ತುಮಕೂರು : ಜಿಲ್ಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ನಡೆಯುತ್ತಿದ್ದು, ಈ ವೇಳೆ ಮುಂದಿನ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಯಾರು ಎಂಬ ವಿಚಾರದ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ.
ನಗರದಲ್ಲಿ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಯಾರು ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ‘ಚುನಾವಣೆ ನಂತರವೇ ಸಿಎಂ ಯಾರೆಂದು ನಿರ್ಧರಿಸಲಾಗುತ್ತದೆ. ಸದ್ಯಕ್ಕೆ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಘೋಷಣೆ ಇಲ್ಲ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎದುರೇ ಹೇಳಿದರು. ಈ ಮೂಲಕ ಮುಂದಿನ ಸಿಎಂ ಯಾರೆಂಬ ವಿವಾದಕ್ಕೆ ತೆರೆಬಿದ್ದಿದೆ
ಇನ್ನೂ, ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಯಾರು ಎಂಬ ಕುತೂಹಲ ಮೂಡಿದೆ. ಕಾಂಗ್ರೆಸ್ ನ ಸಭೆ ಸಮಾವೇಶದಲ್ಲಿ ‘ನೆಕ್ಸ್ಟ್ ಸಿಎಂ ಸಿದ್ದರಾಮಯ್ಯ’ , ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಎಂಬ ಘೋಷಣೆಗಳು ಮುಳುಗುತ್ತಿದೆ. ಇನ್ನೂ ಕಾಂಗ್ರೆಸ್ ನಲ್ಲಿ ಎರಡು ಬಣಗಳಾಗಿದೆ. ಸಿದ್ದರಾಮಯ್ಯ-ಡಿಕೆಶಿ ಎಂಬ ಎರಡು ಬಣಗಳಾಗಿದೆ ಎಂದು ಬಿಜೆಪಿ ಟೀಕಾಪ್ರಹಾರ ನಡೆಸುತ್ತಿದೆ.