ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ( Farmer CM Siddaramaiah ) ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ ಅವರು, ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ ಎಂದರು.
BIG NEWS: ಆ.6ರವರೆಗೆ ‘ದಕ್ಷಿಣ ಕನ್ನಡ ಜಿಲ್ಲೆ’ಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ ‘ನಿಷೇಧಾಜ್ಞೆ ಜಾರಿ’
ಶಾಸಕ ತನ್ವೀರ್ ಸೇಠ್ ಮೇಲೆ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಯ ಸುಮಾರು 200 ಜನರನ್ನು ದಾಳಿ ನಡೆಸಿದ ಪ್ರಕರಣದಿಂದ ಅವರನ್ನು ಮುಕ್ತಗೊಳಿಸಲಾಗಿತ್ತು. ಅವರು ಈಗ ಪುನ: ಸಮಾಜಘಾತುಕ ಕೃತ್ಯಗಳನ್ನು ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಕೇವಲ ಹೇಳಿಕೆಗಳನ್ನು ನೀಡುತ್ತಾರೆ ಎಂದರು.
ಸರ್ಕಾರ ಕ್ಷಿಪ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಜನರ ಮುಂದಿವೆ. ಎಸ್ಡಿಪಿಐ, ಪಿಎಫ್ಐ ಸಂಘಟನೆಗಳಿಗೆ ಫಂಡಿಂಗ್ ಮಾಡುತ್ತಿರುವುದೇ ಬಿಜೆಪಿ ಪಕ್ಷ ಎಂಬುದು ಅತ್ಯಂತ ಹಾಸ್ಯಾಸ್ಪದವಾದ ಹೇಳಿಕೆ. ಇದು ಕಾಂಗ್ರೆಸ್ಸಿನ ರಾಜಕೀಯ ದಿವಾಳಿತನವನ್ನು ಬಿಂಬಿಸುತ್ತದೆ. ಸರ್ಕಾರದಲ್ಲಿ ಯಾರೂ ರಾಜಿನಾಮೆ ಕೊಡುವ ಅಗತ್ಯವಿಲ್ಲ. ಇಂತಹ ಸಂದರ್ಭದಲ್ಲಿ ಕರ್ತವ್ಯದಿಂದ ವಿಮುಖರಾಗುವುದಿಲ್ಲ. ಗಟ್ಟಿಯಾಗಿ ನಿಂತು ಕಠಿಣ ನಿಲುವುಗಳನ್ನು ತೆಗೆದುಕೊಂಡು ಕೆಲಸ ಮಾಡಲಾಗುತ್ತಿದೆ ಎಂದರು.
Breaking News: ಇಂದಿನಿಂದ ಆ.1ರವರೆಗೆ ‘ದಕ್ಷಿಣ ಕನ್ನಡ ಜಿಲ್ಲೆ’ಯಾಧ್ಯಂತ ‘ಮದ್ಯ ಮಾರಾಟ’ ನಿಷೇಧಿಸಿ ಡಿಸಿ ಆದೇಶ