Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂದು ಕೋಮುಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಶಾಸಕ ಕೆ.ವೈ ನಂಜೇಗೌಡ ಅವಿರೋಧ ಆಯ್ಕೆ ಖಚಿತ!

05/07/2025 8:22 AM

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ‘KSRTC’ ಬಸ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು!

05/07/2025 8:18 AM

ಎರಡು ದಿನಗಳ ಅರ್ಜೆಂಟೀನಾ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ | PM Modi

05/07/2025 8:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BUDGET BREAKING: ‘ರಾಜ್ಯ ಬಜೆಟ್’ನಲ್ಲಿ ‘ಪ್ರವಾಸೋದ್ಯಮ’ಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

BUDGET BREAKING: ‘ರಾಜ್ಯ ಬಜೆಟ್’ನಲ್ಲಿ ‘ಪ್ರವಾಸೋದ್ಯಮ’ಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow0916/02/2024 1:11 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಮಂಡಿಸಿದಂತ ರಾಜ್ಯ ಬಜೆಟ್ 2024-25ರಲ್ಲಿ ಪ್ರವಾಸೋದ್ಯಮಕ್ಕೆ ಬಂಫರ್ ಗಿಫ್ಟ್ ನೀಡಿದ್ದಾರೆ. ರಾಜ್ಯದ ಪ್ರಮುಖ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್‌ ಕಾರ್‌/ ರೋಪ್‌ ವೇ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ. ಆ ಎಲ್ಲಾ ಸಂಪೂರ್ಣ ಮಾಹಿತಿ ಮುಂದೆ ಓದಿ.

ಪ್ರವಾಸೋದ್ಯಮ

ಇಂದು ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು ಎಂದರು.

ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.  ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.

ಸಾಹಸ ಪ್ರವಾಸೋದ್ಯವನ್ನು ಉತ್ತೇಜಿಸಲು ರಾಜ್ಯದ ಪ್ರಮುಖ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್‌ ಕಾರ್‌/ ರೋಪ್‌ ವೇ ಸೌಲಭ್ಯ ಅಭಿವೃದ್ಧಿಪಡಿಸಲಾಗುವುದು. ಗೋಕಾಕ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು. ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನು 3ಡಿ ಲೇಸರ್‌ ಸ್ಕ್ಯಾನಿಂಗ್‌ ಮೂಲಕ ಡಿಜಿಟಲ್ ದಾಖಲೀಕರಣ ಮಾಡಲಾಗಿದೆ. ಈ ಕಾರ್ಯವನ್ನು ದೇಶದಲ್ಲಿಯೇ ಪ್ರಥಮವಾಗಿ ಕೈಗೊಂಡಿರುವ ಶ್ರೇಯಸ್ಸು ನಮ್ಮ ರಾಜ್ಯದ್ದಾಗಿದೆ. ಈ ಡಿಜಿಟಲ್‌ ಮಾಹಿತಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು ಎಂದರು.

ರಾಷ್ಟ್ರಕೂಟರ ಕಾಲದಲ್ಲಿ ಕರ್ನಾಟಕದ ಮೊಟ್ಟ ಮೊದಲ ವಿಶ್ವವಿದ್ಯಾಲಯವನ್ನು ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲ್ಲೂಕಿನ ನಾಗಾವಿಯಲ್ಲಿ ಸ್ಥಾಪಿಸಲಾಗಿತ್ತು ಎಂಬುದು ಸ್ಥಳೀಯರ ನಂಬಿಕೆ. ಅಲ್ಲಿನ ಪ್ರಾಚ್ಯಾವೇಶಗಳ ಸಂಶೋಧನೆ ಮತ್ತು ಸಂರಕ್ಷಣೆಗಾಗಿ ನೆರವು ನೀಡಲು Archaeological Survey of India (ASI) ಗೆ ಶಿಫಾರಸ್ಸು ಮಾಡಲಾಗುವುದು ಎಂದರು.

ಕೆ.ಎಸ್.‌ಟಿ.ಡಿ.ಸಿ ವತಿಯಿಂದ ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್‌ ನಿರ್ಮಿಸಲಾಗುವುದು ಹಾಗೂ ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್‌ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು. ಬೀದರ್‌ ಹಾಗೂ ವಿಜಯಪುರದಲ್ಲಿ ಕರೇಜ್‌ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯನ್ನು ನುರಿತ ಸಂಸ್ಥೆಗಳ ತಾಂತ್ರಿಕ ನೆರವಿನೊಂದಿಗೆ 15 ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನಗೊಳಿಸಲಾಗುವುದು ಎಂದರು.

ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್‌ ಸೆಂಟರ್‌ಗಳನ್ನು ಜೆ.ಎಲ್.ಆರ್‌ ಸಂಸ್ಥೆಯ ಮೂಲಕ ನಿರ್ಮಾಣ ಮಾಡಲಾಗುವುದು. ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು. ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮನ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸಂರಕ್ಷಿಸಿ ಅಭಿವೃದ್ಧಿಗೊಳಿಸಲು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯನ್ನು ರಚಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.

BUDGET BREAKING: ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್: ರಾಜ್ಯಾಧ್ಯಂತ ‘ಡ್ರೋನ್ ಮೂಲಕ ಸರ್ವೆ’ ಕಾರ್ಯ ವಿಸ್ತರಣೆ

‘ಫಾಸ್ಟ್ ಟ್ಯಾಗ್’ ಖರೀದಿಸುವ ’32 ಬ್ಯಾಂಕ್’ಗಳ ಪಟ್ಟಿಯಿಂದ ‘ಪೇಟಿಎಂ ಪೇಮೆಂಟ್ಸ್ ಬ್ಯಾಂಕ್’ ಔಟ್ | Paytm Payments Bank

Share. Facebook Twitter LinkedIn WhatsApp Email

Related Posts

BREAKING : ಇಂದು ಕೋಮುಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಶಾಸಕ ಕೆ.ವೈ ನಂಜೇಗೌಡ ಅವಿರೋಧ ಆಯ್ಕೆ ಖಚಿತ!

05/07/2025 8:22 AM1 Min Read

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ‘KSRTC’ ಬಸ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು!

05/07/2025 8:18 AM1 Min Read

BREAKING : ಮೈಸೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಿದ್ರ, ಛಿದ್ರ : ಅತ್ತೆ-ಸೊಸೆ ಪ್ರಾಣಾಪಾಯದಿಂದ ಪಾರು!

05/07/2025 8:10 AM1 Min Read
Recent News

BREAKING : ಇಂದು ಕೋಮುಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಶಾಸಕ ಕೆ.ವೈ ನಂಜೇಗೌಡ ಅವಿರೋಧ ಆಯ್ಕೆ ಖಚಿತ!

05/07/2025 8:22 AM

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ‘KSRTC’ ಬಸ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು!

05/07/2025 8:18 AM

ಎರಡು ದಿನಗಳ ಅರ್ಜೆಂಟೀನಾ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ | PM Modi

05/07/2025 8:10 AM

BREAKING : ಮೈಸೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಿದ್ರ, ಛಿದ್ರ : ಅತ್ತೆ-ಸೊಸೆ ಪ್ರಾಣಾಪಾಯದಿಂದ ಪಾರು!

05/07/2025 8:10 AM
State News
KARNATAKA

BREAKING : ಇಂದು ಕೋಮುಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಶಾಸಕ ಕೆ.ವೈ ನಂಜೇಗೌಡ ಅವಿರೋಧ ಆಯ್ಕೆ ಖಚಿತ!

By kannadanewsnow0505/07/2025 8:22 AM KARNATAKA 1 Min Read

ಕೋಲಾರ : ಕೋಲಾರ ಹಾಲು ಒಕ್ಕೂಟ ಕೋಮುಲ್ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದ್ದು, ಇಂದು ಕೋಮಲ್ ಅಧ್ಯಕ್ಷ ಸ್ಥಾನಕ್ಕೆ…

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ‘KSRTC’ ಬಸ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು!

05/07/2025 8:18 AM

BREAKING : ಮೈಸೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಿದ್ರ, ಛಿದ್ರ : ಅತ್ತೆ-ಸೊಸೆ ಪ್ರಾಣಾಪಾಯದಿಂದ ಪಾರು!

05/07/2025 8:10 AM

BREAKING : ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು : ಹೊತ್ತಿ ಉರಿದ ಬಸ್, ಪ್ರಯಾಣಿಕರು ಪಾರು!

05/07/2025 7:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.