Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿರುದ್ಯೋಗಿ ಯುವಕರಿಗೆ ನಿತಿನ್ ಗಡ್ಕರಿ ಗುಡ್ ನ್ಯೂಸ್: ದೇಶಾದ್ಯಂತ ಹೊಸ ಚಾಲನಾ ತರಬೇತಿ ಕೇಂದ್ರಗಳ ಸ್ಥಾಪನೆ

26/03/2026 7:48 PM

ವಂದೇ ಭಾರತ್ ರೈಲಿನ ಊಟದಲ್ಲಿ ಹುಳು ಪತ್ತೆ: ಐಆರ್‌ಸಿಟಿಸಿಗೆ ಬರೋಬ್ಬರಿ 10 ಲಕ್ಷ ದಂಡ!

26/03/2026 7:46 PM

ದೇಶಾದ್ಯಂತ ‘ಡ್ರೈವಿಂಗ್ ಸ್ಕೂಲ್‌’ ಮೂಲಕ 1 ಕೋಟಿ ಯುವಕರಿಗೆ ಉದ್ಯೋಗ: ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ!

26/03/2026 7:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿಗಣತಿ ವಿರೋಧಿಸಿದ ಬಿಜೆಪಿ, ಈಗ ‘ಮರು ಸಮೀಕ್ಷೆ’ ವಿರೋಧಿಸುತ್ತಿರುವುದೇಕೆ?: ಡಿಸಿಎಂ ಡಿಕೆಶಿ ಪ್ರಶ್ನೆ
KARNATAKA

ಜಾತಿಗಣತಿ ವಿರೋಧಿಸಿದ ಬಿಜೆಪಿ, ಈಗ ‘ಮರು ಸಮೀಕ್ಷೆ’ ವಿರೋಧಿಸುತ್ತಿರುವುದೇಕೆ?: ಡಿಸಿಎಂ ಡಿಕೆಶಿ ಪ್ರಶ್ನೆ

By kannadanewsnow0911/06/2025 4:21 PM

ನವದೆಹಲಿ: “ಜಾತಿಗಣತಿ ವಿರೋಧಿಸಿದ ಬಿಜೆಪಿ, ಈಗ ಗೊಂದಲ ನಿವಾರಿಸುವ ಸರ್ಕಾರದ ತೀರ್ಮಾನವನ್ನು ವಿರೋಧಿಸುತ್ತಿರುವುದೇಕೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಜಾತಿ ಗಣತಿ ವಿಚಾರವಾಗಿ ಮರು ಸಮೀಕ್ಷೆಗೆ ಮುಂದಾಗಿರುವ ಬಗ್ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಜಾತಿ ಗಣತಿ ವರದಿ ವಿರೋಧ ಮಾಡಿದವರು ಅವರಲ್ಲವೇ? ಅವರು ಜಾತಿಗಣತಿ ವರದಿ ಸ್ವೀಕಾರ ಮಾಡಲಿಲ್ಲ ಯಾಕೆ? ಈ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿಲ್ಲ. ಈ ವರದಿಯಲ್ಲಿ ಯಾರ ಅಂಕಿ ಅಂಶಗಳು ಬಿಟ್ಟುಹೋಗಿವೆ ಅವರ ಮಾಹಿತಿಯನ್ನು ಸೇರಿಸಲು ಅವಕಾಶ ನೀಡಲಾಗುವುದು. ಈಗಾಗಲೇ ನೀಡಿರುವ ವರದಿಯನ್ನು ನಾವು ಬಳಸಿಕೊಳ್ಳುತ್ತೇವೆ. ಸಮಾಜಗಳಿಗೆ ನ್ಯಾಯ ಒದಗಿಸಬೇಕು, ಗೊಂದಲಗಳನ್ನು ಬಗೆಹರಿಸಲು ನಾವು ಮುಂದಾಗಿದ್ದೇವೆ” ಎಂದು ತಿಳಿಸಿದರು.

ಈ ಬಾರಿ ವೈಜ್ಞಾನಿಕವಾಗಿ ಮಾಡಲಾಗುವುದೇ ಎಂದು ಕೇಳಿದಾಗ, “ನಾವು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಜೈನ, ಲಂಬಾಣಿ, ಬೆಸ್ತ ಸೇರಿದಂತೆ ಅನೇಕ ಸಮಾಜದ ಜನರು ನನ್ನನ್ನು ಭೇಟಿ ಮಾಡಿ ಆತಂಕ ವ್ಯಕ್ತಪಡಿಸಿದ್ದರು. ನಮ್ಮ ಶಾಸಕರುಗಳು ಅವರ ಅಭಿಪ್ರಾಯ ತಿಳಿಸಿದ್ದರು. ಈ ಹಿಂದೆಯೂ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಲಾಗಿತ್ತು. ಮನೆ ಮನೆಗೆ ಹೋಗಿ ನಮ್ಮ ಅಧಿಕಾರಿಗಳು ಸಮೀಕ್ಷೆ ಮಾಡಿ ಚೀಟಿಯನ್ನು ಅಂಟಿಸಿದ್ದರು. ಅವರು ಮಾಡಿದ್ದು ವೈಜ್ಞಾನಿಕವಲ್ಲವೇ? ಕಳೆದ ಬಾರಿ ಅನೇಕರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸದೇ ತಮ್ಮ ಸಮುದಾಯವನ್ನು ಹೇಳಿಕೊಳ್ಳಲು ಹಿಂಜರಿದರು. ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರವಾಗಿ ಹತ್ತಾರು ಬಾರಿ ಜಾಹೀರಾತು ನೀಡಲಾಗಿದೆ. ಅಧಿಕಾರಿಗಳು ಹಲವು ಬಾರಿ ಮನೆಗೆ ಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ್ದಾರೆ. ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೊರರಾಜ್ಯದಲ್ಲಿ ಇರುವವರು ತಮ್ಮ ಮಾಹಿತಿ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಲಾಗಿದೆ. ನಮ್ಮ ಪಕ್ಷದ ಅಧ್ಯಕ್ಷರು ತಂದೆ ಸ್ಥಾನದಲ್ಲಿ ನಿಂತು ಕೆಲವು ಮಾರ್ಗದರ್ಶನ ನೀಡಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಯಾವ ರೀತಿ ಮಾಡಬೇಕು ಎಂದು ಚರ್ಚೆ ಮಾಡುತ್ತಾರೆ. ಈ ಪ್ರಕ್ರಿಯೆಯಲ್ಲಿ 1 ಲಕ್ಷ ಜನರನ್ನು ಒಳಗೊಳ್ಳಬೇಕಾಗುತ್ತದೆ” ಎಂದು ತಿಳಿಸಿದರು.

ಜಾತಿ ಗಣತಿ ವಿಚಾರದಲ್ಲಿ ಪ್ರಬಲ ಜಾತಿಗಳ ಒತ್ತಡಕ್ಕೆ ಮಣಿಯಲಾಗಿದೆ ಎಂದು ಕೇಳಿದಾಗ, “ನಾವು ಎಲ್ಲರ ಒತ್ತಡಕ್ಕೂ ಮಣಿದಿದ್ದೇವೆ. ನಾವು ಮಾಧ್ಯಮಗಳ ಒತ್ತಡಕ್ಕೂ ಮಣಿಯುತ್ತೇವೆ” ಎಂದರು.

ತಮ್ಮ, ತಮ್ಮ ಸಮಾಜದವರು ಸರಿಯಾಗಿ ಮಾಹಿತಿ ಒದಗಿಸುವಂತೆ ಸ್ವಾಮೀಜಿಗಳು ಮಾಡಬೇಕು

ಸರ್ಕಾರದ ತೀರ್ಮಾನವನ್ನು ವೀರಶೈವ ಸಮಾಜ ಸ್ವಾಗತಿಸಿದೆ ಎಂದು ಕೇಳಿದಾಗ, “ವೀರಶೈವ, ಒಕ್ಕಲಿಗ ಸೇರಿದಂತೆ ಬೇರೆ ಸಮಾಜಗಳ ಸ್ವಾಮೀಜಿಗಳು ನನಗೆ ಕರೆ ಮಾಡಿ ಈ ತೀರ್ಮಾನವನ್ನು ಸ್ವಾಗತಿಸಿದ್ದಾರೆ. ಎಲ್ಲಾ ಸಮಾಜಗಳ ಸ್ವಾಮೀಜಿಗಳು ತಮ್ಮ ಸಮುದಾಯದವರಿಗೆ ತಿಳುವಳಿಕೆ ನೀಡಿ ಈ ಸಮೀಕ್ಷೆಯಲ್ಲಿ ಭಾಗಿಯಾಗುವಂತೆ ಮಾಡಬೇಕು. ಈ ಸಮೀಕ್ಷೆಯಲ್ಲಿ ಎಲ್ಲರೂ ತಮ್ಮ ಸಮುದಾಯದ ಬಗ್ಗೆ ಸರಿಯಾಗಿ ವಿವರ ನೀಡಬೇಕು” ಎಂದು ಕರೆ ನೀಡಿದರು.

ಜಾತಿ ಗಣತಿ ವಿಚಾರದಲ್ಲಿ ಹೈಕಮಾಂಡ್ ಮಟ್ಟದಲ್ಲಿ ಡಿ.ಕೆ. ಶಿವಕುಮಾರ್ ಅವರು ಮೇಲುಗೈ ಸಾಧಿಸಿದರೇ ಎಂದು ಕೇಳಿದಾಗ, “ಇದರಲ್ಲಿ ಯಾರ ಕೈ ಮೇಲಾಗುವ ವಿಚಾರವಿಲ್ಲ” ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಜನಗಣತಿ ಜತೆ ಜಾತಿಗಣತಿ ಮಾಡುವಾಗ ರಾಜ್ಯ ಸರ್ಕಾರ ಮಾಡುವ ಅಗತ್ಯವಿದೆಯೇ ಎಂದು ಕೇಳಿದಾಗ, “ಇದು ನಮ್ಮ ಪಕ್ಷದ ರಾಜಕೀಯ ಅಜೆಂಡಾ. ಇದನ್ನು ಬಿಜೆಪಿಯವರು ಕಾಪಿ ಮಾಡಿದ್ದಾರೆ. ಜಾತಿಗಣತಿ ಮಾಡಿ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗಬೇಕು ಎಂದು ರಾಹುಲ್ ಗಾಂಧಿ ಅವರು ಪ್ರತಿಪಾದಿಸಿದ್ದಾರೆ” ಎಂದು ತಿಳಿಸಿದರು.

ವಾಲ್ಮೀಕಿ ನಿಗಮ ಅಕ್ರಮಕ್ಕೂ ನಮ್ಮ ಶಾಸಕರು, ಸಂಸದರಿಗೂ ಸಂಬಂಧವಿಲ್ಲ

ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರು ಹಾಗೂ ಸಂಸದರ ಮನೆ ಮೇಲೆ ಇಡಿ ದಾಳಿ ವಿಚಾರವಾಗಿ ಕೇಳಿದಾಗ, “ಈ ವಾಲ್ಮೀಕಿ ಹಗರಣಕ್ಕೂ ನಮ್ಮ ಶಾಸಕರಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಮ್ಮ ಮುಖಂಡರು ಯಾವುದೇ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿಲ್ಲ. ಅಧಿಕಾರಿಗಳು ದುರ್ಬಳಕೆ ಮಾಡಿದ್ದ ಶೇ.90 ರಷ್ಟು ಹಣವನ್ನು ಮತ್ತೆ ವಶಕ್ಕೆ ಪಡೆಯಲಾಗಿದೆ” ಎಂದು ತಿಳಿಸಿದರು.

ಜು.1ರಿಂದ ‘ತತ್ಕಾಲ್ ರೈಲು ಟಿಕೆಟ್ ಬುಕ್ಕಿಂಗ್’ಗೆ ‘ಆಧಾರ್ ದೃಢೀಕರಣ’ ಕಡ್ಡಾಯ: ಹೀಗಿದೆ ಹೊಸ ನಿಯಮಗಳು | Tatkal ticket booking rules

ಕೋವಿಡ್-19 ಉಲ್ಬಣ: ಪ್ರಧಾನಿ ಮೋದಿ ಭೇಟಿ ಮಾಡುವ ಮೊದಲು ಸಚಿವರಿಗೆ RT-PCR ಪರೀಕ್ಷೆ ಕಡ್ಡಾಯ:

Share. Facebook Twitter LinkedIn WhatsApp Email

Related Posts

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ನೋಟಿಸ್!

26/03/2026 7:34 PM1 Min Read

ALERT : ಯೋನಿ ಸೋಂಕಿಗೆ ಕೇವಲ ಅಶುಚಿಯಷ್ಟೇ ಕಾರಣವಲ್ಲ : ಮಹಿಳೆಯರು ತಿಳಿದುಕೊಳ್ಳಲೇಬೇಕು ಈ 12 ಅಂಶಗಳು !

26/03/2026 7:32 PM2 Mins Read

ದಾವಣಗೆರೆ ವಿಧಾನಸಭಾ ಉಪಚುನಾವಣೆ: 11 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್, ಖುದ್ದು ತಪಾಸಣೆಗೆ ಇಳಿದ ಡಿಸಿ

26/03/2026 7:30 PM1 Min Read
Recent News

ನಿರುದ್ಯೋಗಿ ಯುವಕರಿಗೆ ನಿತಿನ್ ಗಡ್ಕರಿ ಗುಡ್ ನ್ಯೂಸ್: ದೇಶಾದ್ಯಂತ ಹೊಸ ಚಾಲನಾ ತರಬೇತಿ ಕೇಂದ್ರಗಳ ಸ್ಥಾಪನೆ

26/03/2026 7:48 PM

ವಂದೇ ಭಾರತ್ ರೈಲಿನ ಊಟದಲ್ಲಿ ಹುಳು ಪತ್ತೆ: ಐಆರ್‌ಸಿಟಿಸಿಗೆ ಬರೋಬ್ಬರಿ 10 ಲಕ್ಷ ದಂಡ!

26/03/2026 7:46 PM

ದೇಶಾದ್ಯಂತ ‘ಡ್ರೈವಿಂಗ್ ಸ್ಕೂಲ್‌’ ಮೂಲಕ 1 ಕೋಟಿ ಯುವಕರಿಗೆ ಉದ್ಯೋಗ: ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ!

26/03/2026 7:44 PM

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ನೋಟಿಸ್!

26/03/2026 7:34 PM
State News
KARNATAKA

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ನೋಟಿಸ್!

By kannadanewsnow0926/03/2026 7:34 PM KARNATAKA 1 Min Read

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಗುರುವಾರ ನೋಟಿಸ್…

ALERT : ಯೋನಿ ಸೋಂಕಿಗೆ ಕೇವಲ ಅಶುಚಿಯಷ್ಟೇ ಕಾರಣವಲ್ಲ : ಮಹಿಳೆಯರು ತಿಳಿದುಕೊಳ್ಳಲೇಬೇಕು ಈ 12 ಅಂಶಗಳು !

26/03/2026 7:32 PM

ದಾವಣಗೆರೆ ವಿಧಾನಸಭಾ ಉಪಚುನಾವಣೆ: 11 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್, ಖುದ್ದು ತಪಾಸಣೆಗೆ ಇಳಿದ ಡಿಸಿ

26/03/2026 7:30 PM

ನೀವು ಖರ್ಚು ಮಾಡಿದ 1 ರೂಪಾಯಿ ಕೂಡ ನಿಮಗೆ 1000 ರೂಪಾಯಿಗಳನ್ನು ಹಿಂತಿರುಗಿ ಬರಲು ಹೀಗೆ ಮಾಡಿ.!

26/03/2026 6:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.