ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು 25 ಪರಿಷ್ಕೃತ ಸ್ಥಾಯಿ ವೇತನ ಶ್ರೇಣಿಗಳನ್ನು, ವೇತನ ಸಂಬಂಧಿತ ಭತ್ಯೆಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಿ ಆದೇಶ ಹೊರಡಿಸಿದೆ.
ಮೇಲೆ (2) ರಲ್ಲಿ ಓದಲಾದ ದಿನಾಂಕ 17.08.2024ರ ಅಧಿಸೂಚನೆಯಲ್ಲಿ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024ನ್ನು ಅಧಿಸೂಚಿಸಲಾಗಿರುತ್ತದೆ. ಆದುದರಿಂದ, ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ನಿಗದಿಪಡಿಸುವ, ಪಿಂಚಣಿ ಪರಿಷ್ಕರಣೆ ಮತ್ತು ವೇತನ ಸಂಬಂಧಿತ ಭತ್ಯೆಗಳ ಪರಿಷ್ಕರಣೆ ಕುರಿತಂತೆ ವಿಸ್ತತವಾದ ಆದೇಶಗಳನ್ನು ಹೊರಡಿಸುವುದು ಅಗತ್ಯವೆಂದು ಪರಿಗಣಿಸಲಾಗಿರುತ್ತದೆ. ಅದರಂತೆ, ರಾಜ್ಯ ಸರ್ಕಾರವು ಈ ಕೆಳಕಂಡ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ.