ಬೀದರ್ : ರಾಜ ಕಾಂಗ್ರೆಸ್ ಸರ್ಕಾರ ಬೆಳೆಸಲು ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು 100 ಕೋಟಿ ಕೊಟ್ಟು ಖರೀದಿಸುತ್ತಿದ್ದಾರೆ ಎಂದು ಮಂಡ್ಯ ಜಿಲ್ಲೆಯ ಶಾಸಕ ಗಣಿಗ ರವಿಕುಮಾರ್ ಗಂಭೀರವಾದ ಆರೋಪ ಮಾಡಿದ್ದರು. ಇನ್ನು ಈ ವಿಚಾರವಾಗಿ ಸಚಿವ ಈಶ್ವರ ಖಂಡ್ರೆ ಅವರು ನೂರು ಕೋಟಿ ಕೊಟ್ಟು ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡುತ್ತಾರೆ ಅಂದರೆ ಅವರಿಗೆ ಹಣ ಎಲ್ಲಿಂದ ಬರುತ್ತದೆ? ಇಡಿ ಐಟಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಬೀದರ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಬೀಳಿಸುವ ಬಿಜೆಪಿಯ ತಿರುಕನ ಕನಸು ಎಂದಿಗೂ ಸಹ ಸಾಧ್ಯವಿಲ್ಲ. ಬಿಜೆಪಿಯವರು ಸರ್ಕಾರ ಬೀಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಒಬ್ಬ ಶಾಸಕನನ್ನು ಖರೀದಿಸಲು 100 ಕೋಟಿ ಕೊಡುತ್ತಾರೆ ಅಂದರೆ ಶಾಸಕರ ಖರೀದಿಗೆ ಬಿಜೆಪಿಯವರಿಗೆ ಹಣ ಎಲ್ಲಿಂದ ಬರುತ್ತದೆ? ಇಡಿ ಐಟಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಬಿಜೆಪಿ ವಿರುದ್ಧ ಸಚಿವ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ.
ಶಾಸಕ ಗಣಿಗ ರವಿಕುಮಾರ್ ಹೇಳಿದ್ದೇನು?
ಕರ್ನಾಟಕ ಸರ್ಕಾರವನ್ನು ಕೆಡವಲು ಬಿಜೆಪಿ ಸಂಚು ರೂಪಿಸುತ್ತಿದೆ. ರಾಜ್ಯ ಸರ್ಕಾರವನ್ನು ಬೀಳಿಸಲು ರಾಜ್ಯದ ಮೂವರು ಸಂಸದರು ಪ್ರಧಾನಿ ಮೋದಿ ಅವರಿಗೆ ಮಾತು ಕೊಟ್ಟಿದ್ದಾರೆ. ಹೀಗಾಗಿ ಬಿಜೆಪಿಯ ಬ್ರೋಕರ್ಗಳು ನಮ್ಮ ಶಾಸಕರಿಗೆ 100 ಕೋಟಿ ರೂ. ಆಫರ್ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಕ ರವಿ ಆರೋಪ ಮಾಡಿದ್ದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರವನ್ನು ಬೀಳಿಸಲು ಸಂಚು ನಡೆಯುತ್ತಿದೆ. ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿಯವರು 100 ಕೋಟಿ ರೂ. ಆಫರ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ, ಅಲುಗಾಡಿಸಲು ಆಗಲ್ಲ. ಆದರೆ, ಬಿ.ಎಲ್.ಸಂತೋಷ್, ಶೋಭಾ ಕರಂದ್ಲಾಜೆ, ಹೆಚ್.ಡಿ.ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಲಾಗುತ್ತಿದೆ. ಕಾಂಗ್ರೆಸ್ ಐದು ವರ್ಷ ಅಧಿಕಾರದಲ್ಲಿರುತ್ತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆ ಎಂದು ಹೇಳಿದರು.
ಸರ್ಕಾರ ಬೀಳಿಸುವುದಾಗಿ ಪ್ರಧಾನಿ ಮೋದಿ ಅವರಿಗೆ ಐದು ಜನ ಮಾತು ಕೊಟ್ಟಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯ ಬ್ರೋಕರ್ಗಳು ಡಿಮ್ಯಾಂಡ್ ಮಾಡುತ್ತಿದ್ದಾರೆ. ನಿತ್ಯ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ, ನಮ್ಮ ಶಾಸಕರು ಬಲಿಯಾಗಲ್ಲ. ನಾವು ಸಾಕ್ಷಿ ಕಲೆ ಹಾಕುತ್ತಿದ್ದೇವೆ, ಇಡಿ ಅಧಿಕಾರಿಗಳಿಗೆ ಕೊಡುತ್ತೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಟ್ರಾಂಗ್ ಇದೆ. ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿಯ ಯಾರಿಗೂ ತಾಕತ್ತಿಲ್ಲ ಎಂದರು.