ಬೆಂಗಳೂರು: ಇಂದು ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಮೋದಿಯವರೇ ಮಾತುಕೊಟ್ಟ 20 ಕೋಟಿ ಉದ್ಯೋಗ ಎಲ್ಲಿ ಎಂಬುದಾಗಿ ಸರಣಿ ಎಕ್ಸ್ ಮಾಡಿ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, 2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ? ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು? ನಿಜ ಹೇಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ನೀವು ಸೃಷ್ಟಿಸಿರುವ ಉದ್ಯೋಗಗಳ ಸಂಖ್ಯೆ ಎಷ್ಟು? ಎಂದು ಪ್ರಶ್ನಿಸಿದ್ದಾರೆ.
ನರೇಂದ್ರ ಮೋದಿಯವರೇ, ನಿಮ್ಮದೇ ಸಚಿವ ಸಂಪುಟದ ಜಿತೇಂದರ್ ಸಿಂಗ್ ಅವರು 2022ರ ಜುಲೈ ನಲ್ಲಿ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ “ 2014-15 ಮತ್ತು 2021 -22ರ ಅವಧಿಯ ನಡುವೆ ಕೇವಲ 7 ಲಕ್ಷ ಹೊಸ ಉದ್ಯೋಗಗಳು ಮಾತ್ರ ಸೃಷ್ಟಿಯಾಗಿತ್ತು ಎಂದು ಹೇಳಿದ್ದರು. ಅಂತಿಮ ಸತ್ಯ ಇದೇ ಇರಬಹುದಾ? ಎಂದು ಕೇಳಿದ್ದಾರೆ.
2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ? ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು? ನಿಜ ಹೇಳಿ ಪ್ರಧಾನಮಂತ್ರಿ @narendramodi ಅವರೇ ನೀವು… pic.twitter.com/P6gVwh6QdV
— Siddaramaiah (@siddaramaiah) February 13, 2024
ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸುವ ಪ್ರಧಾನಿ ಮೋದಿ ಅವರು ಈಗ ತರಾತುರಿಯಿಂದ ಉದ್ಯೋಗ ಮೇಳಗಳನ್ನು ಆಯೋಜಿಸಲು ಕಾರಣ ಯುವಜನರ ಮೇಲಿನ ಕಾಳಜಿಯೇ? ಇಲ್ಲವೇ ಉದ್ಯೋಗ ಇಲ್ಲದೆ ರೊಚ್ಚಿಗೆದ್ದಿರುವ ನಿರುದ್ಯೋಗಿ ಯುವಜನರ ಆಕ್ರೋಶವೇ? ಎಂದು ಕೇಳಿದ್ದಾರೆ.
ಪ್ರಧಾನಿಯವರೇ, ಈಗ ನಿಮ್ಮದೇ ಬಿಜೆಪಿ ಸರ್ಕಾರದ ಅಧಿಕೃತ ಅಂಕಿಅಂಶಗಳನ್ನು ಮುಂದಿಟ್ಟುಕೊಂಡು ಮಾತಾಡೋಣ. 2017-18ರ ಎನ್.ಎಸ್.ಎಸ್.ಒ ವರದಿಯ ಪ್ರಕಾರ ಕಳೆದ 45 ವರ್ಷಗಳಲ್ಲೇ ದೇಶದ ನಿರುದ್ಯೋಗ ಪ್ರಮಾಣ ಅತಿ ಗರಿಷ್ಠ ಮಟ್ಟಕ್ಕೆ, ಅಂದರೆ 6.1 ಗೆ ತಲುಪಿದೆ. 2011-12ರಲ್ಲಿ ಈ ಪ್ರಮಾಣ ಶೇ 2.2 ಆಗಿತ್ತು ಎಂದು ಕಿಡಿಕಾರಿದ್ದಾರೆ.
ನೆನಪಿರಲಿ, ಕೋವಿಡ್ ಕಾಲದಲ್ಲಿ ನಿರುದ್ಯೋಗದ ಪ್ರಮಾಣ ಜಗತ್ತಿನಾದ್ಯಂತ ಹೆಚ್ಚಾಗಿದ್ದು ನಿಜ. ಆದರೆ ನಮ್ಮಲ್ಲಿ ಇದು 2014-15ರಿಂದಲೇ ಇದು ಪ್ರಾರಂಭವಾಗಿತ್ತು. 2016ರಲ್ಲಿ ನಡೆದ ನೋಟು ಅಮಾನ್ಯೀಕರಣದಿಂದ ಕೈಗಾರಿಕೆಗಳೆಲ್ಲ ಮುಚ್ಚಿಹೋಗಿ ನಿರುದ್ಯೋಗ ಪ್ರಮಾಣ ಮಿತಿ ಮೀರತೊಡಗಿದ್ದನ್ನು ಹಲವಾರು ಆರ್ಥಿಕ ತಜ್ಞರೇ ವಿವರಿಸಿ ಹೇಳಿದ್ದಾರೆ. ಈ ಕಾರಣಕ್ಕಾಗಿಯೇ 2017-18ರ ಎನ್.ಎಸ್.ಎಸ್.ಒ ಸರ್ವೇಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲು ವಿಳಂಬ ಮಾಡಿತ್ತೇ? ಎಂದು ಪ್ರಶ್ನಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸುವ ಪ್ರಧಾನಿ @narendramodi ಅವರು ಈಗ ತರಾತುರಿಯಿಂದ ಉದ್ಯೋಗ ಮೇಳಗಳನ್ನು ಆಯೋಜಿಸಲು ಕಾರಣ ಯುವಜನರ ಮೇಲಿನ ಕಾಳಜಿಯೇ? ಇಲ್ಲವೇ ಉದ್ಯೋಗ ಇಲ್ಲದೆ ರೊಚ್ಚಿಗೆದ್ದಿರುವ ನಿರುದ್ಯೋಗಿ ಯುವಜನರ ಆಕ್ರೋಶವೇ?
ಪ್ರಧಾನಿಯವರೇ, ಈಗ ನಿಮ್ಮದೇ @BJP4India ಸರ್ಕಾರದ ಅಧಿಕೃತ… pic.twitter.com/vW7jNTZ8yx
— Siddaramaiah (@siddaramaiah) February 13, 2024
ವಿಶ್ವಬ್ಯಾಂಕ್ 2022ರಲ್ಲಿ ನೀಡಿದ್ದ ವರದಿ ಪ್ರಕಾರ ನಿರುದ್ಯೋಗದ ಪ್ರಮಾಣ ಪಾಕಿಸ್ತಾನದಲ್ಲಿ ಶೇ.11.3ರಷ್ಟಿದ್ದರೆ, ಬಾಂಗ್ಲಾದೇಶದಲ್ಲಿ 12.9 ರಷ್ಟಿತ್ತು. ಭೂತಾನ್ ನಲ್ಲಿ ಶೇ. 14.4 ರಷ್ಟಿದ್ದರೆ, ಚೀನಾದಲ್ಲಿ 13.2 ರಷ್ಟಿತ್ತು. ಆದರೆ, ಅದೇ ಅವಧಿಯಲ್ಲಿ ನಮ್ಮ ಭಾರತದಲ್ಲಿ ನಿರುದ್ಯೋಗ ದರ ಶೇ 23.22 ರಷ್ಟಿತ್ತು. ಇತ್ತೀಚೆಗೆ ಅಂತಾರಾಷ್ಟ್ರೀಯ… pic.twitter.com/WsCffRiCqx
— Siddaramaiah (@siddaramaiah) February 13, 2024
ಇದು ಹೊಸ ಉದ್ಯೋಗಗಳ ಸೃಷ್ಟಿಯ ಕಥೆಯಾದರೆ, ಇರುವ ಸರ್ಕಾರಿ ಉದ್ಯೋಗಗಳ ಭರ್ತಿಯಲ್ಲೂ ತೀರಾ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ವಿವಿಧ ಇಲಾಖೆಯ 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಸಣ್ಣಪುಟ್ಟ ಹುದ್ದೆಗಳಿಗೂ ಸ್ನಾತಕೋತ್ತರ ಪದವೀಧರ, ಬಿಇ, ಎಂಬಿಬಿಎಸ್ ಪದವಿ ಪಡೆದವರು ಅರ್ಜಿ ಸಲ್ಲಿಸುವ ವಿದ್ಯಮಾನ ಇತ್ತೀಚೆಗೆ ಸಾಮಾನ್ಯವಾಗುತ್ತಿದೆ.
ದೇಶದ ಯುವಜನರು… pic.twitter.com/d7yHv85eM9— Siddaramaiah (@siddaramaiah) February 13, 2024
2004-2012ರ ಅವಧಿಯಲ್ಲಿ, ಅಂದರೆ ಯುಪಿಎ ಅವಧಿಯಲ್ಲಿ ಪ್ರತಿವರ್ಷ 75 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ ಈ ಪ್ರಮಾಣ 2013ರ ನಂತರದಲ್ಲಿ 29 ಲಕ್ಷಕ್ಕೆ ಇಳಿದಿದೆ. ನಿರುದ್ಯೋಗದ ತೀವ್ರತೆ ನಮ್ಮ ದೇಶದಲ್ಲಿ ಎಷ್ಟರಮಟ್ಟಿಗೆ ಇದೆಯೆಂದರೆ, ಎನ್.ಸಿ.ಆರ್.ಬಿ ಪ್ರಕಾರ ಪ್ರತಿ ಗಂಟೆಗೆ ಇಬ್ಬರು ನಿರುದ್ಯೋಗಿಗಳು ಆತ್ಮಹತ್ಯೆ… pic.twitter.com/wkzHesBT3t
— Siddaramaiah (@siddaramaiah) February 13, 2024
ನಾಯಕರ ಭಾವಚಿತ್ರ ಹಾಕದೆ ತಾರತಮ್ಯ ಆರೋಪ: ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ಕೈ ಕಾರ್ಯಕರ್ತರ ಮಾರಾಮಾರಿ
‘UPI’ ಆರಂಭ ಅಸ್ತಿತ್ವದಲ್ಲಿರುವ ಬಲವಾದ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು: ಮಾರಿಷಸ್ ರಾಯಭಾರಿ