Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ದೆಹಲಿಯಲ್ಲಿ ವಿದ್ಯಾರ್ಥಿಗಳ ಭಾರಿ ಆಕ್ರೋಶ: ‘ಗೋ ಪ್ರಧಾನ್ ಗೋ’ ಘೋಷಣೆ, ತಟ್ಟೆ-ಚಮಚ ಬಡಿಯುತ್ತಾ ಕೇಂದ್ರ ಸಚಿವರ ರಾಜೀನಾಮೆಗೆ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ!

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

​ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ: ಅಭಿಷೇಕ್ ಬ್ಯಾನರ್ಜಿ ಹತ್ಯೆಗೆ ಸಂಚು? ಬಂದೂಕುಧಾರಿ ಪತ್ತೆ !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 30 ವರ್ಷಗಳಷ್ಟು ಹಿಂದಿನ ಪ್ರಕರಣಕ್ಕೆ ಇವತ್ತು ಯಾಕೆ ಜೀವ ಕೊಟ್ಟಿದ್ದೀರಿ?: ಎಸ್.ಸುರೇಶ್ ಕುಮಾರ್
KARNATAKA

30 ವರ್ಷಗಳಷ್ಟು ಹಿಂದಿನ ಪ್ರಕರಣಕ್ಕೆ ಇವತ್ತು ಯಾಕೆ ಜೀವ ಕೊಟ್ಟಿದ್ದೀರಿ?: ಎಸ್.ಸುರೇಶ್ ಕುಮಾರ್

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ಕಾಂಗ್ರೆಸ್ ಸರಕಾರದ ಶ್ರೀರಾಮವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಅಭಿಯಾನದಡಿ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಇಂದು ಮಲ್ಲೇಶ್ವರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.

ಅಯೋಧ್ಯೆ ಅಭಿಯಾನದ ಘಟನಾವಳಿಗಳಿಗೆ ನಾನು ಕೂಡ ಸಾಕ್ಷಿಯಾಗಿದ್ದೆ. ಇದೀಗ ಸರಕಾರವು ಕರಸೇವಕರನ್ನು ಬಂಧಿಸುತ್ತಿದೆ. ಇದನ್ನು ವಿರೋಧಿಸಿ ನಾನು ಪ್ರತಿಭಟನೆಗೆ ಬಂದಿದ್ದೇನೆ ಎಂದು ಎಸ್.ಸುರೇಶ್ ಕುಮಾರ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಮಂದಿರ ವಹೀ ಬನಾಯೇಂಗೇ ಎಂಬುದು ನಮ್ಮ ಘೋಷವಾಕ್ಯವಾಗಿತ್ತು. ಇವತ್ತು ಮಂದಿರವಲ್ಲೇ ಕಟ್ಟಿದೆವು ಎಂಬ ಕಾಲಕ್ಕೆ ಬಂದಿದ್ದೇವೆ. ಜನವರಿ 22ರಂದು ಮಂದಿರದ ಉದ್ಘಾಟನೆ ಹಾಗೂ ಶ್ರೀರಾಮಲಲಾನ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಸಹಜವಾಗಿ ಇಲ್ಲಿನ ಕಾಂಗ್ರೆಸ್ ಸರಕಾರಕ್ಕೆ ಇದನ್ನು ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಟೀಕಿಸಿದರು.

30 ವರ್ಷಗಳ ಹಿಂದಿನ ಕೇಸನ್ನು ರೀ ಓಪನ್ ಮಾಡಿ ಕರಸೇವಕರನ್ನು ಸರಕಾರ ಬಂಧಿಸುತ್ತಿದೆ. ಈಗ ಬಂಧಿಸುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು. ಈಗಿನದು ಬಿಜೆಪಿ ಶ್ರೀರಾಮ ಎಂದು ಕಾಂಗ್ರೆಸ್‍ನವರು ಹೇಳುತ್ತಾರೆ. ಹಾಗಿದ್ದರೆ ಡಿಸೆಂಬರ್ 6ಕ್ಕೆ ಮೊದಲು ಇದ್ದುದು ಕಾಂಗ್ರೆಸ್ ಮಸೀದಿಯೇ ಎಂದು ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರವಾಗಿ ಕೇಳಿದರು.

ಹರಿಪ್ರಸಾದ್ ಅವರ ಹೇಳಿಕೆಯು ಅವರ ಕೆಳಮಟ್ಟದ ಮನಸ್ಥಿತಿಯನ್ನು ತೋರಿಸುತ್ತದೆ. ಹಿಂದೆ ನರೇಂದ್ರ ಮೋದಿಯವರಿಗೆ ಬೈದದ್ದು ಗೊತ್ತಿದೆ ಎಂದು ಈ ಸಂಬಂಧ ಪ್ರಶ್ನೆಗೆ ಉತ್ತರ ಕೊಟ್ಟರು. ಇವತ್ತು ಯಾರನ್ನಾದರೂ ಕ್ರಿಮಿನಲ್ ಎನ್ನಲು ಕಾಂಗ್ರೆಸ್ಸಿಗರು ಸಿದ್ಧರಾಗಿದ್ದಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. 30 ವರ್ಷಗಳಷ್ಟು ಹಿಂದಿನ ಪ್ರಕರಣಕ್ಕೆ ಇವತ್ತು ಯಾಕೆ ಜೀವ ಕೊಟ್ಟಿದ್ದೀರಿ? ಅವರು ಕರಸೇವಕ ಎಂಬ ಕಾರಣಕ್ಕೇ ರೀಓಪನ್ ಮಾಡಿದ್ದಾಗಿ ನಮ್ಮ ಬಲವಾದ ನಂಬಿಕೆ ಎಂದು ತಿಳಿಸಿದರು. ಮಾಜಿ ಸಚಿವ ರಾಮಚಂದ್ರ ಗೌಡ ಅವರು ಉಪಸ್ಥಿತರಿದ್ದರು. ಸ್ಥಳದಲ್ಲಿದ್ದ ಕಾರ್ಯಕರ್ತರು ಇದೇವೇಳೆ ಜೈ ಶ್ರೀರಾಮ್, ಜೈಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು.

30 ವರ್ಷಗಳಷ್ಟು ಹಿಂದಿನ ಪ್ರಕರಣಕ್ಕೆ ಇವತ್ತು ಯಾಕೆ ಜೀವ ಕೊಟ್ಟಿದ್ದೀರಿ?: ಎಸ್.ಸುರೇಶ್ ಕುಮಾರ್ Why did you give life to a 30-year-old case today?
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

2 Mins Read

UGCET-2026: ಕೆಇಎಯಿಂದ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ; ಇಂದಿನಿಂದಲೇ ಆಪ್ಷನ್ ಎಂಟ್ರಿ ಆರಂಭ

2 Mins Read

ರಾಜ್ಯಾಧ್ಯಕ್ಷರ ವಾದ ಸರಿಲ್ಲ, ಜನ ಸಂಘಟನೆ ಪೂರಕವಾಗಿಲ್ಲ: ಬಿವೈವಿ ವಿರುದ್ಧ ಕುಮಾರ್ ಬಂಗಾರಪ್ಪ ಕಿಡಿ!

2 Mins Read
Recent News

​ದೆಹಲಿಯಲ್ಲಿ ವಿದ್ಯಾರ್ಥಿಗಳ ಭಾರಿ ಆಕ್ರೋಶ: ‘ಗೋ ಪ್ರಧಾನ್ ಗೋ’ ಘೋಷಣೆ, ತಟ್ಟೆ-ಚಮಚ ಬಡಿಯುತ್ತಾ ಕೇಂದ್ರ ಸಚಿವರ ರಾಜೀನಾಮೆಗೆ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ!

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

​ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ: ಅಭಿಷೇಕ್ ಬ್ಯಾನರ್ಜಿ ಹತ್ಯೆಗೆ ಸಂಚು? ಬಂದೂಕುಧಾರಿ ಪತ್ತೆ !

​ಜಾಗತಿಕ ವೇದಿಕೆಯಲ್ಲಿ ಭಾರತದ ಕೀರ್ತಿ ಪತಾಕೆ: ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಇನ್ನು ಮುಂದೆ ಪ್ರತಿ ವರ್ಷ ‘ದಿಲ್ಜಿತ್ ದೋಸಾಂಜ್ ಡೇ’ ಸಂಭ್ರಮ!

State News
KARNATAKA

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ವಿದ್ಯುತ್ ಕಂಪನಿಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ನೀತಿಯನ್ನು ಖಂಡಿಸಿ ಶನಿವಾರ ವಿದ್ಯುತ್ ಖಾಸಗೀಕರಣ ವಿರೋಧಿ ಹೋರಾಟ ಸಮಿತಿ ವತಿಯಿಂದ ನಗರದಲ್ಲಿ…

UGCET-2026: ಕೆಇಎಯಿಂದ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ; ಇಂದಿನಿಂದಲೇ ಆಪ್ಷನ್ ಎಂಟ್ರಿ ಆರಂಭ

ರಾಜ್ಯಾಧ್ಯಕ್ಷರ ವಾದ ಸರಿಲ್ಲ, ಜನ ಸಂಘಟನೆ ಪೂರಕವಾಗಿಲ್ಲ: ಬಿವೈವಿ ವಿರುದ್ಧ ಕುಮಾರ್ ಬಂಗಾರಪ್ಪ ಕಿಡಿ!

ಸಾಗರದಲ್ಲಿ ‘ವಿದ್ಯುತ್ ವಿತರಣೆ ಪರವಾನಗಿ’ ಖಾಸಗಿಯವರಿಗೆ ನೀಡದಂತೆ ಎಸಿ ಮೂಲಕ ಸರ್ಕಾರಕ್ಕೆ ‘ಕನ್ನಡ ಸೇನೆ’ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.