ಬೆಂಗಳೂರು : ಸಿದ್ದರಾಮಯ್ಯ ಅವರು ಬಂದಾಗ ಅವರ ಬಳಿ ಸಮಸ್ಯೆ ಹೇಳಿ ಸುಮ್ಮನಾಗಬಾರದು, ಸಮಸ್ಯೆ ಹೇಳಿ ನಂತರ ಆಗಾಗ್ಗೆ ಹೋಗಿ ಅವರ ತಲೆ ನಿನ್ನುತ್ತಿರಬೇಕು, ಸಿಎಂ ಅವರಿಗೆ ಕೆಲಸದ ಭಾರ ತುಂಬಾ ಇರುತ್ತದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್ ಹಾಸ್ಯ ಚಟಾಕಿ ಹಾರಿಸಿದರು.

ಹೌದು ನಿರ್ಮಾಪಕರ ಸಂಘದ ಹೊಸ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ನಟರಾದ ಶಿವರಾಜ್ ಕುಮಾರ್, ಜಗ್ಗೇಶ್ ಹಾಗೂ ಇನ್ನೂ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮುಂದೆ ಬೇಡಿಕೆಗಳ ಸರಮಾಲೆಯನ್ನೇ ಇಡಲಾಯ್ತು. ಚಿತ್ರರಂಗದ ಸಮಸ್ಯೆಗಳ ಬಗ್ಗೆ ಒಬ್ಬರ ಹಿಂದೊಬ್ಬರು ಹೇಳುತ್ತಲೇ ಇದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಜಗ್ಗೇಶ್, ಚಿತ್ರರಂಗದ ಕೆಲಸಗಳನ್ನು ಪಟ್ಟು ಹಿಡಿದು ಮಾಡಿಸಬೇಕು, ಸಿದ್ದರಾಮಯ್ಯ ಅವರು ಬಂದಾಗ ಹೇಳಿ ಸುಮ್ಮನಾಗುವುದಲ್ಲ ಆಗಾಗ್ಗೆ ಹೋಗಿ ಅವರ ತಲೆ ತಿನ್ನುತ್ತಿರಬೇಕು, ಸಿಎಂ ಅವರಿಗೆ ಕೆಲಸದ ಭಾರ ತುಂಬಾ ಇರುತ್ತದೆ ಆಗಾಗ ಹೋಗಿ ತಲೆ ಕೆಡಸಿದರೆ ನಮ್ಮ ಕೆಲಸ ಬೇಗ ಆಗುತ್ತವೆ ಎಂದಿದ್ದಾರೆ. ಜಗ್ಗೇಶ್​ರ ಹಾಸ್ಯ ಭರಿತ ಮಾತುಗಳಿಗೆ ಸಭೆ ನಗೆಗಡಲಲ್ಲಿ ತೇಲಿತು.

Share.
Exit mobile version