ಬೆಂಗಳೂರು : ರಾಜ್ಯಪಾಲರು ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೆ ಜೆಡಿಎಸ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ.
ಟ್ವೀಟ್ ನಲ್ಲಿ “ಕಪ್ಪು ಚುಕ್ಕೆ”ಯಿಂದ ಬೆತ್ತಲಾದ “ವೈಟ್ನರ್ ರಾಮಯ್ಯ” ಮುಡಾದಲ್ಲಿ ಹಗರಣ ನಡೆದೇ ಇಲ್ಲ, ನನ್ನ ಮೇಲೆ ಕಪ್ಪು ಚುಕ್ಕು ಇಲ್ಲ ಎಂದು ಸ್ವಯಂ ಸರ್ಟಿಫಿಕೇಟ್ ಪಡೆದಿದ್ದ ಸಿದ್ದರಾಮಯ್ಯ ಅವರೇ, ನಿಮಗೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿಲ್ಲ.ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಗೌರವ ಉಳಿಸಿಕೊಳ್ಳಿ ಎಂದು ವ್ಯಂಗ್ಯವಾಡಿದೆ.
"ಕಪ್ಪು ಚುಕ್ಕೆ"ಯಿಂದ ಬೆತ್ತಲಾದ "ವೈಟ್ನರ್ ರಾಮಯ್ಯ"
ಮುಡಾದಲ್ಲಿ ಹಗರಣ ನಡೆದೇ ಇಲ್ಲ, ನನ್ನ ಮೇಲೆ ಕಪ್ಪು ಚುಕ್ಕು ಇಲ್ಲ ಎಂದು ಸ್ವಯಂ ಸರ್ಟಿಫಿಕೇಟ್ ಪಡೆದಿದ್ದ ಸಿದ್ದರಾಮಯ್ಯ ಅವರೇ, ನಿಮಗೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿಲ್ಲ…
ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಗೌರವ ಉಳಿಸಿಕೊಳ್ಳಿ…… pic.twitter.com/fnfkArFVSo
— Janata Dal Secular (@JanataDal_S) September 24, 2024