಪ್ರಖ್ಯಾತ ಲ್ಯಾನ್ಸ್‌ಡೌನ್‌ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿಯೇ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು.

What did the Urban Development Department get in the state budget? Here's the complete information
Share. Facebook Twitter LinkedIn WhatsApp Email

Related Posts

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

11/05/2025 6:02 PM1 Min Read

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM1 Min Read

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM1 Min Read
Recent News

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM

BREAKING : ‘ಆಪರೇಷನ್ ಸಿಂಧೂರ್’ ನಲ್ಲಿ ಉಗ್ರರ ನೆಲೆಗಳನ್ನು ನಾಶ ಮಾಡಿರೋ ಸಾಕ್ಷಿಗಳಿವೆ : ಫೋಟೋ ರಿಲೀಸ್ ಮಾಡಿದ ಸೇನೆ

11/05/2025 6:55 PM
State News
KARNATAKA

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

By kannadanewsnow0511/05/2025 6:02 PM KARNATAKA 1 Min Read

ಬೆಂಗಳೂರು : ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ಲ ಅನ್ನೋದು ಮತ್ತೆ ಮತ್ತೆ ಸಾಬೀತು ಆಗ್ತಿದೆ. ಇದೀಗ ಮಹಿಳಾ ಸಹೋದ್ಯೋಗಿಗಳ ಭಾವಚಿತ್ರಗಳನ್ನು…

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.