ಉಡುಪಿ: ಇತ್ತೀಚೆಗೆ ರಸ್ತೆ ಅವ್ಯವಸ್ಥೆ ವಿನೂತನ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಾಂಗ್ರೆಸ್‌ ಯುವ ನಾಯಕ ಮಿಥುನ್ ರೈ ಅವರು ಸಚಿವೆ ಶೋಭಾ ಕರಂದ್ಲಾಜೆ ಕಂಡರೆ ಪೋಟೋ ತೆಗೆದು ಕಳುಹಿಸಿ ಎಂದು ಹೇಳಿದ್ದರು. ಇದಕ್ಕೆ ಈಗ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ಮಿಥುನ್ ರೈ ಎಲ್ಲಿದ್ದಾರೆ. ಸೆಲ್ಫಿ ತೆಗೆದುಕೊಳ್ಳಲು ಮೊದಲು ಅವರು ಬರಲಿ ಎಂದು ಸವಾಲೆಸೆದಿದ್ದಾರೆ.

BIGG NEWS: ದಸರಾ ಗೋಲ್ಡ್ ಪಾಸ್‌ ದಂಧೆ ವಿಚಾರ, ನನ್ನ ಗಮನಕ್ಕೆ ಬಂದಿದೆ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ; ಎಸ್.ಟಿ ಸೋಮಶೇಖರ್‌ ಸ್ಪಷ್ಟನೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಉಡುಪಿಗೆ ಬಂದಿದ್ದೇನೆ ಬನ್ನಿ ಎಲ್ಲರೂ ಸೆಲ್ಫಿ (Selfie) ತೆಗೆಯಿರಿ. ಅವ ಎಲ್ಲಿ ಮಿಥುನ್ ರೈ ಅವನು ಬರಲಿ ಎಂದು ಸಚಿವೆ ಗರಂ ಆಗಿ ಹೇಳಿದ್ದಾರೆ. ಬರಲಿ ಎಲ್ಲರೂ ಸೆಲ್ಫಿ ತೆಗೆಯಲು ಬರಲಿ. ಅವನು ಮಿಥುನ್ ರೈ ಫಸ್ಟ್ ಬರಲಿ. ಈ ವಿಷಯಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ. ಅವನನ್ನು ಯಾಕೆ ದೊಡ್ಡ ಮನುಷ್ಯ ಮಾಡಬೇಕು. ಅವನು ಚಿಲ್ಲರೆ ಮನುಷ್ಯ ಎಂದು ವಾಗ್ದಾಳಿ ನಡೆಸಿ ಶೋಭಾ ಕರಂದ್ಲಾಜೆ ಕಾರು ಹತ್ತಿದರು.

Share.
Exit mobile version