ನಾವು ಹಣ ಕೊಡ್ತೀವಿ ಎಂದರೂ ಕೇಂದ್ರ ಅಕ್ಕಿ ಏಕೆ ಕೊಡಲಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ವಿಧಾನಸಭೆಯಲ್ಲಿ ಉತ್ತರ ನೀಡುವ ವೇಳೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಜನರ ಪರವಾಗಿ, ರಾಜ್ಯದ ಪಾಲಿನ ಹಕ್ಕನ್ನು ಪಡೆದುಕೊಳ್ಳಲು ನಡೆಸಿದ ಪ್ರಯತ್ನಗಳನ್ನೆಲ್ಲಾ ಸದನಕ್ಕೆ ವಿವರಿಸಿದರು. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿಯವರು ಕೇಂದ್ರದ ಜತೆ ಸಂಘರ್ಷಕ್ಕೆ ಇಳಿಯಬಾರದು ಎಂದಿದ್ದಾರೆ. ಆದರೆ ನಾವು ಸಂಘರ್ಷಕ್ಕೆ ಇಳಿದಿಲ್ಲ. ರಾಜ್ಯದ ಪಾಲಿನ ಸಂವಿಧಾನಬದ್ದ ಹಕ್ಕನ್ನು, ಅನುದಾನವನ್ನು ಕೇಳುವುದು ಸಂಘರ್ಷ ಆಗುವುದಿಲ್ಲ, ನಾವು ಕೇಂದ್ರ ಸರ್ಕಾರವು ನೀಡುವ ಅಕ್ಕಿಗೆ, ನಿಗದಿತ ಹಣವನ್ನು ಪಾವತಿ ಮಾಡುತ್ತೇವೆ ಎಂದು ತಿಳಿಸಿದರೂ ಸಹ ಕೇಂದ್ರ … Continue reading ನಾವು ಹಣ ಕೊಡ್ತೀವಿ ಎಂದರೂ ಕೇಂದ್ರ ಅಕ್ಕಿ ಏಕೆ ಕೊಡಲಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ