ಹಾಸನ : ಹಾಸನದಲ್ಲಿ ಸಮೀಕ್ಷೆಗೆ ಹೋಗುತ್ತಿದ್ದ ಶಿಕ್ಷಕಿಗೆ ಅಪಘಾತವಾಗಿದ್ದು, ಗಂಭೀರವಾದ ಗಾಯಗಳಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುವಾಗ ನಾಯಿ ಅಡ್ಡ ಬಂದಿದ್ದರಿಂದ ಅಪಘಾತವಾಗಿದ್ದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ವಡ್ಡರಹಳ್ಳಿಯಲ್ಲಿ ಈ ಅಪಘಾತ ಸಂಭವಿಸಿದೆ.
ವಡ್ಡರಹಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ರಾಧಾಗೆ ಗಂಭೀರವಾಗಿ ಗಾಯವಾಗಿದೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ರಾಧಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಚನ್ನರಾಯಪಟ್ಟಣ ಆಸ್ಪತ್ರೆಯಲ್ಲಿ ಶಿಕ್ಷಕಿ ರಾಧಾ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿಕ್ಷಕಿ ಮೇಲೆ ನಾಯಿ ದಾಳಿ
ಇನ್ನು ಹಾಸನದಲ್ಲಿ ಮತ್ತೊಂದು ಘಟನೆ ಸಂಭವಿಸಿದ್ದು, ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ಹಾಸನದ ಬೇಲೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಬೀದಿ ನಾಯಿಗಳು ದಾಳಿ ಮಾಡಿದಾಗ, ಶಿಕ್ಷಕಿ ಬಚಾವ್ ಮಾಡಲು ಹೋಗಿದ್ದ ಅವರ ಪತಿ ಸೇರಿ 7 ಜನರ ಮೇಲು ಕೂಡ ನಾಯಿಗಳು ದಾಳಿ ಮಾಡಿದೆ.
ಶಿಕ್ಷಕಿ ಸೇರಿದಂತೆ ಒಟ್ಟು 7 ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಶಿಕ್ಷಕಿ ಚಿಕ್ಕಮಗೆ ತೀವ್ರವಾದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೈ, ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ ಶಿಕ್ಷಕಿ ಚಿಕ್ಕಮಗೆ ಗಂಭೀರವಾದ ಗಾಯಗಳಾಗಿವೆ. ಆಸ್ಪತ್ರೆಗೆ ಶಾಸಕ ಸುರೇಶ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.