ಕೊಪ್ಪಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ಬರದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಅವಾಚ್ಯ ಪದಗಳನ್ನು ಬಳಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೊಪ್ಪಳದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾತ್ ಅಂಗಡಿಗೆ ವಾಗ್ದಾಳಿ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತನಾಡಲು ಇವನ್ಯಾವನೋ ಪಟಗೋಸಿ ಎಂದು ತಿವಿದಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿ ಈ ಕುರಿತಂತೆ ಮಾತನಾಡಿದ ಅವರು, ಇದನ್ನು ಇಲ್ಲಿಗೆ ನಿಲ್ಲಿಸಿದರೆ ಒಳ್ಳೆಯದು ಇಲ್ಲ ಅಂದರೆ ನಮ್ಮ ಭಾಷೆಯಲ್ಲಿ ಹೇಳಬೇಕಾಗುತ್ತದೆ. ಉತ್ತರ ಕರ್ನಾಟಕದ ಭಾಷೆಯಲ್ಲಿ ಹೇಳಬೇಕಾಗುತ್ತದೆ. ಉತ್ತರ ಕರ್ನಾಟಕದ ಭಾಷೆ ಹೇಗಿದೆ ಎಂದು ಎಲ್ಲರಿಗೂ ಗೊತ್ತಿದೆ ಎಂದ್ ಶಿವರಾಜ್ ತಂಗಡಗಿ ಕಿಡಿ ಕಾರಿದರು.
ಸಿಎಂ ರಾಜ್ಯದಲ್ಲಿ ಅಷ್ಟೇ ಅಲ್ಲ ದೇಶದಲ್ಲಿ ಬೆಂಬಲಿಗರನ್ನು ಹೊಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತನಾಡಲು ಇವನ್ಯಾವ ಪುಟಗೋಸಿ? ಟೀಕೆ ಮಾಡಬೇಕು ನಾವು ಮಾಡ್ತೀವಿ ಆದರೆ ಈ ರೀತಿ ಭಾಷೆ ಬಳಸುವುದಿಲ್ಲ ಎಂದ್ ಶಿವರಾಜ್ ತಂಗಡಗಿ ಕಿಡಿ ಕಾರಿದರು.