ಬೆಂಗಳೂರು : ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಕಾರಿ ಬೆಂಕಿ ಹಚ್ಚಿದ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ ʻ ಕಾಂಗ್ರೆಸ್ಸಿಗರು ಯಾರು ಕಾರಿಗೆ ಬೆಂಕಿ ಹಚ್ಚಿಲ್ಲʼ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಕಿ ಹಾಕಿದವರು ದುಷ್ಕರ್ಮಿಗಳು. ಯಾರು ಕಾಂಗ್ರೆಸ್ಸಿನವರು ಯಾರು ಬೆಂಕಿ ಹಾಕಲ್ಲ. ಗಾಂಧಿ ತತ್ವದ ಬಗ್ಗೆ ಕಾಂಗ್ರೆಸ್ನವರಿಗೆ ನಂಬಿಕೆಯಿದೆ. ಅವರ್ಯಾರು ಕಾಂಗ್ರೆಸ್ಸಿಗರಲ್ಲ ಎಂದು ಮಾಧ್ಯಮಗಳಿಗೆ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಇಡಿ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ದ್ವೇಷದ ರಾಜಕಾರಣ ಮಾಡುತ್ತಿದ್ದೇವೆ ಹೊರತು, ಕಾನೂನಿಗೆ ಅಗೌರವ ತರಬೇಕೆಂದು ಪ್ರತಿಭಟನೆ ಮಾಡುತ್ತಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ಸಂದರ್ಭದಲ್ಲಿ ಶಾಂತಿನಗರದ ಬಳಿ ನಿಲ್ಲಿಸಿದ್ದ 2 ಕಾರಿಗೆ ಬೆಂಕಿ ಹಚ್ಚಲಾಗಿದೆ . ಈಗಾಗಲೇ ಕಾರಿಗೆ ಬೆಂಕಿ ಹಚ್ಚಿದ 11 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.