ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿ ಸ್ವಕ್ಷೇತ್ರದಲ್ಲೇ ಶಾಲೆಯ ದುಸ್ಥಿತಿ ಇದಾಗಿದೆ. ಚನ್ನಪಟ್ಟಣದ ತಟ್ಟೆಕೆರೆ ಸರ್ಕಾರಿ ಶಾಲೆಯಲ್ಲಿ ಮಳೆ ನಿಂತು ಅವಾಂತರ ಸೃಷ್ಟಿಯಾಗಿದ್ದು, ಶಿಕ್ಷಣ ಇಲಾಖೆ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಕಿಡಿಕಾರಿದ್ದಾರೆ.
BREAKING NEWS: ವಿಧಾನಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ | Karnataka Assembly
ಪ್ರವಾಹ ಕಳೆದು ತಿಂಗಳಾದರೂ ಶಾಲಾ ಆವರಣದ ನೀರು ಹೊರಹಾಕದೇ ನಿರ್ಲಕ್ಷ್ಯ ವಹಿಸಲಾಗಿದ್ದು, ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ. 1 ರಿಂದ 7ನೇ ತರಗತಿವರೆಗೆ 64 ಮಕ್ಕಳು ಓದುತ್ತಿದ್ದಾರೆ. ಶಾಲಾ ಆವರಣದಲ್ಲಿ ನೀರು ತುಂಬಿಕೊಂಡು ತಿಂಗಳು ಕಳೆದರೂ ಅಧಿಕಾರಿಗಳು ಮಾತ್ರ ನೀರು ಹೊರಹಾಕಿಲ್ಲ. ಹೀಗಾಗಿ ಒಂದು ತಿಂಗಳಿಂದಲೂ ತಟ್ಟೆಕೆರೆ ಬೀರೇಶ್ವರ ದೇವಾಲಯದ ಬಳಿ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲಾಗುತ್ತಿದೆ. ಶಾಲೆಯ ವಿದ್ಯಾರ್ಥಿಗಳು ಹೊರಗೆ ಪಾಠ ಕೇಳುತ್ತಿದ್ದಾರೆ. ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.