ನವದೆಹಲಿ: ಭಾರತದ ದೃಷ್ಠಿಕೋನದಿಂದ ಭಾರತೀಯ ಇತಿಹಾಸವನ್ನು ಪುನಃ ಬರೆಯುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಇತಿಹಾಸಕಾರರಿಗೆ ಕೇಳಿಕೊಂಡಿದ್ದು, ಇದಕ್ಕಾಗಿ ಅಗತ್ಯವಿರುವ ಪ್ರಯತ್ನಗಳಿಗೆ ಸರಕಾರ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.
ಅಸ್ಸಾಂ ಸರ್ಕಾರದ ವತಿಯಿಂದ ದೆಹಲಿಯಲ್ಲಿ ಏರ್ಪಡಿಸಲಾಗಿದ್ದ 17ನೇ ಶತಮಾನದ ಅಹೋಮ್ ಜನರಲ್ ಲಚಿತ್ ಬರ್ಫುಕನ್ ಅವರ 400ನೇ ಜನ್ಮದಿನಾಚರಣೆಯ ಮೂರು ದಿನಗಳ ಆಚರಣೆಯ 2ನೇ ದಿನ ಸಮಾರಂಭದಲ್ಲಿ ಮಾತನಾಡಿದ ಅವರು, “ನಾನು ಇತಿಹಾಸದ ವಿದ್ಯಾರ್ಥಿಯಾಗಿದ್ದೇನೆ. ನಮ್ಮ ಇತಿಹಾಸವನ್ನು ಸರಿಯಾಗಿ ಪ್ರಸ್ತುತಪಡಿಸಲಾಗಿಲ್ಲ. ಅದನ್ನು ತಿರುಚಲಾಗಿದೆ ಎಂದು ಬಹಳಷ್ಟು ಬಾರಿ ನನ್ನ ಗಮನಕ್ಕೆ ಬಂದಿದೆ. ಬಹುಶಃ ಅದು ಸರಿಯಾಗಿರಬಹುದು. ಆದರೆ, ಈಗ ನಾವು ಇದನ್ನು ಸರಿಪಡಿಸಬೇಕಾಗಿದೆ” ಎಂದರು.
“ಇತಿಹಾಸವನ್ನು ಸರಿಯಾಗಿ ಮತ್ತು ವೈಭವಯುತವಾಗಿ ಪ್ರಸ್ತುತಪಡಿಸುವುದನ್ನು ಯಾರು ತಡೆಯಬಲ್ಲರು ಎಂದು ನಾನು ನಿಮ್ಮನ್ನು ಕೇಳಬಯಸುತ್ತೇನೆ” ಎಂದು ಶಾ ಹೇಳಿದರು. “ಇಲ್ಲಿ ಕುಳಿತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಇತಿಹಾಸ ಸರಿಯಲ್ಲ ಎಂಬ ಈ ಭಾವನೆಯನ್ನು ತೊಡೆದುಹಾಕಲು ನಾನು ವಿನಂತಿಸುತ್ತೇನೆ. ದೇಶದಲ್ಲಿ 150 ವರ್ಷಗಳ ಕಾಲ ಆಳಿದ 30 ರಾಜವಂಶಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ 300 ಗಣ್ಯ ವ್ಯಕ್ತಿಗಳ ಬಗ್ಗೆ ಸಂಶೋಧನೆ ಮಾಡಲು ಪ್ರಯತ್ನಿಸುತ್ತೇನೆ” ಎಂದರು.
ವಿಜ್ಞಾನ ಭವನದಲ್ಲಿ ಹಾಜರಿದ್ದ ಇತಿಹಾಸಕಾರರು ಮತ್ತು ವಿದ್ಯಾರ್ಥಿಗಳ ಸಂಶೋಧನೆಗೆ ಕೇಂದ್ರವು ಬೆಂಬಲ ನೀಡಲಿದೆ ಎಂದು ಸಚಿವರು ಭರವಸೆ ನೀಡಿದರು.
“ಮುಂದೆ ಬನ್ನಿ, ಸಂಶೋಧನೆ ಮಾಡಿ ಮತ್ತು ಇತಿಹಾಸವನ್ನು ಪುನಃ ಬರೆಯಿರಿ. ಈ ರೀತಿಯಾಗಿ ನಾವು ಭವಿಷ್ಯದ ಪೀಳಿಗೆಗೂ ಸ್ಫೂರ್ತಿ ನೀಡಬಹುದು” ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಲಚಿತ್ ಕುರಿತ ಸಾಕ್ಷ್ಯಚಿತ್ರವನ್ನು ಉದ್ಘಾಟಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಈಶಾನ್ಯ ಮತ್ತು ಭಾರತದ ಉಳಿದ ಭಾಗಗಳ ನಡುವಿನ ಅಂತರವನ್ನು ಕಡಿಮೆ ಮಾಡಿದ್ದಾರೆ. ಸರ್ಕಾರದ ಪ್ರಯತ್ನದಿಂದ ಈಶಾನ್ಯದಲ್ಲಿ ಶಾಂತಿ ನೆಲೆಸಿದೆ ಎಂದರು.
ಅಹೋಮ್ ಜನರಲ್ ಲಚಿತ್ ಬರ್ಫುಕನ್ ಅವರ ನೆನಪಿಗಾಗಿ ನವೆಂಬರ್ 24 ಅನ್ನು ಲಚಿತ್ ದಿವಸ್ ಎಂದು ಆಚರಿಸಲಾಗುತ್ತದೆ.
BIGG NEWS : ರಾಮನಗರದಲ್ಲಿ ಘೋರ ದುರಂತ : ಬಸ್ಸು ಹತ್ತುವಾಗ ಆಯತಪ್ಪಿ ಬಿದ್ದು, ಕಾಲು ಮುರಿತಕೊಂಡ ವಿದ್ಯಾರ್ಥಿನಿ
BIGG NEWS: ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಸಿದ್ದರಾಮಯ್ಯ ಆಸೆಗೆ ಡಿಕೆಶಿ ತಣ್ಣೀರು
BIGG NEWS : ರಾಮನಗರದಲ್ಲಿ ಘೋರ ದುರಂತ : ಬಸ್ಸು ಹತ್ತುವಾಗ ಆಯತಪ್ಪಿ ಬಿದ್ದು, ಕಾಲು ಮುರಿತಕೊಂಡ ವಿದ್ಯಾರ್ಥಿನಿ