ಶಿವಮೊಗ್ಗ: ಕಾಂಗ್ರೆಸ್ ಪಕ್ಷದವರ ಮೇಲೆ, ವಿಪಕ್ಷಗಳ ನಾಯಕರ ಮೇಲೆ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡ್ತಿದ್ದಾರೆ. ಆದ್ರೇ ಬಿಜೆಪಿಯವರ ಮೇಲೆ ರೈಡ್ ಯಾಕೆ ಆಗ್ತಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.
ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಇದ್ದರೆ, ಭ್ರಷ್ಟಾಚಾರ ಹೆಚ್ಚಾಗಲಿದೆ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕಾನೂನು ಪ್ರಕಾರ ರೇಡ್ ಮಾಡುವುದನ್ನು ನಾವು ಎಂದೂ ವಿರೋಧಿಸುವುದಿಲ್ಲ. ಆದರೆ ಬಿಜೆಪಿಯಲ್ಲಿ ಶ್ರೀಮಂತರಿಲ್ಲವೇ, ಯಡಿಯೂರಪ್ಪ , ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ ? ಶೋಭಾ ಕರಂದ್ಲಾಜೆ, ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ, ಅವರ ಮೇಲೆ ರೇಡ್ ಗಳು ಏಕೆ ಆಗುತ್ತಿಲ್ಲ. ಆದಾಯ ತೆರಿಗೆಯನ್ನು ಸರಿಯಾಗಿ ಕಟ್ಟದವರ ಮೇಲೆ ಕ್ರಮವಾಗಲಿ, ಆದರೆ ಒಬ್ಬರ ಮೇಲೆ ರೇಡ್ ಮಾಡಿ ಮತ್ತೊಬ್ಬರನ್ನು ಬಿಡುವ ಬದಲು, ಆದಾಯಮೀರಿ ಆಸ್ತಿ ಸಂಪಾದಿಸಿದ ಎಲ್ಲರ ಮೇಲೆ ಕಾನೂನು ಕ್ರಮವಾಗಬೇಕು ಎಂದರು.
ಕಾಂಗ್ರೆಸ್ ತನ್ನ ಶಕ್ತಿಯನ್ನು ನಂಬಿದೆ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಯಡಿಯೂರಪ್ಪನವರ ಹೇಳಿರುವ ಬಗ್ಗೆ ಉತ್ತರಿಸಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಯಡಿಯೂರಪ್ಪನವರು ಈ ರೀತಿ ಹೇಳಿದ್ದರು. ಆದರೆ ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗೆದ್ದಿತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಶಿವಮೊಗ್ಗವನ್ನೂ ಸೇರಿದಂತೆ 20 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಪಕ್ಷ ನಕಾರಾತ್ಮಕ ವಿಷಯಗಳನ್ನು ಅವಲಂಬಿಸದೇ, ಸದಾ ತನ್ನ ಶಕ್ತಿಯನ್ನು ಅವಲಂಬಿಸಿಯೇ ಚುನಾವಣೆಯನ್ನು ಗೆಲ್ಲುತ್ತೇವೆ ಎಂದರು.
ಕುಮಾರಸ್ವಾಮಿಯವರದು ರಾಜಕೀಯ ಹೇಳಿಕೆ
ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರು ಯಾವ ಆಧಾರದ ಮೇಲೆ ಇಂತಹ ಹೇಳಿಕೆಯನ್ನು ನೀಡಿದ್ದಾರೆ ಎಂಬುದನ್ನು ಮಾಧ್ಯಮದವರು ಪ್ರಶ್ನಿಸಬೇಕು. ಈ ಬಾರಿ ಗ್ಯಾರಂಟಿಗಳಿಗೆ 36 ಸಾವಿರ ಕೋಟಿ ಹಾಗೂ ಮುಂದಿನ ವರ್ಷ 52009 ಕೋಟಿ ರೂ.ಗಳನ್ನು ತೆಗೆದಿರಿಸಲಾಗಿದ್ದು, 1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಮೀಸಲಿರಿಸಿದೆ. ಕುಮಾರಸ್ವಾಮಿಯವರು ಕೇವಲ ರಾಜಕೀಯಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಾರೆ ಎಂದರು.
BREAKING: ‘ಲೋಕಸಭಾ ಚುನಾವಣಾ’ ಅಖಾಡದಿಂದ ಹಿಂದೆ ಸರಿದ ‘ದಿಂಗಾಲೇಶ್ವರ ಶ್ರೀ’: ‘ನಾಮಪತ್ರ’ ವಾಪಾಸ್
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ