SHOCKING: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಶಾಲಾ ಶಿಕ್ಷಕ ಸಾವು

ಬಾಗಲಕೋಟೆ: ರಾಜ್ಯದಲ್ಲಿ ದಿನೇ ದಿನ ಹದಿ ಹರೆಯದವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವಂತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಇಂದು ಪಾಠ ಮಾಡುತ್ತಿದ್ದಾಗಲೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ತುಂಗಳ ಹೈಸ್ಕೂಲಿನಲ್ಲಿ ಇಂದು ಪಾಠ ಮಾಡುತ್ತಿದ್ದಂತ ಸಂದರ್ಭದಲ್ಲಿ ಕನ್ನಡ ಶಿಕ್ಷಕ ಗುರುಪಾದ ಹಿಬ್ಬರಗಿ(49) ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಇನ್ನೇನು ಆಸ್ಪತ್ರೆಗೆ ಕರೆದೊಯ್ಯಬೇಕು ಎನ್ನುವ ವೇಳೆಗೆ ಹೃದಯಾಘಾತದಿಂದ ಕನ್ನಡ ಶಿಕ್ಷಕ ಗುರುಪಾದ ಹಿಪ್ಪರಗಿ ಅವರು ಸಾವನ್ನಪ್ಪಿದ್ದಾರೆ. ಶಿಕ್ಷಕರ ಸಾವಿನಿಂದಾಗಿ ವಿದ್ಯಾರ್ಥಿಗಳು ಕಣ್ಣೀರಾಗಿದ್ದಾರೆ. … Continue reading SHOCKING: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಶಾಲಾ ಶಿಕ್ಷಕ ಸಾವು