Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಾವೇರಿ ನದಿಯಲ್ಲಿ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ ಶವ ಪತ್ತೆ.!

11/05/2025 7:39 AM

ಕದನ ವಿರಾಮ ಘೋಷಣೆ : ‘ಭಯೋತ್ಪಾದನೆ ವಿರುದ್ಧ ಯಾವುದೇ ರಾಜಿ ಇಲ್ಲ’: ಜೈಶಂಕರ್

11/05/2025 7:38 AM

BIG NEWS : ʻಯುವನಿಧಿ ಯೋಜನೆʼ ಫಲಾನುಭವಿಗಳೇ ಗಮನಿಸಿ : 3 ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ.!

11/05/2025 7:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಮಹಿಳೆಯರು ಮತ್ತು ಯುವಜನತೆಗೆ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಮಹಿಳೆಯರು ಮತ್ತು ಯುವಜನತೆಗೆ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow0716/02/2024 12:18 PM

ವಸಂತ್ ಬಿ ಈಶ್ವರ ಗೆರೆ ಜೊತೆಗೆ ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.

14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್​ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್​ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಇನ್ನೂ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಮಹಿಳೆಯರು ಮತ್ತು ಯುವಜನತೆಗೆ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ
211. ನಿರುದ್ಯೋಗಿ ಯುವಜನರಲ್ಲಿ ಭರವಸೆ ತುಂಬಿ, ಉದ್ಯೋಗ ಪಡೆದುಕೊಳ್ಳುವತ್ತ ಬೆಂಬಲ ನೀಡುವ ಯೋಜನೆ ಯುವನಿಧಿ. ಸ್ವಾಮಿ ವಿವೇಕಾನಂದರವರ ಜನ್ಮದಿನವಾದ ರಾಷ್ಟ್ರೀಯ ಯುವ ದಿನಾಚರಣೆದಂದು ಚಾಲನೆಗೊಂಡ ಯುವನಿಧಿ ಯೋಜನೆಯಡಿ ಪದವಿ ಪಡೆದು ಆರು ತಿಂಗಳಾದರೂ ನಿರುದ್ಯೋಗಿಗಳಾಗಿರುವ ಪದವೀಧರ ಯುವಕರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಡಿಬಿಟಿ ಮೂಲಕ ನೆರವು ವರ್ಗಾಯಿಸಲಾಗುತ್ತಿದೆ.

212. ರಾಜ್ಯದ ಮಾನವ ಸಂಪನ್ಮೂಲದ ಸಮರ್ಪಕ ಬಳಕೆ ಮಾಡಲು ಮತ್ತು ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯಮ ಅವಕಾಶಗಳನ್ನು ಒದಗಿಸಲು ರಾಜ್ಯ ಕೌಶಲ್ಯ ನೀತಿಯನ್ನು ಸಿದ್ಧಪಡಿಸಲಾಗುವುದು.

213. ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ನೀಡುತ್ತಿರುವ ಕೋರ್ಸುಗಳಲ್ಲಿ ವಿಷಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು 25,000 ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು. ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆ ಉದ್ಯೋಗಾಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರುವ ಮೂಲಕ ಯುವಸಮೃದ್ಧಿ ಉದ್ಯೋಗ ಮೇಳವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗುವುದು.

214. ಕೈಗಾರಿಕಾ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿಯನ್ನು ಸ್ಥಾಪಿಸಲಾಗುವುದು

215. ಜಿ.ಟಿ.ಟಿ.ಸಿ. ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕಲಬುರಗಿ, ಕೊಪ್ಪಳದ ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ ಒಟ್ಟು 350 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಮೊದಲನೇ ಹಂತದ ಯೋಜನೆಯನ್ನು ಮೂರು ವರ್ಷಗಳ ಅವಧಿಯಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.

216. ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಜಿಲ್ಲಾ ಖನಿಜ ನಿಧಿಯ ಮೂಲಕ ಹಾಗೂ ಗದಗ ಜಿಲ್ಲೆಯ ರೋಣದಲ್ಲಿ NABARD ಸಹಯೋಗದೊಂದಿಗೆ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಹೊಸ ಜಿ.ಟಿ.ಟಿ.ಸಿ ಗಳನ್ನು ಪ್ರಾರಂಭಿಸಲಾಗುವುದು.

217. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಮೆಕ್ಯಾಟ್ರಾನಿಕ್ಸ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ರೊಬೊಟಿಕ್ಸ್ ಇತ್ಯಾದಿ ಹೆಚ್ಚುವರಿ ಡಿಪ್ಲೊಮ ಕೋರ್ಸ್ಗಳನ್ನು ವಿವಿಧ ಜಿ.ಟಿ.ಟಿ.ಸಿ ಗಳಲ್ಲಿ
ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ಇದರಿಂದ ಹೆಚ್ಚುವರಿಯಾಗಿ 15,000 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

218. ಕಲಬುರಗಿಯ ಕೆ.ಜಿ.ಟಿ.ಟಿ.ಐ.ನಲ್ಲಿ ಸಿ.ಎನ್.ಸಿ (Computer Numerical Control) ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಶ್ರೇಷ್ಠತಾ ಕೇಂದ್ರವನ್ನು 16 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

219. ಐ.ಟಿ.ಐ. ಮತ್ತು ಜಿ.ಟಿ.ಟಿ.ಸಿ. ವಿದ್ಯಾರ್ಥಿಗಳಿಗೆ ಉದ್ಯೋಗ ನಿಯುಕ್ತಿಗೆ ಅನುಕೂಲವಾಗುವಂತೆ ಆಂಗ್ಲ ಮತ್ತು ಸಂವಹನ ಕೌಶಲ್ಯ ತರಬೇತಿಯನ್ನು 5 ಕೋಟಿ ರೂ. ವೆಚ್ಚದಲ್ಲಿ ನೀಡಲಾಗುವುದು. ಇದರಿಂದ ಸುಮಾರು 40,000ಕ್ಕೂ ಹೆಚ್ಚು ಪ್ರಶಿಕ್ಷಣಾರ್ಥಿಗಳಿಗೆ ಪ್ರಯೋಜನವಾಗಲಿದೆ.

220. ಶ್ರೇಷ್ಠತೆ ಮತ್ತು ಉನ್ನತ ಸಾಧನೆಯನ್ನು ಗುರುತಿಸಲು ಮತ್ತು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಯುವ ಪ್ರಶಿಕ್ಷಣಾರ್ಥಿಗಳನ್ನು ಕೌಶಲ್ಯ ಸ್ಪರ್ಧೆಗಳಿಗೆ ಸಿದ್ಧಪಡಿಸಲು ರಾಜ್ಯ ಕೌಶಲ್ಯ ಒಲಿಂಪಿಕ್ಸ್ ಅನ್ನು ಆಯೋಜಿಸಲಾಗುವುದು.

221. ಉದ್ಯೋಗಶೀಲತೆಯನ್ನು ಹೆಚ್ಚಿಸಲು Dual System of Training (DST) ಅನ್ನು ರಾಜ್ಯದ ಎಲ್ಲಾ ಐ.ಟಿ.ಐ ಗಳಲ್ಲಿ ಸ್ಥಳೀಯ ಕೈಗಾರಿಕೆಗಳು ಹಾಗೂ ಉದ್ಯಮಗಳ ಸಹಭಾಗಿತ್ವದಲ್ಲಿ ಹಂತ ಹಂತವಾಗಿ ವಿಸ್ತರಿಸಲಾಗುವುದು.

222. ರಾಜ್ಯದಲ್ಲಿ ಉದ್ಯಮಗಳ ಬೇಡಿಕೆಗೆ ಪೂರಕವಾದ ಉತ್ತಮ ಗುಣಮಟ್ಟದ ಕೌಶಲ್ಯ ಪರಿಸರ ವ್ಯವಸ್ಥೆಯನ್ನು ರಚಿಸುವತ್ತ ಗಮನಹರಿಸಲು ಸ್ಕಿಲ್ ಕನೆಕ್ಟ್ ಸಮಿಟ್ ಅನ್ನು (Skill Connect Summit) ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಆಯೋಜಿಸಲಾಗುವುದು.

223. ಕೆ.ಎಸ್.ಡಿ.ಸಿ ಅಡಿಯಲ್ಲಿ ಸ್ಥಾಪಿಸಲಾಗಿರುವ ಅಂತಾರಾಷ್ಟ್ರೀಯ ವಲಸೆ ಕೋಶದ ಮೂಲಕ ವಿದೇಶಿ ಉದ್ಯೋಗದಾತರೊಂದಿಗೆ ಸಂವಾದಗಳನ್ನು ನಡೆಸಲಾಗುತ್ತಿದೆ. ಸದರಿ ಕೋಶವನ್ನು ಬಲಪಡಿಸಿ ಉದ್ಯೋಗಾಕಾಂಕ್ಷಿಗಳಿಗೆ ಕೌಶಲ್ಯಾಭಿವೃದ್ಧಿ ಹಾಗೂ ವಿದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಅಗತ್ಯ ಸಮನ್ವಯ ಕಾರ್ಯಗಳನ್ನು ಕೈಗೊಳ್ಳಲಾಗುವುದು.

224. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲಾ ಸಂಸ್ಥೆಗಳಲ್ಲಿ ನೇಮಕಾತಿಗಾಗಿ ಹೊರಡಿಸಲಾಗುವ ಅಧಿಸೂಚನೆಗಳನ್ನು ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಒಂದೇ ಜಾಲತಾಣದಲ್ಲಿ ಪ್ರಕಟಿಸಲಾಗುವುದು.

225. ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣವನ್ನು ಸಕ್ರಿಯಗೊಳಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ 50,000 ಎಸ್.ಹೆಚ್.ಜಿ. ಮಹಿಳಾ ಸ್ವಾಮ್ಯದ ಸೂಕ್ಷ್ಮ ಉದ್ಯಮಗಳನ್ನು ಎರಡು ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು.

226. IIM-B ಸಹಯೋಗದೊಂದಿಗೆ ಎಲ್ಲಾ 31 ಜಿಲ್ಲೆಗಳಲ್ಲಿ ಉದ್ಯಮಿಗಳನ್ನು ಉತ್ತೇಜಿಸಲು ಜಿಲ್ಲಾ ಮಟ್ಟದ ಇನ್ಕ್ಯುಬೇಶನ್ ಕೇಂದ್ರಗಳನ್ನು (DLIC) ಹಂತ ಹಂತವಾಗಿ ಸ್ಥಾಪಿಸಲಾಗುವುದು. ಮೊದಲನೇ ಹಂತದಲ್ಲಿ ಆಯ್ದ 10 ಜಿಲ್ಲೆಗಳಲ್ಲಿ ಇನ್ಕ್ಯುಬೇಶನ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

227. ಒಂದು ಲಕ್ಷ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಮೀನುಗಾರಿಕೆ, ಕುಕ್ಕುಟ, ಕುರಿ ಮತ್ತು ಮೇಕೆ ಸಾಕಾಣಿಕೆ, ಜೇನು ಸಾಕಾಣಿಕೆ ಸಂಬಂಧಿಸಿದ ಕಿರು ಉದ್ದಿಮೆಗಳನ್ನು ಸ್ಥಾಪಿಸಲು ಮತ್ತು ಅವುಗಳಿಗೆ ಸೂಕ್ತ ಮಾರುಕಟ್ಟೆ ಅವಕಾಶಗಳನ್ನು ಕಲ್ಪಿಸಲು 100 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು.

228. ಕೆಫೆ ಸಂಜೀವಿನಿ ಎಂಬ ಮಹಿಳೆಯರೇ ನಡೆಸುವ ಕ್ಯಾಂಟೀನ್ಗಳನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟಕುವ ದರದಲ್ಲಿ ಒದಗಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 7.5೦ ಕೋಟಿ ರೂ. ವೆಚ್ಚದಲ್ಲಿ 50 ಕೆಫೆಗಳನ್ನು ಸ್ಥಾಪಿಸಲಾಗುವುದು.

229. ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವ-ಸಹಾಯ ಗುಂಪುಗಳ ಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. ಇದರ ಜೊತೆಯಲ್ಲಿ 2500 ಕಾಫಿ ಕಿಯೋಸ್ಕ್ಗಳನ್ನು 25 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಮತ್ತು ಇದರ ಸಂಪೂರ್ಣ ನಿರ್ವಹಣೆಯನ್ನು ಎಸ್.ಹೆಚ್.ಜಿ. ಮಹಿಳೆಯರ ಮೂಲಕ ಮಾಡಲಾಗುವುದು.

230. ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟಕುವ ದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು 5 ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು. ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವ-ಸಹಾಯ ಗುಂಪುಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ವಹಿಸಲಾಗುವುದು.

231. ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸಕ್ರಿಯ ಭಾಗವಹಿಸುವಿಕೆ ಮತ್ತು ನಾಯಕತ್ವದೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದ ಆಡಳಿತ ಬಲಪಡಿಸುವ ಉದ್ದೇಶದಿಂದ GP-SHG ಒಗ್ಗೂಡಿಸುವಿಕೆಯ ನೀತಿಯನ್ನು ಜಾರಿಗೊಳಿಸಲಾಗುವುದು.

What did women and youth get in this year's state budget? Here's the complete information
Share. Facebook Twitter LinkedIn WhatsApp Email

Related Posts

BREAKING : ಕಾವೇರಿ ನದಿಯಲ್ಲಿ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ ಶವ ಪತ್ತೆ.!

11/05/2025 7:39 AM1 Min Read

BIG NEWS : ʻಯುವನಿಧಿ ಯೋಜನೆʼ ಫಲಾನುಭವಿಗಳೇ ಗಮನಿಸಿ : 3 ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ.!

11/05/2025 7:32 AM1 Min Read

BIG NEWS : ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ : CM ಸಿದ್ದರಾಮಯ್ಯ ಎಚ್ಚರಿಕೆ

11/05/2025 6:51 AM2 Mins Read
Recent News

BREAKING : ಕಾವೇರಿ ನದಿಯಲ್ಲಿ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ ಶವ ಪತ್ತೆ.!

11/05/2025 7:39 AM

ಕದನ ವಿರಾಮ ಘೋಷಣೆ : ‘ಭಯೋತ್ಪಾದನೆ ವಿರುದ್ಧ ಯಾವುದೇ ರಾಜಿ ಇಲ್ಲ’: ಜೈಶಂಕರ್

11/05/2025 7:38 AM

BIG NEWS : ʻಯುವನಿಧಿ ಯೋಜನೆʼ ಫಲಾನುಭವಿಗಳೇ ಗಮನಿಸಿ : 3 ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ.!

11/05/2025 7:32 AM

IPL – 2025 : ಇಂದು IPL ಪುನರಾರಂಭದ ಬಗ್ಗೆ ಬಿಸಿಸಿಐ ಚರ್ಚೆ: ರಾಜೀವ್ ಶುಕ್ಲಾ

11/05/2025 7:15 AM
State News
KARNATAKA

BREAKING : ಕಾವೇರಿ ನದಿಯಲ್ಲಿ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ ಶವ ಪತ್ತೆ.!

By kannadanewsnow5711/05/2025 7:39 AM KARNATAKA 1 Min Read

ಮಂಡ್ಯ : ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಇರುವ ಕಾವೇರಿ ನದಿಯಲ್ಲಿ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ…

BIG NEWS : ʻಯುವನಿಧಿ ಯೋಜನೆʼ ಫಲಾನುಭವಿಗಳೇ ಗಮನಿಸಿ : 3 ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ.!

11/05/2025 7:32 AM

BIG NEWS : ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ : CM ಸಿದ್ದರಾಮಯ್ಯ ಎಚ್ಚರಿಕೆ

11/05/2025 6:51 AM

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಶೇ.5 ರಷ್ಟು ತೆರಿಗೆ ರಿಯಾಯಿತಿ ಜೂನ್ 30 ರವರೆಗೆ ಅವಧಿ ವಿಸ್ತರಣೆ.!

11/05/2025 6:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.