ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವೆ ಇಸ್ಲಾಮಾಬಾದ್ನಲ್ಲಿ ಗುಪ್ತ ಶಾಂತಿ ಮಾತುಕತೆ ನಡೆಯುತ್ತಿದೆ ಎಂಬ ವರದಿಗಳನ್ನು ಶ್ವೇತಭವನವು (White House) ಸ್ಪಷ್ಟವಾಗಿ ನಿರಾಕರಿಸಿದೆ. ಈ ಕುರಿತು ಹರಿದಾಡುತ್ತಿರುವ ಸುದ್ದಿಗಳು ಕೇವಲ ‘ಊಹಾಪೋಹ’ ಎಂದು ಕರೆದಿರುವ ಅಮೆರಿಕದ ಆಡಳಿತವು, ಇದೇ ವೇಳೆ ಬಿಕ್ಕಟ್ಟು ನಿರ್ವಹಣೆಯಲ್ಲಿ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ (JD Vance) ಅವರ ಸಕ್ರಿಯ ಪಾತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದೆ.
ಕಳೆದ ಕೆಲವು ದಿನಗಳಿಂದ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಅಮೆರಿಕದ ಉನ್ನತ ನಿಯೋಗವು ಇರಾನ್ ಪ್ರತಿನಿಧಿಗಳನ್ನು ಭೇಟಿ ಮಾಡಲಿದೆ ಎಂಬ ಸುದ್ದಿಗಳು ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್:”ಮಾತುಕತೆಯ ಕುರಿತಾದ ವರದಿಗಳು ಇನ್ನೂ ಅಂತಿಮಗೊಂಡಿಲ್ಲ. ಶ್ವೇತಭವನ ಅಧಿಕೃತವಾಗಿ ಘೋಷಿಸುವವರೆಗೆ ಯಾವುದೇ ಸಭೆಗಳನ್ನು ಖಚಿತ ಎಂದು ಪರಿಗಣಿಸಬಾರದು.”
”ಇದು ಅತ್ಯಂತ ಸೂಕ್ಷ್ಮವಾದ ರಾಜತಾಂತ್ರಿಕ ವಿಷಯವಾಗಿದ್ದು, ಮಾಧ್ಯಮಗಳ ಮೂಲಕ ನಾವು ಮಾತುಕತೆ ನಡೆಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.








