ನವದೆಹಲಿ : ಇತ್ತೀಚೆಗಷ್ಟೇ ಗುಜರಾತಿನಲ್ಲಿ ವಿಷಕಾರಿ ಮದ್ಯ ಸೇವನೆಯಿಂದ ಸಂಭವಿಸಿದ ದುರಂತದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದ, ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮತ್ತು ಮಾದಕ ವಸ್ತುಗಳ ವ್ಯಾಪಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಇದರಲ್ಲಿ ಶಾಮೀಲಾದ ಮಾಫಿಯಾಗಳಿಗೆ ಯಾವ ಆಡಳಿತ ಶಕ್ತಿಗಳು ರಕ್ಷಣೆ ನೀಡುತ್ತಿವೆ ಎಂದು ಪ್ರಶ್ನಿಸಿದ್ದಾರೆ.
ಜುಲೈ 25 ರಂದು ವಿಷಕಾರಿ ಮದ್ಯ ಸೇವಿಸಿ ಗುಜರಾತಿನ ಬೊಟಾಡ್ ಮತ್ತು ನೆರೆಯ ಅಹಮದಾಬಾದ್ ಜಿಲ್ಲೆಗಳಲ್ಲಿ 42 ಜನರು ಸಾವನ್ನಪ್ಪಿದ್ದರು. ಇದರ ಜೊತೆಗೆ ಸುಮಾರು 97 ಜನರು ಭಾವನಗರ, ಬೊಟಾಡ್ ಮತ್ತು ಅಹಮದಾಬಾದ್ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ ಎಂದು ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಹೇಳಿದ್ದಾರೆ.
‘ड्राई स्टेट' गुजरात में ज़हरीली शराब पीने से कई घर उजड़ गए। वहां लगातार अरबों की ड्रग्स भी बरामद हो रही है।
ये बेहद चिंता की बात है, बापू और सरदार पटेल की धरती पर, ये कौन लोग हैं जो धड़ल्ले से नशे का कारोबार कर रहे हैं? इन माफिया को कौन सी सत्ताधारी ताक़तें संरक्षण दे रही हैं?
— Rahul Gandhi (@RahulGandhi) July 29, 2022
ಗುಜರಾತ್ನಲ್ಲಿ ಅಕ್ರಮ ಮದ್ಯ ಸೇವನೆಯಿಂದಾಗಿ ಹಲವು ಮನೆಗಳು ನಾಶವಾಗಿವೆ. ಅಲ್ಲಿಂದ ಕೋಟ್ಯಂತರ ಮೌಲ್ಯದ ಡ್ರಗ್ಸ್ ಕೂಡ ನಿರಂತರವಾಗಿ ವಶಪಡಿಸಿಕೊಳ್ಳಲಾಗುತ್ತಿದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಬಾಪು (ಮಹಾತ್ಮಾ ಗಾಂಧಿ) ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭೂಮಿಯಲ್ಲಿ, ಅಮಾಯಕವಾಗಿ ಮದ್ಯದ ವ್ಯವಹಾರವನ್ನು ಮಾಡುತ್ತಿರುವವರು ಯಾರು? ಎಂದು ಪ್ರಶ್ನಿಸಿರುವ ರಾಹುಲ್, ಇದು ಅತ್ಯಂತ ಕಳವಳಕಾರಿ ವಿಷಯವಾಗಿದೆ ಎಂದಿದ್ದಾರೆ.
ಯಾವ ಆಡಳಿತ ಶಕ್ತಿಗಳು ಈ ಮಾಫಿಯಾಗಳಿಗೆ ರಕ್ಷಣೆ ನೀಡುತ್ತಿವೆ ಎಂದು ಪ್ರಶ್ನಿಸಿದ್ದಾರೆ.