ಬೆಂಗಳೂರು: ಚಿಲುಮೆ ಸಂಸ್ಥೆಯ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ರೂವಾರಿಗಳು ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ? ಇಷ್ಟು ದಿನವಾದರೂ ಈ ಅಕ್ರಮ ಸಂಸ್ಥೆಯ ಹಣಕಾಸಿನ ವಹಿವಾಟಿನ ಮೇಲೆ ಈ ಸಂಸ್ಥೆಗೆ ಹಣ ನೀಡಿದವರ ಮೇಲೆ ಯಾಕೆ ಸಿಬಿಐ, ಐಟಿ, ಇಡಿ ದಾಳಿ ನಡೆಸಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
BIGG NEWS: ಹಿಂದುಗಳ ಗುರುತಿನಲ್ಲಿ ಸ್ಫೋಟ ನಡೆಸಲು ಪ್ಲ್ಯಾನ್ : ಸಿ.ಟಿ ರವಿ
ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಖಾಸಗಿ ಸಂಸ್ಥೆ ಚಿಲುಮೆಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ವಹಿಸಿದ್ದರ ಹಿಂದೆ ಬಿಬಿಎಂಪಿ ಮತ್ತು ಚುನಾವಣಾ ಆಯೋಗದ ಅಧಿಕಾರಿಗಳೂ ಇದ್ದಾರೆ. ಚುನಾವಣಾ ಆಯೋಗಕ್ಕೆ ಈ ಕುರಿತು ಮೊದಲೇ ಮಾಹಿತಿ ಇತ್ತು. ಚುನಾವಣಾ ಆಯೋಗದವರು ಬಿಬಿಎಂಪಿಗೆ ಈ ಕುರಿತು ಪತ್ರಗಳನ್ನೂ ಬರೆದಿದ್ದರು.ಆದರೂ ಆಯೋಗಕ್ಕೂ ಕೇರ್ ಮಾಡದೇ ಚಿಲುಮೆ ಸಂಸ್ಥೆಯ ಅಕ್ರಮ ಹೆಚ್ಚಾಗುತ್ತಾ ಹೋಗಿದೆ. ಹಾಗಾಗಿ ಚುನಾವಣಾ ಆಯೋಗ ಈ ಅಕ್ರಮಕ್ಕೆ ಮೌನ ಸಮ್ಮತಿ ನೀಡಿದೆಯೆ? ಸುಪ್ರೀಂ ಕೋರ್ಟ್ ಚುನಾವಣಾ ಆಯೋಗದ ಮೇಲೆ ಮಾಡಿರುವ ವಿಮರ್ಶೆಗಳು ಸರಿಯಾಗಿವೆ ಅಲ್ಲವೆ? ಎಂದು ಪ್ರಶ್ನಿಸಿದ್ದಾರೆ.
BIGG NEWS: ಹಿಂದುಗಳ ಗುರುತಿನಲ್ಲಿ ಸ್ಫೋಟ ನಡೆಸಲು ಪ್ಲ್ಯಾನ್ : ಸಿ.ಟಿ ರವಿ
ಹೊಂಗಸಂದ್ರದ ಬಿಜೆಪಿಯ ಕಚೇರಿಯಲ್ಲಿ ಹಾಲಿ ಶಾಸಕರು ಹಾಗೂ ವಿಧಾನಸಭೆಯ ಮುಖ್ಯ ಸಚೇತಕ ಸತೀಶ್ರೆಡ್ಡಿ ನೇತೃತ್ವದಲ್ಲಿಯೇ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸುವ ಕುರಿತು ತರಬೇತಿ ನೀಡಲಾಗಿದೆ. ಪರಿಷ್ಕರಣೆ ಕಾರ್ಯಕ್ಕಾಗಿಯೆ 25,000 ದಿಂದ 30,000 ರೂಪಾಯಿಗಳನ್ನು ನೀಡಿ ನೇಮಕಾತಿ ಮಾಡಲಾಗಿದೆ ಎಂದರು.