ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದ ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬರು ಹಳಿಗೆ ಜಿಗಿದಿದ್ದು, ರೈಲು ಸಂಚಾರ ವ್ಯತ್ಯಯಗೊಂಡಿತ್ತು. ಈ ಘಟನೆಯ ಕುರಿತಂತೆ ಬಿಎಂಆರ್ ಸಿಎಲ್ ಏನು ಹೇಳಿದೆ ಅಂತ ಮುಂದೆ ಓದಿ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ BMRCL, ಇಂದು ರಾತ್ರಿ 07.12 ಗಂಟೆಗೆ ಪ್ಲಾಟ್‌ಫಾರ್ಮ್ ಕೊನೆಯಲ್ಲಿ ಕಾಯುತ್ತಿದ್ದ ಪ್ರಯಾಣಿಕರೊಬ್ಬರು ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಬರುವ ರೈಲಿನ ಮುಂದೆ ಜಿಗಿದಿದ್ದಾರೆ. ತಕ್ಷಣ ಬಿಎಂಆರ್‌ಸಿಎಲ್ ಸಿಬ್ಬಂದಿ ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಸಂಜೀವಿನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದೆ.
ಮೇಲಿನ ಘಟನೆಯ ಸಮಯದಲ್ಲಿ ನಾಲ್ಕು ರೈಲುಗಳನ್ನು ಇತರ ನಿಲ್ದಾಣದ ಪ್ಲಾಟ್‌ಫಾರ್ಮ್‌ಗಳಲ್ಲಿ ಸ್ಥಗಿತಗೊಂಡ ರೈಲುಗಳಿಂದ ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಸುರಕ್ಷಿತವಾಗಿ ಹೊರತರಲಾಯಿತು . ಮೇಲಿನ ಅವಧಿಯಲ್ಲಿ ಯಶವಂತಪುರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಹಸಿರು ಮಾರ್ಗದ ಕಾರ್ಯಾಚರಣೆ ನಡೆಸಲಾಯಿತು ಎಂದಿದೆ.
ರಾತ್ರಿ 8 .00 ಗಂಟೆಯಿಂದ ಸಂಪೂರ್ಣ ಹಸಿರು ಮಾರ್ಗದಲ್ಲಿ ಕಾರ್ಯಾಚರಣೆ ಪುನರಾರಂಭಿಸಲಾಗಿದೆ ಎಂಬುದಾಗಿ ಮಾಹಿತಿ ನೀಡಿದೆ.
ಗಮನಿಸಿ: ‘KSRTC ತಾಂತ್ರಿಕ ಸಹಾಯಕ ಹುದ್ದೆ’ಯ ‘ಸಂಭವನೀಯ ಆಯ್ಕೆ ಪಟ್ಟಿ’ ಪ್ರಕಟ
BREAKING : ಅಪಹರಣಕ್ಕೊಳಗಾದ ಸರಕು ಹಡಗು ನೌಕಾಪಡೆ ವಶಕ್ಕೆ ; ಕಡಲ್ಗಳ್ಳರಿಗೆ ಎಚ್ಚರಿಕೆ