ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ಲಂಡನ್ ಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಯಾಗಿದೆ.
ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಸಿಬಿಐಗೆ ಪ್ರಕರಣವನ್ನು ವರ್ಗಾವಣೆ ಮಾಡಲು ಪ್ಲಾನ್ ನಡೆಸಿದೆ ಎನ್ನುವ ಸುದ್ದಿಗಳ ನಡುವೆಯೇ ಪ್ರಜ್ವಲ್ ರೇವಣ್ಣ ಇಬ್ಬರು ಸ್ನೇಹಿತರ ಸಹಾಯದಿಂದ ಜರ್ಮನಿಯಿಂದ
ಲಂಡನ್ ಗೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ.
ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಿಂದ ರೈಲಿನ ಮೂಲಕ ಲಂಡನ್ ಗೆ ಪ್ರಯಾಣಿಸಿದ್ದಾರೆ ಎಂದು ವರದಿಯಾಗಿದ್ದು, ಪ್ರಜ್ವಲ್ ಜೊತೆಗೆ ಬೆಂಗಳೂರಿನ ಒಬ್ಬ ಸ್ನೇಹಿತ ಹಾಗೂ ದುಬೈನ ಒಬ್ಬ ಸ್ನೇಹಿತ ಸಹಾಯ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.