ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಮುಖಂಡರೊಬ್ಬರನ್ನು ಎನ್ಐಎ ಬಂಧಿಸಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಕಾರಣ ಎನ್ನುವಂತೆ ಬೊಬ್ಬೆ ಹೊಡೆದಂತ ಬಿಜೆಪಿಯವರು ಈಗ ಏನು ಹೇಳ್ತಾರೆ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ ಎಂದಿದ್ದಾರೆ.
ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಕಾರ್ಯಕರ್ತನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರ್‌ಎಸ್‌ಎಸ್ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ? ಎಂದು ಕೇಳಿದ್ದಾರೆ.
ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇ ಬೇಕು ಎಂದು ಒತ್ತಾಯಿಸಿದ್ದಾರೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ.
ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಕಾರ್ಯಕರ್ತನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ… pic.twitter.com/AzLzbPHebj
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 5, 2024
BREAKING: ಮಾಜಿ ಸಚಿವ ಆರ್.ಶಂಕರ್ ಬಿಜೆಪಿಗೆ ಗುಡ್ ಬೈ, ಕಾಂಗ್ರೆಸ್ ಪಕ್ಷ ಸೇರ್ಪಡೆ