ಸುಭಾಷಿತ :

Friday, April 3 , 2020 6:59 AM

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ `ಆದಿತ್ಯರಾವ್’ ಯಾರು?


Wednesday, January 22nd, 2020 11:17 am

ಮಂಗಳೂರು : ಮಂಗಳೂರಿನ  ವಿಮಾನನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಿತ್ಯರಾವ್ ಪೊಲೀಸರಿಗೆ ಶರಣಾಗಿದ್ದು, ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಉಡುಪಿಯ ಮಣಿಪಾಲ ನಿವಾಸಿ ಆದಿತ್ಯ ರಾವ್ (40) ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಈ ವೇಳೆ ಪೊಲೀಸರು ತನಿಖೆ ನಡೆಸಿದ್ದು, ಈ ವೇಳೆ ಆರೋಪಿ ಆದಿತ್ಯ ರಾವ್ ನಾನೇ ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ಒಪ್ಪಿಕೊಂಡಿದ್ದಾನೆ. ಮಾರು ವೇಷದಲ್ಲಿ ಲಾರಿಯಲ್ಲಿ ಬಂದು ನಿನ್ನೆ ರಾತ್ರಿ 10.30 ಕ್ಕೆ ಬಂದು ಪೊಲೀಸರಿಗೆ ಶರಣಾಗಿದ್ದನು.

ಆದಿತ್ಯ ರಾವ್ ಮಣಿಪಾಲ ಮಣ್ಣಪಳ್ಳ ಹುಡ್ಕೋ ಕಾಲೋನಿಯ ವಸತಿ ಸಮುಚ್ಚಯವೊಂದರಲ್ಲಿ ವಾಸ ಮಾಡುತ್ತಿದ್ದ. ಈತ ಇಂಜಿನಿಯರಿಂಗ್ ಮತ್ತು ಎಂಬಿಎ ಸ್ನಾತಕೋತ್ತರ ಪದವೀಧರನಾಗಿದ್ದ. ಆದಿತ್ಯ ರಾವ್ 2018ರಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಮೆಜಿಸ್ಟಿಕ್‌ ನಲ್ಲಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣವನ್ನು ಸ್ಪೋಟ ನಡೆಸುವುದಾಗಿ ಹುಸಿ ಬೆದರಿಕೆ ಕರೆ ಮಾಡಿ, ಬಂಧನಕ್ಕೆ ಒಳಗಾಗಿದ್ದನು. ಈತ ಒಟ್ಟು ಮೂರು ಹುಸಿ ಬಾಂಬ್ ಬೆದರಿಕೆ ಕರೆಗಳನ್ನು ಮಾಡಿದ್ದ ಆರೋಪದಲ್ಲಿ 2018ರ ಆಗಸ್ಟ್ ನಲ್ಲಿ ಬಂಧಿಸಲಾಗಿತ್ತು. ಬಳಿಕ ಜೈಲುವಾಸ ಅನುಭವಿಸಿದ್ದ.  ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯ ಹುದ್ದೆಗೆ ತನ್ನನ್ನು ನೇಮಕ ಮಾಡಿಕೊಳ್ಳಲಿಲ್ಲ ಎಂದು ಕೋಪಗೊಂಡು ಕೃತ್ಯ ಎಸಗಿದ್ದ ಎಂದು ಹೇಳಲಾಗಿದೆ.

ಅರೋಪಿ ಆದಿತ್ಯರಾವ್ ಅವರ ತಾಯಿ ತೀರಿಕೊಂಡಿದ್ದು, ತಂದೆ ಮಂಗಳೂರಿನಲ್ಲಿ ನೆಲೆಸಿದ್ದಾರೆ. ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುವ ಈತ ಬ್ಯಾಂಕ್ ಕೆಲಸ ಬಿಟ್ಟು ಸೆಕ್ಯುರಿಟಿ ಕೆಲಸ ಮಾಡಲು ಬಯಸಿದ್ದ ಎಂದು 2018 ರಲ್ಲಿ ಪೊಲೀಸರ ಎದುರು ಹೇಳಿಕೊಂಡಿದ್ದ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions