ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿ ಆಗಿ ಕೆಲವು ವಿಚಾರಗಳ ಕುರಿತು ಚರ್ಚೆ ಮಾಡಿದ್ದರು. ಈ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ ಯಾವಾಗ ಏನು ಆಗಬೇಕೋ ಅದು ಆಗೇ ಆಗುತ್ತೆ ಎಂದು ಮಾರ್ಮಿಕವಾಗಿ ನುಡಿದರು.
ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ಮುಂದೆ ರಾಜಕೀಯ ವಿಚಾರ ಮಧ್ಯಮಗಳ ಮುಂದೆ ಮಾತನಾಡಲ್ಲ, ಸಮಯ ಬಂದಾಗ ಅದಾಗಿ ಅದೇ ಗೊತ್ತಾಗುತ್ತೆ. ನಮ್ಮಲಿ ಯಾವುದೇ ಸಮಸ್ಯೆ ಇಲ್ಲ, ಯಾವ ರಾಜಕೀಯವು ಇಲ್ಲ. ಯಾವಾಗ ಏನೇನು ಆಗಬೇಕೋ ಅದು ಆಗೇ ಆಗುತ್ತೆ ಏನೇನೋ ತೀರ್ಮಾನ ಆಗಿವೆಯೋ ಅವು ಚಾಲ್ತಿಗೆ ಬರುತ್ತವೆ ಎಂದು ತಿಳಿಸಿದರು.
ಇನ್ನು ಪಕ್ಷದಲ್ಲಿ ಗೊಂದಲವಿದೆ. ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ, ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ. ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಇದೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಅನ್ನದಾನೆಶ್ವರ ಶ್ರೀ ಭೇಟಿ ನೀಡಿದರು. ಬೆಂಗಳೂರಿನ ಸದಾಶಿವ ನಗರದಲ್ಲಿ ಇರುವ ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ್ದಾರೆ.








