ಹಾಸನ : ಐತಿಹಾಸಿಕ ಹಾಸನಾಂಬೆ ದೇವಿ ದರ್ಶನ ಪಡೆದುಕೊಂಡು ವಾಪಸ್ ತೆರಳುವಾಗ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ.
ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ ಬೈಕ್‌ನಲ್ಲಿ ಅನು (19) ಹಾಗೂ ಛಾಯಾ (20) ಬಂದಿದ್ದರು. ಹಾಸನಾಂಬ ದೇವಿ ದರ್ಶನ ಮುಗಿಸಿ ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಹೌಸಿಂಗ್ ಬೋರ್ಡ್ ಬಳಿ ವೇಗವಾಗಿ ಬಂದು ಮೊದಲು ಆಕ್ಟಿವಾಗೆ ಡಿಕ್ಕಿ ಹೊಡೆದು ಬಳಿಕ ಬೈಕ್‌ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಬಸವರಾಜು ಹಾಗೂ ಅನುಶ್ರೀ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಯುವತಿ ಛಾಯಾ ಸ್ಥಿತಿ ಚಿಂತಾಜನಕವಾಗಿದ್ದು, ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಅಪಘಾತದಲ್ಲಿ ಆಕ್ಟಿವಾ ಸವಾರ ಮೊಹಮ್ಮದ್ ಶಾಹಿದ್‌ಗೂ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.