ಬೆಂಗಳೂರು : ವಿಶೇಷ ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಹಿಂದೂ ವಿವಾಹ ಕಾಯ್ದೆಯಡಿಯೂ ಪತ್ನಿ ಜೀವನಾಂಶ ಪಡೆಯಬಹುದು, ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ ಎಂದು ಮಹತ್ವದ ಆದೇಶ ಹೊರಡಿಸಿದೆ.
ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಪತಿಯಿಂದ ಸ್ವೀಕಾರ ಕಾಯ್ದೆ ಅಥವಾ ಅಪರಾಧ ದಂಡ ಪ್ರಕ್ರಿಯ ಜೀವನಾಂಶ ಪಡೆಯುತ್ತಿರುವ ಪತ್ನಿ ಹಿಂದು ವಿವಾಹ ಸಂಹಿತೆ (ಸಿಆರ್ಪಿಸಿ) ಸೆಕ್ಷನ್ 125ರ ಅನ್ವಯ ಜೀವನಾಂಶ ಪಡೆಯಬಹುದಾಗಿದೆ ಎಂದು ಆದೇಶ ಹೊರಡಿಸಿದೆ.
ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವ್ಯಕ್ತಿಯೊಬ್ಬರು ಜೀವನಾಂಶದ ಪ್ರಮಾಣವನ್ನು ಹೊಂದಾಣಿಕೆ ಸಲ್ಲಿಸಿದ್ದ ಅರ್ಜಿ ವಿಚಾರಣಿ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ, ಯಾವುದೇ ಲೋಪ ಕಂಡುಬರುತ್ತಿಲ್ಲ ಎಂದು ತಿಳಿಸಿ ಪತಿಯ ಅರ್ಜಿ ವಜಾಗೊಳಿಸಿದೆ.
ಮದುವೆಯಾದ ಪತಿ ಹಾಗೂ ಪತ್ನಿಯ ನಡುವೆ ಎರಡೇ ವರ್ಷಕ್ಕೆ ಬಿರುಕು ಮೂಡಿತ್ತು. ನಂತರ ಪತಿ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಪತ್ನಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದರು. ಮೂಡಬಿದಿರೆ ಸಿವಿಲ್ ಮತ್ತು ಜೆಎಂಎಫ್ಸಿಯಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದ ಪತ್ನಿ, ಜೀವನಾಂಶ ನೀಡಲು ಪತಿಗೆ ನಿರ್ದೇಶಿಸುವಂತೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್, ಮಾಸಿಕ 20 ಸಾವಿರ ರೂ. ಜೀವನಾಂಶ ಪಾವತಿಸಲು ಪತಿಗೆ ಆದೇಶಿಸಿತ್ತು. ಇದನ್ನು ಪಶ್ನಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ದಕ್ಷಿಣ ಕನ್ನಡದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು. ಪತಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನಂತರ ಅಲ್ಲೂ ಕೂಡ ಪತಿ ಅರ್ಜಿ ವಜಾಗೊಂಡಿದ್ದು, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
BIGG NEWS : ರಾಜ್ಯದ ಯುವ ಜನತೆಗೆ ಭರ್ಜರಿ ಗುಡ್ ನ್ಯೂಸ್ : ‘ಯುವ ನೀತಿ’ಗೆ ಸಂಪುಟ ಅಸ್ತು, ಪ್ರತ್ಯೇಕ ಬಜೆಟ್ ಘೋಷಣೆ