Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸರ್ಕಾರಿ ಉದ್ಯೋಗಗಳ ನೇಮಕಾತಿ ಪ್ರಕ್ರಿಯೆ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Government Jobs Recruitment

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಬಕಾರಿ ಸಚಿವರನ್ನು ರಾಜ್ಯ ಸರಕಾರ ರಕ್ಷಿಸುತ್ತಿರುವುದೇಕೆ?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
KARNATAKA

ಅಬಕಾರಿ ಸಚಿವರನ್ನು ರಾಜ್ಯ ಸರಕಾರ ರಕ್ಷಿಸುತ್ತಿರುವುದೇಕೆ?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಬಿಡಿಎ ವಿಷಯದಲ್ಲಿ ಬಿ.ಎಸ್.ವೈ ಪ್ರಾಸಿಕ್ಯೂಶನ್‍ಗೆ ಕೇಳಿದ್ದೀರಿ. ನಿನ್ನೆ ಸಂಪುಟದಲ್ಲಿ ತೀರ್ಮಾನ ಮಾಡಿದ್ದೀರಿ. ಈ ಕೇಸು ಖುಲಾಸೆ ಆಗಿದೆ. ಆದರೂ ನೀವೇನು ಮಾಡಲು ಹೊರಟಿದ್ದೀರಿ? ಇದು ಬಿಜೆಪಿ ನಾಯಕರ ವಿರುದ್ಧದ ಷಡ್ಯಂತ್ರ ಮತ್ತು ಹಗೆತನದ ರಾಜಕೀಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದರು.

ವಿಧಾನಸೌಧದ ಕೊಠಡಿ ಸಂಖ್ಯೆ 155 ರಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಸರಕಾರದ ಅಬಕಾರಿ ಸಚಿವರ ವಿರುದ್ಧ ಆರೋಪಗಳಿವೆ. ವಿಡಿಯೋಗಳು, ಆಡಿಯೋಗಳೂ ಬಂದಿವೆ. ನೀವೇನು ಮಾಡಿದ್ದೀರಿ? ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ್ದೀರಿ. ಸಂಘಟನೆಗಳು 700 ಕೋಟಿ ಲಂಚ ಸಂಗ್ರಹ ಸಂಬಂಧ ಸಚಿವ ತಿಮ್ಮಾಪುರ ಅವರ ವಿರುದ್ಧ ಆಪಾದನೆ ಮಾಡಿವೆ. 700 ಕೋಟಿ ಲಂಚದ ಹಗರಣ ಇದ್ದರೂ ಕೂಡ ನೀವು ಅವರನ್ನು ರಕ್ಷಿಸುತ್ತೀರಿ. ಅಮಾನತಾದ ಅಧಿಕಾರಿಗಳು ಯಾರ ಏಜೆಂಟರು ಎಂದು ತಿಳಿಸಲು ಆಗ್ರಹಿಸಿದರು.

ಅವರು ಸಚಿವರ ಏಜೆಂಟರೇ? ಅಥವಾ ಮುಖ್ಯಮಂತ್ರಿಗಳ ಏಜೆಂಟರಾಗಿದ್ದರೇ? ಅವರ ತಲೆದಂಡ ಮಾತ್ರ ಯಾಕೆ? ಸಚಿವರ ತಲೆದಂಡ ಯಾಕಾಗಬಾರದು ಎಂದು ಪ್ರಶ್ನೆಗಳನ್ನು ಮುಂದಿಟ್ಟರು. ಅವರನ್ನು ಸರಕಾರ ಯಾಕೆ ರಕ್ಷಣೆ ಮಾಡುತ್ತಿದೆ ಎಂದು ಕೇಳಿದರು.

ಮುಡಾ ಹಗರಣ ನಡೆದಿದೆ. ನಿಮ್ಮ ಮೇಲೆ ಎಫ್‍ಐಆರ್ ಆಗಿದೆ; ತನಿಖೆ ನಡೆಯುತ್ತಿದೆ. ಆದರೂ ಏನೂ ನಡೆದಿಲ್ಲ ಎಂಬಂತೆ ನೀವಿದ್ದೀರಿ. ನೀವು ರಾಜೀನಾಮೆ ಕೊಟ್ಟಿಲ್ಲ; ಬೇರೆಯವರನ್ನು ಹೇಗೆ ಬಂಧಿಸಲು ನೋಡುತ್ತೀರಿ? ಎಫ್‍ಐಆರ್ ಆದೊಡನೆ ಬಂಧಿಸುತ್ತೀರಿ; ನ್ಯಾಯಾಲಯದ ಮುಂದೆ ಹಾಜರುಪಡಿಸಿ ಜೈಲಿಗೆ ಹಾಕುತ್ತೀರಲ್ಲವೇ? ನಿಮಗೊಂದು ನ್ಯಾಯ, ಇತರರಿಗೆ ಬೇರೆ ನ್ಯಾಯ ಇದೆಯೇ? ನೀವ್ಯಾಕೆ ರಾಜೀನಾಮೆ ಕೊಟ್ಟಿಲ್ಲ? ಕೂಡಲೇ ರಾಜೀನಾಮೆ ಕೊಡಿ. ಯಾಕೆ ಸುಮ್ಮನಿದ್ದೀರಿ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು.

ಒಂದು ವಿಶ್ವವಿದ್ಯಾಲಯದ ಕುಲಾಧಿಪತಿ ಸ್ಥಾನಕ್ಕೆ ಮುಖ್ಯಮಂತ್ರಿಗಳು ಗೌರವಾನ್ವಿತ ರಾಜ್ಯಪಾಲರಿಗೆ ಕೊಕ್ ಕೊಟ್ಟಿದ್ದಾರೆ. ಮುಖ್ಯಮಂತ್ರಿಗಳೇ, ನೀವು ಸರ್ವಾಧಿಕಾರಿ ಧೋರಣೆ ಮಾಡಲು ಹೊರಟಿದ್ದೀರಾ ಎಂದು ಪ್ರಶ್ನಿಸಿದರು. ನಿಮ್ಮ ಮೇಲೆ ಭ್ರಷ್ಟಾಚಾರದ ಹಲವಾರು ಆರೋಪಗಳಿವೆ. ಕುಲಾಧಿಪತಿ ಸ್ಥಾನಕ್ಕೆ ಗವರ್ನರ್ ಯೋಗ್ಯರೆಂದು ಸಾಂವಿಧಾನಿಕ ಹುದ್ದೆಯಾಗಿ ಕೊಡಲಾಗಿತ್ತು. ಈಗ ಅದನ್ನು ವಾಪಸ್ ಪಡೆಯುವ ಮೂಲಕ ಕುಲಾಧಿಪತಿ ಆಗಲು ಹೊರಟಿದ್ದೀರಿ. ಭ್ರಷ್ಟಾಚಾರದಿಂದ ನಿಮ್ಮ ಸರಕಾರ ಕುಲಗೆಟ್ಟಿದ್ದು, ಕುಲಾಧಿಪತಿ ಸ್ಥಾನಕ್ಕೆ ಮುಖ್ಯಮಂತ್ರಿ ಯೋಗ್ಯರೇ ಎಂದು ಕೇಳಿದರು.

ಸಂವಿಧಾನವನ್ನೇ ಸರ್ವನಾಶ ಮಾಡಿದ್ದರು..

ಸಂವಿಧಾನ ತೆಗೆಯುತ್ತಾರೆಂದು ಮುಖ್ಯಮಂತ್ರಿ, ಪಡ್ಡೆ ಹುಡುಗ ಪ್ರಿಯಾಂಕ್ ಖರ್ಗೆ ಸೇರಿ ಕಾಂಗ್ರೆಸ್ಸಿಗರು ಹೇಳುತ್ತಾರೆ. ನಮ್ಮಿಂದ ಸಂವಿಧಾನದ ವಿರುದ್ಧ ಪ್ರಯತ್ನ ಆಗಿತ್ತೇ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಕೇಳಿದರು.

ನಿಮ್ಮ ಕಾಲದಲ್ಲಿ ಆಗಿದೆ. 1975-76ರಲ್ಲಿ 2 ವರ್ಷ ಸಂವಿಧಾನವನ್ನು ಅಮಾನತಿನಲ್ಲಿ ಇಡಲಾಗಿತ್ತು. ಕುರ್ಚಿ ಉಳಿಸಿಕೊಳ್ಳಲು ಇಂದಿರಾ ಗಾಂಧಿಯವರು ಕಾಂಗ್ರೆಸ್ಸೇ ದೇಶವೆಂದು ತಿಳಿದುಕೊಂಡು ಸಂವಿಧಾನವನ್ನೇ ಸರ್ವನಾಶ ಮಾಡಿದ್ದರು ಎಂದು ಟೀಕಿಸಿದರು.

ಜಮೀರ್ ಅಹ್ಮದ್ ಆಡಿದ್ದೇ ಮಾತು; ಅವರ ಮೇಲೆ ಯಾಕೆ ಕೇಸು ಹಾಕಿಲ್ಲ ಎಂದು ಕೇಳಿದರು. ತುಮಕೂರಿನ ಶಕುಂತಲಾ ನಟರಾಜ್ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುದಕ್ಕೆ 7 ದಿನಗಳ ನೋಟಿಸ್ ಕೊಟ್ಟು ರಾತ್ರೋರಾತ್ರಿ ಬಂಧಿಸಿ ಕರೆತಂದಿದ್ದರು. ಹಾಗಿದ್ದರೆ 7 ದಿನ ಅವಕಾಶ ಕೊಟ್ಟಿದ್ದೇಕೆ? ಅವರನ್ನು ರೌಡಿಶೀಟರ್ ಮಾಡಬಾರದೇಕೆ ಎಂದು ಕೇಳಿದ್ದಾಗಿ ವಿವರಿಸಿದರು. ನಿಮ್ಮ ಸುತ್ತಲಿರುವ ಸಚಿವರು ರೌಡಿಗಳಿಗಿಂತ ಹೆಚ್ಚಾಗಿ ಮಾತನಾಡುತ್ತಾರೆ. ಅವರ ಮೇಲೂ ರೌಡಿಶೀಟರ್ ಹಾಕಿ ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು. ಆ ಹೆಣ್ಮಗಳ ಮೇಲಿನ ಕೇಸು ವಾಪಸ್ ಪಡೆಯಲು ಆಗ್ರಹಿಸಿದರು.

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಹಿಂಸಾಚಾರ ಮಿತಿ ಮೀರಿದ್ದನ್ನು ತಾವೆಲ್ಲರೂ ಗಮನಿಸಿದ್ದೀರಿ. ಕೇಂದ್ರದಲ್ಲಿರುವ ಮೋದಿಜೀ ಅವರ ಸರಕಾರವು ಈಗಾಗಲೇ ಆ ರೀತಿ ಹಿಂದುಗಳಿಗೆ ಹಿಂಸೆ ಮಾಡಬಾರದು ಮತ್ತು ಬಂಧಿತ ಸನ್ಯಾಸಿ ಚಿನ್ಮಯಿ ಕೃಷ್ಣದಾಸ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದೆÉ. ಇಸ್ಕಾನ್ ನಿಷೇಧ ಪ್ರಸ್ತಾಪವನ್ನು ಬಾಂಗ್ಲಾದ ಕೋರ್ಟ್ ತಿರಸ್ಕರಿಸಿದೆ. ಅದನ್ನು ನಾನು ಸ್ವಾಗತಿಸುತ್ತೇನೆ ಎಂದರು.

ಈ ವಿಷಯದಲ್ಲಿ ರಾಹುಲ್ ಗಾಂಧಿ, ಕರ್ನಾಟಕದ ಕಾಂಗ್ರೆಸ್ ಸರಕಾರದ ನಿಲುವನ್ನು ಸ್ಪಷ್ಟಪಡಿಸಲು ಅವರು ಒತ್ತಾಯಿಸಿದರು. ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸದೆ ಇರುವ ಇಲ್ಲಿನ ಸರಕಾರ ಹಿಂದೂ ವಿರೋಧಿ ಎಂದು ಆರೋಪಿಸಿದರು. ಮುಖ್ಯಮಂತ್ರಿಗಳು ತಕ್ಷಣವೇ ಹೇಳಿಕೆ ಕೊಟ್ಟು ಕೇಂದ್ರದ ನಿಲುವನ್ನು ಬೆಂಬಲಿಸಲಿ ಎಂದು ಆಗ್ರಹಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಏನಾಗಿದೆ? ಯಾಕೆ ತಟಸ್ಥವಾಗಿದ್ದೀರಿ ಎಂದ ಅವರು, ಕಾಂಗ್ರೆಸ್ಸಿಗರ ತುಷ್ಟೀಕರಣದ ನಡೆಯಿಂದ ರಾಜ್ಯದಲ್ಲಿ ಬಾಂಗ್ಲಾ ಮತ್ತು ಪಾಕಿಸ್ತಾನದ ಕವಲುಗಳು ಒಡೆಯುತ್ತಿರುವುದನ್ನು ಗಮನಿಸಿದ್ದೇವೆ ಎಂದು ಟೀಕಿಸಿದರು. ಇಂಥ ಘಟನೆಯ ಪ್ರಚೋದನೆ ಉಂಟಾಗದಂತೆ ಕೇಂದ್ರ ಸರಕಾರ ಕಾರ್ಯೋನ್ಮುಖವಾಗಬೇಕು ಮತ್ತು ರಾಜ್ಯಗಳು ಇದಕ್ಕೆ ಮಮತಾ ಬ್ಯಾನರ್ಜಿಯವರ ಮಾದರಿಯಲ್ಲಿ ಬೆಂಬಲ ಕೊಡಬೇಕೆಂದು ಮನವಿ ಮಾಡಿದರು.

BREAKING NEWS: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಭೇಟಿ ನೀಡುವುದಿಲ್ಲ: MEA ಸ್ಪಷ್ಟನೆ

ದಿನೇಶ್ ಗುಂಡೂರಾವ್ ವಜಾ ಮಾಡಿ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹ

Share. Facebook Twitter LinkedIn WhatsApp Email

Related Posts

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

1 Min Read

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

1 Min Read

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

1 Min Read
Recent News

BIG NEWS : ಸರ್ಕಾರಿ ಉದ್ಯೋಗಗಳ ನೇಮಕಾತಿ ಪ್ರಕ್ರಿಯೆ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Government Jobs Recruitment

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

State News
KARNATAKA

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು : ಇಂಧನ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ನೇಮಕ ಹಾಗೂ ಖಾತೆ ಹಂಚಿಕೆ ಕುರಿತು ಅಸಮಾಧಾನ ಇಲ್ಲ ಎಂದಿರುವ ಇಂಧನ…

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.