ಬೆಂಗಳೂರು : ನಾಳೆಯಿಂದ ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ. ಆದರೆ ಇದು ಜಾತಿಗಣತಿ ಅಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ ನಾಯ್ಕ್ ಹೇಳಿಕೆ ನೀಡಿದರು.
ಬೆಂಗಳೂರಿನಲ್ಲಿ ಮಾತನಾಡಿದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದ ನಾಯ್ಕ್, ನಾಳೆಯಿಂದ ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ. ಇದು ಜಾತಿಗಣತಿ ಅಲ್ಲ. ನಾಳೆಯಿಂದ ನಡೆಯುತ್ತಿರುವುದು ಜಾತಿಗಣತಿ ಅಲ್ಲ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ಸಾಮಾಜಿಕ ಶೈಕ್ಷಣಿಕಹಾಗು ಆರ್ಥಿಕ ಸ್ಥಿತಿಗತಿ ತಿಳಿಯುವುದಕ್ಕಾಗಿ ಸಮೀಕ್ಷೆ ಮಾಡುತ್ತಿದ್ದೇವೆ. ಕೆಲವರು ಇದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ನಮ್ಮ ಸಮೀಕ್ಷೆ ಪೂರ್ಣಗೊಳ್ಳುವುದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಮಧುಸೂಧನ್ ನಾಯಕ್ ತಿಳಿಸಿದರು.