ಅಲಹಾಬಾದ್ : ಮದುವೆಯಾದ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಶನ್ನಲ್ಲಿ ಇರುವುದನ್ನು ಕಾನೂನು ಅಪರಾಧ ಎಂದು ಪರಿಗಣಿಸುವುದಿಲ್ಲ. ಇಬ್ಬರೂ ಸ್ವಯಂ ಇಚ್ಛೆಯಿಂದ ಸಂಬಂಧದಲ್ಲಿ ಇದ್ದರೆ, ಅದು ಅವರ ವೈಯಕ್ತಿಕ ಆಯ್ಕೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಪ್ರಕರಣದಲ್ಲಿ, ವಿವಾಹಿತ ಪುರುಷ ಮತ್ತು ಮಹಿಳೆ ಒಟ್ಟಿಗೆ ಲಿವ್-ಇನ್ ರಿಲೇಶನ್ನಲ್ಲಿ ವಾಸಿಸುತ್ತಿದ್ದರು. ಇವರಿಗೆ ಕುಟುಂಬದಿಂದ ಮತ್ತು ಸಮಾಜದಿಂದ ಬೆದರಿಕೆ ಎದುರಾಗುತ್ತಿದ್ದ ಹಿನ್ನೆಲೆ, ತಮ್ಮ ಜೀವಕ್ಕೆ ರಕ್ಷಣೆ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು.
ವಿಚಾರಣೆ ನಡೆಸಿದ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದ್ದು— “ಮದುವೆಯಾದ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಶನ್ನಲ್ಲಿ ಇರುವುದನ್ನು ಕಾನೂನು ಅಪರಾಧ ಎಂದು ಪರಿಗಣಿಸುವುದಿಲ್ಲ. ಇಬ್ಬರೂ ಸ್ವಯಂ ಇಚ್ಛೆಯಿಂದ ಸಂಬಂಧದಲ್ಲಿ ಇದ್ದರೆ, ಅದು ಅವರ ವೈಯಕ್ತಿಕ ಆಯ್ಕೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಆದರೆ ಕೋರ್ಟ್ ಮತ್ತೊಂದು ಮುಖ್ಯ ವಿಚಾರವನ್ನು ಕೂಡ ಒತ್ತಿ ಹೇಳಿದೆ. ಇಂತಹ ಸಂಬಂಧಗಳು ಸಮಾಜದ ದೃಷ್ಟಿಯಲ್ಲಿ ಒಪ್ಪಿಗೆಯನ್ನು ಪಡೆಯದೇ ಇರಬಹುದು, ಆದರೆ ಕಾನೂನಿನ ದೃಷ್ಟಿಯಲ್ಲಿ ಇದನ್ನು ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ವೈಯಕ್ತಿಕ ಸ್ವಾತಂತ್ರ್ಯ ಮತ್ತು ಜೀವನ ಆಯ್ಕೆಯನ್ನು ಗೌರವಿಸುವುದು ಮುಖ್ಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.








