ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮತ್ತೆ ಚರ್ಚೆ ಆರಂಭವಾಗಿದ್ದು, ಸಿದ್ದರಾಮಯ್ಯ ಪುತ್ರ ಯತೀಂದ್ರ ಸದ್ಯಕ್ಕೆ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳಿಕೆ ನೀಡುತ್ತಿದ್ದಾರೆ. ಮತ್ತೊಂದು ಕಡೆ ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಆಪ್ತರೊಂದಿಗೆ ಡಿನ್ನರ್ ಮೀಟಿಂಗ್ ನಡೆಸಿದರು. ಇಂದು ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರೊಂದಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದರು. ಇದರ ಮಧ್ಯ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಡಿಕೆ ಶಿವಕುಮಾರ್ ಸಿಎಂ ಯಾಕೆ ಆಗಬಾರದು ಎಂದು ಡಿಕೆಶಿ ಪರವಾಗಿ ಬ್ಯಾಟಿಂಗ್ ಬೀಸಿದ್ದಾರೆ.
ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ ಟಿ ಸೋಮಶೇಖರ್, ಡಿಸಿಎಂ ಡಿಕೆ ಶಿವಕುಮಾರ್, ಯಾಕೆ ಸಿಎಂ ಆಗಬಾರದು? ಡಿಕೆ ಶಿವಕುಮಾರ್ ಪಕ್ಷ ಕಟ್ಟಿಲ್ವಾ,? ಪಕ್ಷ ಗೋಸ್ಕರ ಶ್ರಮಪಟ್ಟಿಲ್ವಾ? ಶ್ರಮಕ್ಕೆ ಅವರು ಕೂಲಿ ಕೇಳುತ್ತಿದ್ದಾರೆ. ನನ್ನ ಹಣೆಯಲ್ಲಿ ಬಿಜೆಪಿಗೆ ಹೋಗಿ ಮಂತ್ರಿ ಆಗಬೇಕು ಅಂದು ಇತ್ತು. ಅದೇ ರೀತಿ ಡಿಕೆ ಶಿವಕುಮಾರ್ ಹಣೆಯಲ್ಲಿ ಬರೆದಿದ್ದರೆ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಡಿಕೆ ಶಿವಕುಮಾರ್ ಯಾಕೆ ಬಿಜೆಪಿಗೆ ಹೋಗಿ ಸಿಎಂ ಆಗುತ್ತಾರೆ? ಎಂದು ಎಸ್ ಟಿ ಸೋಮಶೇಖರ್ ತಿಳಿಸಿದರು.








