ಮಂಡ್ಯ: ಜಿಲ್ಲೆಯಲ್ಲಿ ಟೌನ್ ಪ್ಲಾನಿಂಗ್ ಅನುಮೋದನೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಪಡೆಯುತ್ತಿದ್ದಾಗಲೇ ಮೂವರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಹಿಡಿದಿದ್ದಾರೆ.
ಮಂಡ್ಯ ನಗರ ಯೋಜನೆ ಪ್ರಾಧಿಕಾರದ ಮೇಲೆ ಇಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಟೌನ್ ಪ್ಲಾನಿಂಗ್ ಅನುಮೋದನೆಗಾಗಿ ಲಂಚ ಪಡೆಯುವ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮೂವರು ನೌಕರರನ್ನು ವಶಕ್ಕೆ ಪಡೆದಿದ್ದಾರೆ.
ಮಂಡ್ಯ ನಗರ ಯೋಜನಾ ಪ್ರಾಧಿಕಾರದ ಸಿಬ್ಬಂದಿಗಳಾದಂತ ಅನನ್ಯ, ಸೌಮ್ಯ ಹಾಗೂ ಹರೀಶ್ ಎಂಬುವರನ್ನು ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ಹಿಡಿದು, ತಮ್ಮ ವಶಕ್ಕೆ ಪಡೆದಿದ್ದಾರೆ.
ಟೌನ್ ಪ್ಲಾನಿಂಗ್ ಅನುಮೋದನೆಗಾಗಿ ಆರೋಪಿಗಳು ಮಂಡ್ಯದ ಮದ್ದೂರು ತಾಲ್ಲೂಕಿನ ಚಂದೂಪುರದ ನಿವಾಸಿ ಪುನೀತ್ ಎಂಬುವರಿಗೆ 30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು 30 ಸಾವಿರದಲ್ಲಿ 15 ಸಾವಿರ ಮುಂಗಡವಾಗಿ ಪಡೆಯುತ್ತಿದ್ದಂತ ವೇಳೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು, ಇನ್ಸ್ ಪೆಕ್ಟರ್ ಬ್ಯಾಟರಾಯನಗೌಡ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.
ವರದಿ: ಗಿರೀಶ್ ರಾಜ್, ಮಂಡ್ಯ
BREAKING: ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಪಾರಿ ಪಡೆದಿದ್ದ ನಾಲ್ವರು ಅರೆಸ್ಟ್
ಸಾಗರ ತಾಲ್ಲೂಕಿನ ಗಂಗಾಮತಸ್ಥರು, ಮಡಿವಾಳ, ಈಡಿಗ ಸಮುದಾಯದವರಿಗೆ ಗುಡ್ ನ್ಯೂಸ್