BIGG NEWS: ಶಿವಮೊಗ್ಗದಲ್ಲಿ ವ್ಯಾಪಕ ಮಳೆ; ಲಿಂಗನಮಕ್ಕಿ ಡ್ಯಾಂ ನಲ್ಲಿ ಹೆಚ್ಚಿದ ನೀರು; ಜನರಿಗೆ ಅಲರ್ಟ್‌

ಶಿವಮೊಗ್ಗ: ಜಿಲ್ಲೆಯ ಸಾಗರ ಮತ್ತು ಸೊರಬ ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದರಿಂದಾಗಿ ಲಿಂಗನಮಕ್ಕಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ. ಡ್ಯಾಂನಲ್ಲಿ ನೀರಿನ ಮಟ್ಟವು ಏರಿಕೆಯಾಗಿದೆ. BIGG NEWS: ಚಿಕ್ಕಮಗಳೂರಿನಲ್ಲಿ ನಿಲ್ಲದ ವರುಣನ ಆರ್ಭಟ; ಕಳಸಾ ಗ್ರಾಮದ ಅಲ್ಲಲ್ಲಿ ಗುಡ್ಡ ಕುಸಿತ   ಈ ನಡುವೆ ಕರ್ನಾಟಕ ವಿದ್ಯುತ್‌ ನಿಗಮದ ವತಿಯಿಂದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಲಿಂಗನಮಕ್ಕಿ ಜಲಾಶಯದ ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ಜಲಾಶಯ 30,397 ಕ್ಯೂಸೆಕ್‌ ನೀರು ಬಿಡಲಾಗಿದೆ.