ಬೆಳ್ತಂಗಡಿ: ನಿನ್ನೆ ಅಕ್ರಮ ಕಲ್ಲು ಗಣಿಕಾರಿಕೆ ಹಿನ್ನೆಲೆಯಲ್ಲಿ ಬಂಧಿತರಾಗಿದ್ದರೆನ್ನಲಾದ ಬಿಜೆಪಿ ಬೆಳ್ತಂಗಡಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜಾ ತಮ್ಮ ಬೆಂಬಲಿಗರೊಂದಿಗೆ ಶನಿವಾರ ರಾತ್ರಿ ಬೆಳ್ತಂಗಡಿ ಠಾಣೆಯಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಠಾಣೆಯಲ್ಲೇ ಪಿಎಸ್ಐಗೆ ಪೊಲೀಸ್ ಠಾಣೆ ಏನು ನಿಮ್ಮಪ್ಪಂದಾ ಅಂತ ಧಮ್ಕಿ ಕೂಡ ಹಾಕಿದ್ದಾರೆ ಎನ್ನಲಾಗಿದೆ. ಈ ವೀಡಿಯೋ ವೈರಲ್ ಆಗಿತ್ತು. ಈ ಬೆನ್ನಲ್ಲೇ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮೆಲಂತಬೆಟ್ಟು ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಕ್ವಾರೆಗೆ ಶನಿವಾರ ಸಂಜೆ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಬೆಳ್ತಂಗಡಿ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ ಸ್ಫೋಟಕಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಈ ವೇಳೆ ಕಲ್ಲು ಕ್ವಾರೆ ನಡೆಸುತ್ತಿದ್ದ ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಸೇರಿದಂತೆ ಕೆಲವರನ್ನು ಪೊಲೀಸರು ಬಂಧಿಸಿದ್ದರು.
ಈ ವಿಷಯ ತಿಳಿದಂತ ಶಾಸಕ ಹರೀಶ್ ಪೂಂಜಾ, ಬೆಳ್ತಂಗಡಿ ಪೊಲೀಸ್ ಠಾಣೆಗೆ ತಮ್ಮ ಬೆಂಬಲಿಗರೊಂದಿಗೆ ಧಾವಿಸಿ, ಠಾಣೆಯಲ್ಲೇ ಧರಣಿ, ಪ್ರತಿಭಟನೆಯನ್ನು ಶನಿವಾರ ನಡೆಸಿದ್ದಾರೆ. ಜೊತೆಗೆ ತಮ್ಮ ಆಪ್ತ ಶಶಿರಾಜ್ ಶೆಟ್ಟಿಯನ್ನು ಬಿಡುಗಡೆ ಮಾಡುವಂತೆಯೂ ಆಗ್ರಹಿಸಿದ್ದರು. ಈ ಪ್ರತಿಭಟನೆ ಸಂದರ್ಭದಲ್ಲಿ ಠಾಣೆಯ ಪಿಎಸ್ಐ ಹಾಗೂ ಶಾಸಕ ಹರೀಶ್ ಪೂಂಜಾ ನಡುವೆ ವಾಗ್ವಾದ ಕೂಡ ನಡೆದಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಪಿಎಸ್ಐಗೆ ಪೊಲೀಸ್ ಠಾಣೆ ಏನು ನಿಮ್ಮಪ್ಪಂದ ಅಂತ ಧಮ್ಕಿ ಹಾಕಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದ ಬಿಜೆಪಿಯ ಯುವಮೋರ್ಚಾ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡರೆ ಬೆಳ್ತಂಗಡಿಯ ಬಿಜೆಪಿ ಶಾಸಕ @HPoonja ಅಕ್ರಮ ಲೂಟಿಕೋರರ ಪರ ನಿಂತು ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡುವ ಪೊಲೀಸರ ವಿರುದ್ಧವೇ ಗೂಂಡಾ ವರ್ತನೆ ತೋರಿದ್ದಾರೆ.
ಪೊಲೀಸರ ಮೇಲಿನ ಶಾಸಕ ಹರೀಶ್ ಪೂಂಜಾ ಅವರ ಈ… pic.twitter.com/khBSusA0Ue
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 19, 2024
ಹೀಗೆ ಶಾಸಕ ಹರೀಶ್ ಪೂಂಜಾ ಪಿಎಸ್ಐಗೆ ಧಮ್ಕಿ ಹಾಕಿದಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ವೀಡಿಯೋ ವೈರಲ್ ಆಗುತ್ತಿದ್ದಂತೆ ಹಿರಿಯ ಪೊಲೀಲ್ ಅಧಿಕಾರಿಗಳ ಸೂಚನೆ ಮೇರೆಗೆ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪಿಎಸ್ಐ ಮುರುಳೀಧರ್ ನಾಯ್ಕ್ ನೀಡಿದಂತ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353, 504ರಡಿ ಪ್ರಕರಣ ದಾಖಲಾಗಿದೆ.
PM Modi: ‘ತೃಣಮೂಲ’ ಸುಳ್ಳುಗಳನ್ನು ಹರಡುತ್ತಿದೆ: ಮಮತಾ ಬ್ಯಾನರ್ಜಿ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ
ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ‘ಡಾ.ಕೆ.ಕೆ ಮಂಜುನಾಥ್’ ಗೆಲ್ಲಿಸಿ- ಮಧು ಬಂಗಾರಪ್ಪ ಮನವಿ